CHITRADURGA NEWS | 29 APRIL 2025
ಚಿತ್ರದುರ್ಗ: ರೋಟರಿ ಕ್ಲಬ್ ಚಿತ್ರದುರ್ಗದಲ್ಲಿ ಪ್ರಾರಂಭವಾಗಿ 60 ವರ್ಷ ತುಂಬಿದ ಸಂದರ್ಭದಲ್ಲಿ ಜಿಲ್ಲೆಯ ಜನತೆಗೆ ಒಂದು ವಿಶಿಷ್ಟ ಕೊಡುಗೆ ನೀಡುವ ಉದ್ದೇಶದಿಂದ ರೋಟರಿ ಕ್ಲಬ್ ಆಫ್ ಚಿತ್ರದುರ್ಗ ನಗರದಲ್ಲಿ ಹತ್ತು ಹಾಸಿಗೆಗಳ ಡಯಾಲಿಸಿಸ್ ಕೇಂದ್ರ, ಕೌಶಲ್ಯಾಭಿವೃದ್ಧಿ, ಪಿಸಿಯೋಥೆರಪಿ ಸೆಂಟರ್, ಲ್ಯಾಬೋರೇಟರಿ ಸ್ಥಾಪನೆ ಮಾಡಲಾಗಿದೆ ಎಂದು ರೋಟರಿ ಟ್ರಸ್ಟ್ ಕಾರ್ಯದರ್ಶಿ ಕೆ.ಮಧುಪ್ರಸಾದ್ ತಿಳಿಸಿದರು.
Also Read: ಅಸುರಕ್ಷಿತ ಲೈಂಗಿಕತೆಯು ಮಹಿಳೆಯರಲ್ಲಿ ಸಿಫಿಲಿಸ್‍ಗೆ ಕಾರಣವಾಗಬಹುದು ಎಚ್ಚರ
ನಗರದ ಎಸ್.ಆರ್.ಬಿ.ಎಂ.ಎಸ್ ಭಾಲಭವನದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು,
ಸೆಲ್ಕೋ ಫೌಂಡೇಶನ್ ಸೋಲಾರ್ ಪ್ಯಾನಲ್‍ಗಳು, ಬ್ಯಾಟರಿಗಳು ಮತ್ತು ಅಗತ್ಯ ಉಪಕರಣಗಳನ್ನು ಅಳವಡಿಸಿರುವ ಸೌರಶಕ್ತಿಯ ಮೇಲೆ ಇಡೀ ಕಟ್ಟಡವು ನಿರ್ಮಾಣ ಮಾಡಲಾಗಿದೆ.
ಸೆಲ್ಕೋ ಫೌಂಡೇಶನ್‍ನಿಂದ ಬೆಂಬಲಿತವಾದ 22 ಕಿಲೋ ವ್ಯಾಟ್ ಸೋಲಾರ್ ವ್ಯವಸ್ಥೆಯನ್ನು ಈಗಾಗಲೇ ರೂ 30 ಲಕ್ಷ ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಆಸ್ಪತ್ರೆಗೆ ದಿನಕ್ಕೆ 50 ರಿಂದ 60 ಯೂನಿಟ್ ವಿದ್ಯುತ್ ಅಗತ್ಯವಿದ್ದು, ಸಂಪೂರ್ಣ ಆಸ್ಪತ್ರೆ ಸೌರಶಕ್ತಿಯಿಂದ ನಡೆಯುತ್ತದೆ.

ಇದರ ಸಂಪೂರ್ಣ ವೆಚ್ಚವನ್ನು ರೋಟರಿ ಕ್ಲಬ್ ಸದಸ್ಯರು ಭರಿಸುತ್ತಿದ್ದಾರೆ. ಬಡ ಮತ್ತು ನಿರ್ಗತಿಕ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಅವರ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತದೆ. ಶುಲ್ಕಗಳು ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದರು.
ಆಶಾಕಿರಣ ಡಯಾಲಿಸಿಸ್ ಸೆಂಟರ್, ಶ್ರೀ ಕನ್ಯಕಾಪರಮೇಶ್ವರಿ ಸೌಹಾರ್ದ ಸಹಕಾರಿ ಕೌಶಲ್ಯಾಭಿವೃದ್ಧಿ ಕೇಂದ್ರ, ನಿರ್ಮಲಾ ಕೀರ್ತಿಕುಮಾರ್ ಪಿಸಿಯೋಥೆರಪಿ ಸೆಂಟರ್, ಲ್ಯಾಬೋರೇಟರಿ, ಕ್ಲಿನಿಕ್ ಹಾಗೂ ಫಾರ್ಮಸಿ ಸೌಲಭ್ಯವನ್ನು ಹೊಂದಿದೆ.
ಕೈಗಾರಿಕೋದ್ಯಮಿಗಳಾದ ಪ್ರವೀಣ ಚಂದ್ರರವರು ತಿಂಗಳು 200 ಡಯಾಲಿಸಿಸ್‍ಗಳನ್ನು ಉಚಿತವಾಗಿ ಪ್ರಾಯೋಜಿಸಿದ್ದಾರೆ. ಡಯಾಲಿಸಿಸ್ ಕೇಂದ್ರದ ಅನುಕೂಲಕ್ಕಾಗಿ ಹವಾನಿಯಂತ್ರಣ ಸೌಲಭ್ಯವನ್ನು ಒದಗಿಸಲಾಗಿದೆ.
ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಶಿರಸಿಯ ಯುವಜಯ ಪೌಂಡೇಷನ್‍ನ ಸಹಯೋಗ ಪಡೆದಿದ್ದು, ಇದರಲ್ಲಿ ಬಿ.ಎ.ಬಿಕಾಂ, ಬಿಎಸ್ಸಿ ಪದವೀಧರರಿಗೆ 2-3 ತಿಂಗಳ ತರಬೇತಿಯನ್ನು ಸಂವಹನ ಕಲೆ. ಟೀಮ್ ವರ್ಕ್ ಇಂಗ್ಲಿಷ್ ಸಂಭಾಷಣೆ ನೀಡಿ ಅವರಿಗೆ ಉದ್ಯೋಗ ಕೊಡಿಸುವ ಪ್ರಯತ್ನ ಮಾಡಲಾಗುವುದು.
Also Read: ಒಣದ್ರಾಕ್ಷಿ ನೀರನ್ನು ಇವರು ಯಾರು ಸೇವಿಸಬಾರದು?
ಈಗಾಗಲೇ ಶಿರಸಿಯ ಯುವಜಯ ಫೌಂಡೇಷನ್ ಕಾರ್ಯ ನಿರ್ವಹಿಸುತ್ತಿದ್ದು, ಸುಮಾರು 50ಕ್ಕೂ ಹೆಚ್ಚು ಕಂಪನಿಗಳ ಜೊತೆ ಸಂಪರ್ಕವನ್ನು ಹೊಂದಿದೆ. ಇದರಿಂದ ಚಿತ್ರದುರ್ಗ ಜಿಲ್ಲೆಯ ಯುವಕ ಯುವತಿಯರಿಗೆ ಅನುಕೂಲವಾಗಲಿದೆ. ಡಯಾಲಿಸಿಸ್ ಕೇಂದ್ರದ ಉಪಕರಣಗಳಿಗಾಗಿ ರೋಟರಿ ಪೌಂಡೇಷನ್‍ನಿಂದ 1 ಕೋಟಿ ಹನ್ನೆರಡು ಲಕ್ಷ ರೂಪಾಯಿಗಳ ಗ್ರಾಂಟ್‍ನ್ನು ಪಡೆಯಲಾಗಿದೆ.
ಈ ಎಲ್ಲಾ ಸೌಲಭ್ಯಗಳ ನಿರ್ಮಾಣದಲ್ಲಿ ಹಲವಾರು ಸಂಘ ಸಂಸ್ಥೆಗಳ ಸಹಾಯ, ಸಹಯೋಗ ಪಡೆಯಲಾಗಿದ್ದು. ಸೌಲಭ್ಯಗಳನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಹಾಗೂ ಉಚಿತವಾಗಿ ನೀಡಲು ಉದ್ದೇಶಿಸಿಲಾಗಿದೆ.
ಏ.30 ರಂದು ಅಕ್ಷಯ ತೃತೀಯದ ಶುಭ ದಿನದಂದು ಉದ್ಘಾಟನೆಯಾಗಲಿದೆ ಎಂದರು.
ರೋಟರಿ ಟ್ರಸ್ಟ್ ಅಧ್ಯಕ್ಷ ಪಿ.ಎಸ್ ಶಂಭುಲಿಂಗಪ್ಪ ಮಾತನಾಡಿ, ಏ.30 ರಂದು ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಗವರ್ನರ್ ಡಾ.ಸಾಧು ಗೋಪಾಲ ಕೃಷ್ಣ ಉದ್ಘಾಟ ಮಾಡಲಿದ್ದಾರೆ.
Also Read: ದ್ವಿತೀಯ PUC ಮರು ಮೌಲ್ಯಮಾಪನ | ಚೈತನ್ಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ
ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಸಂಸದ ಗೋವಿಂದ ಕಾರಜೋಳ, ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ಆರ್. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಅರೋಗ್ಯ ಅಧಿಕಾರಿ ರೇಣುಪ್ರಸಾದ್, ರೋಟೇರಿಯನ್ ಪಿಡಿಜಿ ರವಿ ವಡ್ಲಮಣಿ, ಪಿಡಿಜಿ ಬಿ.ಚಿನ್ನಪ್ಪ ರೆಡ್ಡಿ, ಡಿಇಜಿ ರವೀಂದ್ರ, ಪಿಡಿಜಿ ರಮೇಶ್ ವಂಗಲ ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ರೋಟರಿ ಕ್ಲಬ್‍ನ ಅಧ್ಯಕ್ಷ ಜಿ.ಎನ್ ವೀರಣ್ಣ, ಎಸ್,ವೀರೇಶ್, ಕೆ.ಎಸ್.ಚಂದ್ರಮೋಹನ್, ಜಯಶ್ರೀ ಷಾ, ತರುಣ್ ಷಾ, ಮೂರ್ತಿ, ವೆಂಕಟೇಶ್, ವಿಶ್ವನಾಥ್, ಸೂರ್ಯನಾರಾಯಣ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
