
CHITRADURGA NEWS | 19 NOVEMBER 2025
ಚಿತ್ರದುರ್ಗ: ಚಿತ್ರದುರ್ಗ ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಗ್ರಾಮಿಣ ಭಾಗದ ಯುವಕ ಹಾಗೂ ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು ಇದೇ ನ.20 ರಿಂದ 30 ದಿನಗಳ ಕಾಲ ಮಹಿಳೆಯರ ಟೈಲರಿಂಗ್ ತರಬೇತಿ, ಮೊಬೈಲ್ ರಿಪೇರಿ ತರಬೇತಿ ಹಾಗೂ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್‍ಸೆಟ್ ರಿಪೇರಿ ತರಬೇತಿ ಆಯೋಜಿಸಲಾಗಿದೆ.
ಇದನ್ನೂ ಓದಿ: ನೆಟ್‍ಬಾಲ್ ಪಂದ್ಯಾವಳಿ | ಹೊನ್ನಾಳಿ SMS ಪ್ರಥಮ ದರ್ಜೆ ಕಾಲೇಜು ಪ್ರಥಮ
ಅಭ್ಯರ್ಥಿಗಳು 19 ರಿಂದ 45 ವರ್ಷಗಳ ವಯೋಮಿತಿಯೊಳಗಿರಬೇಕು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು. ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಕೌಶಲ್ಯ ಕುರಿತು ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಈ ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಸ್ವ-ವಿಳಾಸದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ಇದೇ ನ.20 ರಂದು ರುಡ್‍ಸೆಟ್ ಸಂಸ್ಥೆಯಲ್ಲಿ ನೇರವಾಗಿ ತರಬೇತಿಯಲ್ಲಿ ಭಾಗವಹಿಸಬಹುದು.
ಇದನ್ನೂ ಓದಿ: ಜೆಡಿಎಸ್ ಪಕ್ಷಕ್ಕೆ 25 ವರ್ಷ | ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಮಾವೇಶ | ಜಿಲ್ಲಾಧ್ಯಕ್ಷ ಎಂ.ಜಯ್ಯಣ್ಣ
ಹೆಚ್ಚಿನ ಮಾಹಿತಿಗಾಗಿ ಸಂಸ್ಥಯ ದೂರವಾಣಿ ಸಂಖ್ಯೆ 8618282445, 9481778047, 9019299901 ಹಾಗೂ 8660627785 ಗೆ ಕರೆ ಮಾಡುವಂತೆ ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ಕೊರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
