CHITRADURGA NEWS | 19 DECEMBER 2025
ಚಿತ್ರದುರ್ಗ: ದುರ್ಗ ರನ್ನರ್ಸ್ ಸಂಸ್ಥೆ ವತಿಯಿಂದ ರನ್ ದುರ್ಗ ರನ್ ಸ್ಪರ್ಧೆಯನ್ನು ಡಿ.21 ರಂದು ಚಿತ್ರದುರ್ಗ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಚೇತನ್ ಬಾಬು ತಿಳಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರನ್ ಸ್ಪರ್ಧೆಯಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳಿಗಾಗಿ 4 ವಿಭಾಗದಲ್ಲಿ ಸ್ಪರ್ಧೆ ನಡೆಸಲಾಗುತ್ತಿದೆ.
10, 5, 3 ಕಿ.ಮೀ ದೂರವನ್ನು ನಿಗದಿ ಮಾಡಲಾಗಿದ್ದು, ಇದರಲ್ಲಿ ವಿಜೇತರಾದವರಿಗೆ ಬಹುಮಾನವನ್ನು 3 ಹಂತದಲ್ಲಿ ನೀಡಲಾಗುತ್ತದೆ. ಈ ಸ್ಪರ್ಧೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ನೆರೆ ರಾಜ್ಯ ಮಹಾರಾಷ್ಟ್ರದಿಂದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.
ಬೆಳಗ್ಗೆ 6 ಗಂಟೆಯಿಂದ ಪ್ರಾರಂಭವಾಗುವ ಸ್ಪರ್ಧೆಗಳು 12 ಗಂಟೆಗೆ ಮುಕ್ತಾಯ ಆಗಲಿದೆ. ಕ್ರೀಡೆಯಲ್ಲಿ ಭಾಗವಹಿಸುವವರಿಗೆ ಟೀ ಶರ್ಟ್, ಪದಕ, ಪ್ರಮಾಣ ಪತ್ರ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಪೋಟೋಗಳನ್ನು ನೀಡಲಾಗುವುದು.
ಇದನ್ನೂ ಓದಿ: ಹೊಳಲ್ಕೆರೆ | ಶಿಕ್ಷಕರು ಮತ್ತು ಆಯಾ ಹುದ್ದೆಗೆ ಅರ್ಜಿ ಅಹ್ವಾನ
1 ಸಾವಿರ ಜನ ಭಾಗವಹಿಸಲು ಅವಕಾಶ ಕಲ್ಪಿಸಿದ್ದು, ಈಗಾಗಲೇ 950 ಜನ ಕ್ರೀಡಾಪಟುಗಳು ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದಾರೆ.
ಕ್ರೀಡಾಕೂಟವನ್ನು ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಸಂಯೋಜಕರಾದ ವಿ.ಎಲ್.ಪ್ರಶಾಂತ್ ಮಾತನಾಡಿ, ಅಂದು ನಗರದ ಒನಕೆ ಓಬವ್ವ ಕ್ರೀಡಾಂಗಣದಿಂದ ಓಟ ಪ್ರಾರಂಭವಾಗಲಿದೆ ನಂತರ ಅಲ್ಲಿಯೇ ಮುಕ್ತಾಯವಾಗಲಿದೆ. ಇದು ಪ್ರಥಮ ಬಾರಿಗೆ ಚಿತ್ರದುರ್ಗದಲ್ಲಿ ಆಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 19 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
ಇದರಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಇದರಲ್ಲಿ ವಿಶೇಷವಾಗಿ ಮಹಿಳೆಯರು ಸೀರೆಯನ್ನುಟ್ಟು ಓಟ ಮತ್ತು ನಡಿಗೆಯನ್ನು ಮಾಡಲಿದ್ದಾರೆ. ಇದು ಪ್ರಥಮವಾಗಿದೆ, ಬರೀ ಮನೆಯಲ್ಲಿ ಇರುವವರಿಗೆ ಇದೊಂದು ಉತ್ತಮವಾದ ಅವಕಾಶವಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸುಷ್ಮಾ, ವಿಕ್ರಮ್, ಮಹೇಶ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________


