
CHITRADURGA NEWS | 01 JULY 2026
ಚಿತ್ರದುರ್ಗ: ನಗರದ ಹೊರವಲಯದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಆಯೋಜಿಸಿದ್ದ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಈಶಾ ಫೌಂಡೇಶನ್ ಸಂಸ್ಥಾಪಕರಾದ ಶ್ರೀ ಸದ್ಗುರು ಜಗ್ಗಿ ವಾಸುದೇವ್ ಅವರು ಭಾಗವಹಿಸಿದ್ದರು.
ಇದನ್ನೂ ಓದಿ: DOCTORS DAY | ವೈದ್ಯರಂತೆ ಪೋಸು ಕೊಟ್ಟ ಪುಟಾಣಿಗಳು
ಈ ವೇಳೆ ಸದ್ಗುರು ಉಪನ್ಯಾಸ ನೀಡಿ, ಜಗತ್ತಿನಲ್ಲಿ ಕೇವಲ ಸಮಾಜ, ರಾಷ್ಟ್ರ ಅಥವಾ ವಿಶ್ವ ಎಂಬುದು ಸ್ವತಂತ್ರವಾಗಿ ಅಸ್ತಿತ್ವದಲ್ಲಿಲ್ಲ. ನೀವೊಬ್ಬರು, ನಾನೊಬ್ಬರು ಸೇರಿದರೆ ಮಾತ್ರ ಇಲ್ಲಿ ಸಮಾಜ ನಿರ್ಮಾಣವಾಗುತ್ತದೆ. ವ್ಯಕ್ತಿಗತವಾಗಿ ನಮ್ಮಲ್ಲಿ ಪ್ರೀತಿ, ಕರುಣೆ ಹಾಗೂ ಅರಿವು ಮೂಡಿದಾಗ ಮಾತ್ರ ಜಗತ್ತಿನಲ್ಲಿ ಶಾಂತಿ ನೆಲೆಸಲು ಸಾಧ್ಯ ಅಭಿಪ್ರಾಯಪಟ್ಟಿರು.
ಕೇವಲ ವೇದಿಕೆಗಳ ಮೇಲೆ, ಬೀದಿಗಳಲ್ಲಿ ‘ವಿಶ್ವ ಶಾಂತಿ’ ಎಂದು ಘೋಷಣೆ ಕೂಗುವುದರಿಂದ ಜಗತ್ತು ಬದಲಾಗುವುದಿಲ್ಲ. ಸನ್ನಿವೇಶಗಳು ಹೇಗೆಯೇ ಇರಲಿ, ನಾವು ಪ್ರೀತಿಯಿಂದ, ನೆಮ್ಮದಿಯಿಂದ ಇರುವುದನ್ನು ಕಲಿಯಬೇಕು. ಈ ಪರಿವರ್ತನೆ ಇಂದಿನ ಯುವ ಪೀಳಿಗೆಯಲ್ಲಿ ಆರಂಭವಾಗಬೇಕಿದೆ.
ಯುವಕರೆಂದರೆ ಕೇವಲ ವಯಸ್ಸಿನ ಮಿತಿಯಲ್ಲ, ನಮ್ಮಲ್ಲಿ ಜೀವಂತಿಕೆ ಇರುವವರೆಗೂ ನಾವೆಲ್ಲರೂ ಯುವಕರೇ ಎಂದು ಸದ್ಗುರು ಕಿವಿಮಾತು ಹೇಳಿದರು.
ಇದನ್ನೂ ಓದಿ: ಸದ್ಗುರು ಜೊತೆ ಕಾರು ಚಲಾಯಿಸಿದ ಮಾದಾರ ಚನ್ನಯ್ಯ ಶ್ರೀ
ಮಾನವನು ಕೇವಲ ಪ್ರಾಣಿಜನ್ಯ ಪ್ರವೃತ್ತಿಗಳಿಂದ ಬದುಕುವ ಕೇವಲ ಜೀವಿ ಅಲ್ಲ. ಆತ ತಾನು ಹೇಗೆ ಬಾಳಬೇಕು ಎಂಬುದನ್ನು ಅರಿತಿರುವ ಅಸ್ತಿತ್ವದ ಸ್ವರೂಪ. ಪ್ರಾಣಿಗಳು ಕೇವಲ ಪ್ರಚೋದನೆಗಳಿಗೆ ಪ್ರತಿಕ್ರಿಯಿಸುತ್ತಾ ಪ್ರಕೃತಿಯ ಸಹಜ ಪ್ರವೃತ್ತಿಯಂತೆ ಬದುಕುತ್ತವೆ. ಆದರೆ ಮಾನವನಿಗೆ ಜೀವನದಲ್ಲಿ ಎದುರಾಗುವ ಯಾವುದೇ ಸನ್ನಿವೇಶದಲ್ಲೂ ತಾನು ಹೇಗೆ ಇರಬೇಕು ಎಂದು ನಿರ್ಧರಿಸುವ ಅದ್ಭುತ ಸಾಮಥ್ರ್ಯವಿದೆ.
ಜೀವ ವಿಕಾಸದ ಹಾದಿಯಲ್ಲಿ ಅನೇಕ ಹಂತಗಳನ್ನು ದಾಟಿ ನಾವಿಂದು ಅತ್ಯುನ್ನತ ಮಟ್ಟದ ಪ್ರಜ್ಞೆಯನ್ನು ಪಡೆದುಕೊಂಡಿದ್ದೇವೆ. ಆದರೆ ಇಂದಿನ ಆಧುನಿಕ ವಿಜ್ಞಾನ ಹಾಗೂ ಡಿಎನ್ಎ ಸಂಶೋಧನೆಗಳು ಹೇಳುವಂತೆ, ಮಾನವ ಮತ್ತು ಚಿಂಪಾಂಜಿಯ ಡಿಎನ್ಎ ರಚನೆಗಳ ನಡುವೆ ಕೇವಲ ಶೇ.1.23 ರಷ್ಟು ಮಾತ್ರ ವ್ಯತ್ಯಾಸವಿದೆ.
ಶಾರೀರಿಕವಾಗಿ ನಾವು ಚಿಂಪಾಂಜಿಗೆ ಅತ್ಯಂತ ಹತ್ತಿರವಾಗಿದ್ದರೂ, ಬುದ್ಧಿಶಕ್ತಿ ಹಾಗೂ ಜಾಗೃತಿಯಲ್ಲಿ ಜಗತ್ತಿನಲ್ಲಿಯೇ ಭಿನ್ನ ಹಾಗೂ ಉನ್ನತ ಸ್ಥಾನದಲ್ಲಿದ್ದೇವೆ. ಆದರೆ ಈ ಅದ್ಭುತ ಬುದ್ಧಿಶಕ್ತಿಯನ್ನು ನಾವಿಂದು ಹೇಗೆ ಬಳಸಿಕೊಳ್ಳುತ್ತಿದ್ದೇವೆ ಎಂಬುದು ಚಿಂತಿಸಬೇಕಾದ ವಿಷಯವಾಗಿದೆ ಎಂದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 01 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
ಆಧ್ಯಾತ್ಮ ಎಂದರೆ ಕೇವಲ ದೇವಸ್ಥಾನ, ಚರ್ಚ್ ಅಥವಾ ಮಸೀದಿಗಳಿಗೆ ಭೇಟಿ ನೀಡುವುದಲ್ಲ. ಕಲೆ, ಕ್ರೀಡೆ ಅಥವಾ ಯಾವುದೇ ಕೆಲಸದಲ್ಲಿ ನಮ್ಮನ್ನು ನಾವು ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದೇ ನಿಜವಾದ ಆಧ್ಯಾತ್ಮಿಕ ಪ್ರಕ್ರಿಯೆ. ಕಲೆ, ಸಂಗೀತ ಮತ್ತು ಕ್ರೀಡೆಗಳು ನಮ್ಮಿಂದ ಇಂತಹ ಪರಮಾವಧಿಯ ತೊಡಗಿಸಿಕೊಳ್ಳುವಿಕೆಯನ್ನು ಬೇಡುತ್ತವೆ. ಈ ಆಳವಾದ ತೊಡಗಿಸಿಕೊಳ್ಳುವಿಕೆಯೇ ಆಧ್ಯಾತ್ಮ ಎಂದು ಸ್ಪಷ್ಟಪಡಿಸಿದರು.
ಚಿತ್ರದುರ್ಗ ಜಿಲ್ಲೆಯು ಕರ್ನಾಟಕದ ಕೇಂದ್ರ ಭಾಗದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿಗಳು ಇಲ್ಲಿ ಹಾದು ಹೋಗುತ್ತವೆ. ಚಿಕ್ಕಬಳ್ಳಾಪುರದಲ್ಲಿ ಆದಿಯೋಗಿ ಸನ್ನಿಧಿ ನಿರ್ಮಾಣವಾಗಿರುವ ಮಾದರಿಯಲ್ಲೇ ಚಿತ್ರದುರ್ಗದಲ್ಲೂ ಭವ್ಯ ಆಧ್ಯಾತ್ಮಿಕ ಕೇಂದ್ರವೊಂದು ನಿರ್ಮಾಣವಾಗಬೇಕು ಎಂದು ಸ್ಥಳೀಯ ಭಕ್ತರು ಹಾಗೂ ಪೀಠದ ಅನುಯಾಯಿಗಳು ಸದ್ಗುರುಗಳಲ್ಲಿ ಆಶಯ ವ್ಯಕ್ತಪಡಿಸಿದರು.
ಆರಂಭದಲ್ಲಿ ಶಿವಶರಣ ಮಾದಾರ ಚನ್ನಯ್ಯನವರನ್ನು ಸ್ಮರಿಸುತ್ತಾ ಮಹಾಕಾಲ ಯೋಗೀಶ್ವರ ಎಂಬ ಶ್ಲೋಕವನ್ನು ಹಾಡುವ ಮೂಲಕ ಸದ್ಗುರುಗಳು ಸಭಿಕರನ್ನು ಮಂತ್ರಮುಗ್ಧಗೊಳಿಸಿದರು. ನಂತರ ತಮ್ಮದೇ ಆದ ವಿಶಿಷ್ಟ ಹಾಸ್ಯ ಹಾಗೂ ಆಳವಾದ ಆಧ್ಯಾತ್ಮಿಕ ಚಿಂತನೆಗಳ ಮೂಲಕ ನೆರೆದಿದ್ದವರ ಗಮನ ಸೆಳೆದರು.
ಇದನ್ನೂ ಓದಿ: SIR | ಜಿಲ್ಲೆಯಾದ್ಯಂತ 32,797 ಗಣತಿ ನಮೂನೆಗಳ ವಿತರಣೆ | ಡಿಸಿ
ಕಬೀರಾನಂದ ಮಠದ ಶಿವಲಿಂಗಾನಂದ ಸ್ವಾಮೀಜಿ, ಮುರುಘಾಮಠದ ಡಾ.ಬಸವಕುಮಾರ ಸ್ವಾಮೀಜಿ, ಅಥಣಿ ಶಿವಯೋಗಾಶ್ರಮದ ಶಿವಬಸವ ಸ್ವಾಮೀಜಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

