CHITRADURGA NEWS | 26 OCTOBER 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಪಿ.ರಘು ಅವರು ಅಕ್ಟೋಬರ್ 30 ರಿಂದ ನವೆಂಬರ್ 01 ರವರೆಗೆ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ: ನಾಳೆ ಮದಕರಿ ನಾಯಕ ಜಯಂತೋತ್ಸವ | ಮೈಸೂರು ದಸರಾದಲ್ಲಿ ಪ್ರಥಮ ಸ್ಥಾನ ಪಡೆದ ಸ್ಥಬ್ದಚಿತ್ರದ ಮೆರವಣಿಗೆ
ಅ.30ರಂದು ಮಧ್ಯಾಹ್ನ 3ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ 6ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.
ಅ.31ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಜಿಲ್ಲೆಯ ನಗರಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರು ಮತ್ತು ಇತರೆ ಸಂಸ್ಥೆಗಳ ಸ್ವಚ್ಛತಾ ಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ನಡೆಸುವರು.
ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು, ಪೌರ ಕಾರ್ಮಿಕರಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಇದನ್ನೂ ಓದಿ: ಪಿಂಜಾರ ಸಮುದಾಯಕ್ಕೆ ಶೀಘ್ರದಲ್ಲೇ ಮುಖ್ಯಮಂತ್ರಿ ಭೇಟಿ ಭರವಸೆ
ನವೆಂಬರ್ 01ರಂದು ಬೆಳಿಗ್ಗೆ 8.30ಕ್ಕೆ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸಂಶೋಧನಾಧಿಕಾರಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
