
CHITRADURGA NEWS | 15 FEBRUARY 2026
ಚಿತ್ರದುರ್ಗ: ಸಂತ ಸೇವಾಲಾಲ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಮಾನವಕುಲದ ಉದ್ದಾರಕ್ಕಾಗಿ ಶ್ರಮಿಸಿದ ಮಹಾನ್ ಚೇತನ. ಅವರ ತತ್ವಾದರ್ಶ ಇಂದಿನ ಮಕ್ಕಳಿಗೆ ತಿಳಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದು ಉಪವಿಭಾಗಾಧಿಕಾರಿ ಕಾಂತರಾಜ್ ಅಭಿಪ್ರಾಯಪಟ್ಟರು.
ಇದನ್ನೂ ಓದಿ: ದ್ವೇಷಕ್ಕೆ ಸುಟ್ಟು ಹೋಯ್ತು 22 ಲೋಡ್ ಮೆಕ್ಕೆಜೋಳ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ಜಯಂತಿಯಲ್ಲಿ ಅವರು ಮಾತನಾಡಿದರು.
ಸೇವಾಲಾಲ್ ಅವರು ಅಂದು ಲಂಬಾಣಿ ಸಮುದಾಯದಲ್ಲಿ ಮನೆಮಾಡಿದ್ದ ಮೂಢನಂಬಿಕೆಗಳನ್ನು ತೊಡೆದುಹಾಕಲು ಮತ್ತು ಶೈಕ್ಷಣಿಕವಾಗಿ ಮುಂದೆ ಬರಲು ಕರೆ ನೀಡಿದ್ದು. ಸೇವಾಲಾಲ್ ಅವರು ಕೇವಲ ಸಮಾಜ ಸುಧಾರಕರಷ್ಟೇ ಅಲ್ಲದೆ, ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆಯಲ್ಲಿ ಪರಿಣಿತರಾಗಿದ್ದರು. ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿರಬೇಕು ಮತ್ತು ಇತರ ಜೀವಿಗಳನ್ನು ಸಂರಕ್ಷಿಸಬೇಕು ಎಂಬ ಸಂದೇಶ ನೀಡಿದ್ದರು ಎಂದು ತಿಳಿಸಿದ ಅವರು, ಸೇವಾಲಾಲ್ ಹಾಕಿಕೊಟ್ಟ ಅಹಿಂಸೆ, ಸತ್ಯ ಮತ್ತು ಶಿಕ್ಷಣ ಮಾರ್ಗ ಇಂದಿನ ಪೀಳಿಗೆಗೆ ಅತ್ಯಂತ ಅವಶ್ಯಕವಾಗಿದೆ ಎಂದು ತಿಳಿಸಿದರು.
ಜಾಗತೀಕರಣ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದ ನಡುವೆಯೂ ಲಂಬಾಣಿ ಸಮುದಾಯದವರು ತಮ್ಮ ವಿಶಿಷ್ಟ ಉಡುಗೆ-ತೊಡುಗೆ, ಹಬ್ಬಗಳು ಮತ್ತು ಸಾಂಸ್ಕøತಿಕ ಪರಂಪರೆಯನ್ನು ಇಂದಿಗೂ ಉಳಿಸಿಕೊಂಡು ಬಂದಿರುವುದು ಹೆಮ್ಮೆಯ ವಿಷಯ ಎಂದರು.
ಇದನ್ನೂ ಓದಿ: ಕೆರೆಯಲ್ಲಿ ತೇಲಿ ಹೋದ ಸೀರೆ ಹಿಡಿಯಲು ಹೋದ ಮಕ್ಕಳ ದುರ್ಮರಣ
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಮಾತನಾಡಿ, ಸಂತ ಸೇವಾಲಾಲ್ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ರಾಜ್ಯ ಸರ್ಕಾರವು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ, ಹಕ್ಕು ಪತ್ರ ವಿತರಿಸುವ ಮೂಲಕ ಲಂಬಾಣಿ ಸಮಾಜದ ದಶಕಗಳ ಕನಸನ್ನು ನನಸು ಮಾಡಿದೆ. ಫೆ.14ರಂದು ಹಾವೇರಿಯಲ್ಲಿ ನಡೆದ ಸಮಾರಂಭದಲ್ಲಿ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದೆ. ಇದರಿಂದ ನಿವಾಸಿಗಳಿಗೆ ಸ್ವಂತ ಸರ್ವೆ ನಂಬರ್ ಹಾಗೂ ಹಕ್ಕುಪತ್ರಗಳು ದೊರೆಯಲಿವೆ ಎಂದು ತಿಳಿಸಿದ ಅವರು, ಸರ್ಕಾರ ಸ್ಥಾಪಿಸಿರುವ ತಾಂಡಾ ಅಭಿವೃದ್ಧಿ ನಿಗಮದ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಲು ಮುಖಂಡರು ಶ್ರಮಿಸಬೇಕು ಎಂದು ಹೇಳಿದರು.
ಅಖಿಲ ಕರ್ನಾಟಕ ಬಂಜಾರ (ಲಂಬಾಣಿ) ಗುರುಪೀಠದ ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ ಮಾತನಾಡಿ. ಸಂತ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯಕ್ಕೆ ಜ್ಞಾನ, ಅರಿವು ಮತ್ತು ಆಶ್ರಯ ನೀಡಿದ ಮಹಾನ್ ಗುರುಗಳಾಗಿದ್ದಾರೆ. ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನುಟಿ ಗೆದ್ದವರೇ ನಿಜವಾದ ಸಂತ ಎಂದು ಹೇಳಿದರು.
ಇದನ್ನೂ ಓದಿ: ರಾತ್ರಿ ಮೊಬೈಲ್, ಟಿವಿ ಆಫ್ ಮಾಡಿ | ಶಾಲಾ ಮಕ್ಕಳ ಜಾಥಾ
ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ ಜಿಲ್ಲಾಧ್ಯಕ್ಷ ಗಿರೀಶ್ ನಾಯ್ಕ್ ಆರ್, ವಿಶೇಷ ಉಪನ್ಯಾಸ ನೀಡಿ, ಸಂತ ಸೇವಾಲಾಲ್ ಅವರು ಬುಡಕಟ್ಟು ಜನರಲ್ಲಿ ಧೈರ್ಯ ಸಾಹಸ, ಆತ್ಮಸ್ಥೈರ್ಯ ಮತ್ತು ಆತ್ಮಭಿಮಾನ ಮೂಡಿಸಿದರು. ಅವರ ಬೋಧನೆ ಮತ್ತು ಚಿಂತನೆಗಳು ಬಂಜಾರ ಜನಾಂಗದಲ್ಲಿ ಏಕತೆ ಉಂಟುಮಾಡಿರುವುದು. ಜನರಲ್ಲಿನ ಮೌಢ್ಯತೆ ತೊಲಗಿಸಿ ಅವರ ಬದುಕನ್ನು ಉದ್ಧರಿಸಿದ ಕಾಲಜ್ಞಾನಿ. ಇಂದು ಬಂಜಾರರು ಸಾಂಸ್ಕøತಿಕ ನೆಲೆಯಲ್ಲಿ ತಮ್ಮ ಅಸ್ಮಿತೆಯನ್ನು ಗುರುತಿಕೊಳ್ಳಲು ಈ ಮಹಾನುಭವರ ಸತ್ಕಾರ್ಯಗಳೇ ಕಾರಣ ಎಂದ ಹೇಳಿದರು.
ಸಮುದಾಯದ ಜನರು ಮೂಢನಂಬಿಕೆಗಳನ್ನು ತೊರೆದು, ಅಜ್ಞಾನದಿಂದ ಹೊರಬಂದು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಬೋಧಿಸಿದರು. ಶಿಕ್ಷಣದಿಂದ ಜ್ಞಾನಸಂಪಾದಿಸಿ, ಶಿಕ್ಷಣವಿದ್ದರೆ ಮಾತ್ರ ಸಮುದಾಯ ಅಭಿವೃದ್ಧಿ ಹೊಂದಲು ಸಾಧ್ಯ.. ಸೇವಾಲಾಲರ ವಿಚಾರಗಳು ಕೇವಲ ಇತಿಹಾಸಕ್ಕೆ ಸೀಮಿತವಾಗದೆ, ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರ ಜಯಂತಿ ಅರ್ಥಪೂರ್ಣವಾಗುತ್ತದೆ ಎಂದರು.
ಇದನ್ನೂ ಓದಿ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕರುನಾಡ ವಿಜಯ ಸೇನೆಯಿಂದ ಆಹ್ವಾನ
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ತಹಶೀಲ್ದಾರ್ ಬಿ.ಎಂ.ಗೋವಿಂದರಾಜು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಬಂಜಾರ ಸಮುದಾಯದ ಮುಖಂಡರರಾದ ಅನಂತನಾಯ್ಕ್, ಯಂಕಸಾದು, ಮಾಧವ ನಾಯ್ಕ, ಗೀತ ಗೋವಿಂದರಾಜು, ರತ್ನಮ್ಮ, ಉಮೇಶ್, ಆನಂದ್ ಕುಮಾರ್, ಪಾಪಯ್ಯ, ಶ್ರೀನಿವಾಸ್ ನಾಯಕ ಸೇರಿದಂತೆ ಭೋವಿ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
