CHITRADURGA NEWS | 05 MAY 2026
ಹೊಸದುರ್ಗ: ಗ್ರಾಮದ ಜೀವನಾಡಿಯಾಗಿರುವ ಸಾಣೇಹಳ್ಳಿ ಕೆರೆಯ ಹೂಳೆತ್ತುವ ಕಾರ್ಯವು ಭರದಿಂದ ಸಾಗುತ್ತಿದ್ದು, ಈಗಾಗಲೇ ಸುಮಾರು ಶೇ. 75 ರಷ್ಟು ಕೆಲಸ ಪೂರ್ಣಗೊಂಡಿದೆ ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು.
ಇದನ್ನೂ ಓದಿ: ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘಕ್ಕೆ ಚುನಾವಣೆ | ಮೇ.8ಕ್ಕೆ ಮತಪಟ್ಟಿ ಪ್ರಕಟ
ಸೋಮವಾರ ಕೆರೆಯ ಹೂಳೆತ್ತುವ ಕಾಮಗಾರಿಯನ್ನು ಖುದ್ದಾಗಿ ವೀಕ್ಷಿಸಿ, ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.
ಸದ್ಯ ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಕಾರ್ಮಿಕರ ಮತ್ತು ಚಾಲಕರ ಹಿತದೃಷ್ಟಿಯಿಂದ ಮಧ್ಯಾಹ್ನ ಬಿಡುವು ನೀಡಿ, ಬೆಳಿಗ್ಗೆ ಮತ್ತು ಸಂಜೆ 4 ಗಂಟೆಯ ನಂತರ ಹೂಳೆತ್ತುವ ಕಾರ್ಯವನ್ನು ಮುಂದುವರಿಸಲು ಸೂಚಿಸಿದರು.
ಮಳೆಗಾಲವು ಅತೀ ಸಮೀಪದಲ್ಲಿದೆ. ಮಳೆ ಪ್ರಾರಂಭವಾಗುವ ಮುನ್ನವೇ ಬಾಕಿ ಇರುವ ಹೂಳನ್ನು ಸಂಪೂರ್ಣವಾಗಿ ತೆಗೆಯುವ ಮೂಲಕ ಕೆರೆಯ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಬೇಕಿದೆ.
ಇದನ್ನೂ ಓದಿ: ಬೆಳೆ ವಿಮೆ ಬಿಡುಗಡೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ | ರೈತ ಸಂಘ ಎಚ್ಚರಿಕೆ
ಕೆರೆಯಿಂದ ಹೂಳನ್ನು ಹೊರಹಾಕಲು ಪ್ರಸ್ತುತ ಇರುವ ಟ್ರಾಕ್ಟರ್‌ಗಳ ಸಂಖ್ಯೆ ಸಾಕಾಗುತ್ತಿಲ್ಲ. ಕೆಲಸಕ್ಕೆ ವೇಗ ನೀಡಲು ಇನ್ನು ಹೆಚ್ಚಿನ ಟ್ರಾಕ್ಟರ್‌ಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಗ್ರಾಮದ ಯುವಕರಿಗೆ ಮಾರ್ಗದರ್ಶನ ನೀಡಿದರು.
ಕೆರೆಯ ಅಭಿವೃದ್ಧಿಯ ಹಿತದೃಷ್ಟಿಯಿಂದ ನಡೆಯುತ್ತಿರುವ ಈ ಕಾರ್ಯವನ್ನು ಕಂಡು ಶ್ರೀಗಳು ಸಂತಸ ವ್ಯಕ್ತಪಡಿಸಿದರು. ಗ್ರಾಮದ ಯುವಪಡೆ ಮತ್ತು ಭಕ್ತರು ತೋರುತ್ತಿರುವ ಉತ್ಸಾಹವು ಕೆರೆಗೆ ಮರುಜೀವ ನೀಡುವಲ್ಲಿ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮೆದೇಹಳ್ಳಿಯ ಎಚ್.ಎಂ.ಶರಣೇಂದ್ರಪ್ಪ ನಿಧನ
ಈ ಸಂದರ್ಭದಲ್ಲಿ ಗ್ರಾಮದ ಹೂಳೆತ್ತುವ ಕಾರ್ಯದ ಉಸ್ತುವಾರಿ ವಹಿಸಿಕೊಂಡಿರುವ ಇಂಜಿನಿಯರ್ ಉಮೇಶ್, ಸಾಣೇಹಳ್ಳಿ ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

