
CHITRADURGA NEWS | 15 APRIL 2026
ಹೊಸದುರ್ಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಲುರಾಮೇಶ್ವರ ಹಾಗೂ ಸಾಣೇಹಳ್ಳಿ ಗ್ರಾಮದ ಕೆರೆ ಅಭಿವೃದ್ಧಿ ಸಮಿತಿಯ ಆಶ್ರಯದಲ್ಲಿ ಕೆರೆಗಳ ಪುನಶ್ಚೇತನಕ್ಕೆ ಪಂಡಿತಾರಾಧ್ಯ ಶ್ರೀಗಳು ಚಾಲನೆ ನೀಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
ಈ ಸಂದರ್ಭದಲ್ಲಿ ಮಾತನಾಡಿದ ಪಂಡಿತಾರಾಧ್ಯ ಶ್ರೀಗಳು, ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಕೆರೆಗಳ ಪಾತ್ರ ಅತಿಮುಖ್ಯವಾಗಿದ್ದು, ಕೆರೆಗಳ ಪುನಶ್ಚೇತನಕ್ಕೆ ಗ್ರಾಮಸ್ಥರು ಕೈಜೋಡಿಸಿರುವುದು ತುಂಬಾ ಸಂತೋಷ.
ಕಳೆದ 2018ರಲ್ಲಿಯೇ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಹಣ ಸಂಗ್ರಹಿಸಿ ಈ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿದ್ದರು. ಆ ಸಮಯದಲ್ಲಿ ಕೆರೆಯ ಮಣ್ಣನ್ನು ತೆಗೆದ ತಕ್ಷಣ ಸುರಿದ ಮಳೆಯಿಂದಾಗಿ ಕೆರೆ ತುಂಬಿ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿತ್ತು. ಆದರೆ ನಂತರದ ದಿನಗಳಲ್ಲಿ ನಿರ್ವಹಣೆಯ ಕೊರತೆಯಿಂದಾಗಿ ಕೆರೆ ಮತ್ತೆ ಬೋಳು ಕೆರೆಯಾಗಿ ಮಾರ್ಪಟ್ಟಿದೆ.
ಈ ಹಿನ್ನೆಲೆಯಲ್ಲಿ ಕೆರೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಬೇಕು. ಹಿಂದೆ ಮಾಡಿದಂತೆ ಪ್ರತಿಯೊಬ್ಬರೂ ತಮ್ಮ ಕೈಲಾದ ಆರ್ಥಿಕ ಸಹಾಯವನ್ನು ನೀಡಿ, ಸಂಘಟಿತರಾಗಿ ಕೆರೆಯ ಹೂಳೆತ್ತುವ ಕಾರ್ಯದಲ್ಲಿ ಭಾಗಿಯಾಗಬೇಕು.
ಇದನ್ನೂ ಓದಿ: ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ
ಸಾಣೇಹಳ್ಳಿ ಕೆರೆಯ ಅಭಿವೃದ್ಧಿಗೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಅಗತ್ಯ ಧನಸಹಾಯ ಮತ್ತು ಸಹಕಾರ ನೀಡುವರು.
ಕೆರೆ ಹೂಳು ಎತ್ತುವ ಕಾರ್ಯಕ್ಕೆ ಟ್ರ‍್ಯಾಕ್ಟರ್‌ಗಳ ಮೂಲಕ ಮಣ್ಣು ಸಾಗಿಸುವ ಕೆಲಸಕ್ಕೆ ಗ್ರಾಮಸ್ಥರು ಸನ್ನದ್ಧರಾಗಿದ್ದಾರೆ. ಹಿಂದೆ ಮಾಡಿದಂತೆಯೇ ಪ್ರತಿ ಮನೆಯಿಂದ ಅಲ್ಪ ಮೊತ್ತದ ದೇಣಿಗೆ ಸಂಗ್ರಹಿಸಿ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಈ ನಿಟ್ಟಿನಲ್ಲಿ ಮಠದ ವತಿಯಿಂದಲೂ ಅಗತ್ಯ ಆರ್ಥಿಕ ನೆರವು ನೀಡುವುದಾಗಿ ಶ್ರೀಗಳು ಹೇಳಿದರು.
ಯೋಜನಾಧಿಕಾರಿ ಚಂದ್ರಶೇಖರ್, ಕೆರೆ ಇಂಜಿನಿಯರ್ ಹರೀಶ್, ಕೃಷಿ ಅಧಿಕಾರಿ ಉಮೇಶ್, ಸಾಣೇಹಳ್ಳಿ ಗ್ರಾಮದ ಎಸ್.ಕೆ.ಪರಮೇಶ್ವರಯ್ಯ, ಎಸ್ ಆರ್ ಮಂಜುನಾಥ್, ಸತೀಶ್, ಪ್ರದೀಪ್, ವೀರಭದ್ರಪ್ಪ, ಕೃಷ್ಣಪ್ಪ, ಕೆರೆ ಮೇಲ್ವಿಚಾರಕಿ ಪಕೀರಮ್ಮ, ಸೇವಾಪ್ರತಿನಿಧಿ ಶಿಲ್ಪ, ಒಕ್ಕೂಟದ ಪದಾಧಿಕಾರಿಗಳಾದ ರತ್ನಮ್ಮ, ಮಮತಾ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಇದನ್ನೂ ಓದಿ: ಚಿತ್ರಹಳ್ಳಿ MDRS ಪಿಯು ಕಾಲೇಜಿಗೆ ಶೇ.97 ಫಲಿತಾಂಶ
ಶಿವಸಂಚಾರದ ಕಲಾವಿದರ ನಾಗರಾಜ ವಚನಗೀತೆಗಳನ್ನು ಹಾಡಿದರು. ಕೆರೆ ಅಭಿವೃದ್ಧಿಯ ಯೋಜನಾಧಿಕಾರಿ ಚಂದ್ರಶೇಖರ್ ಸ್ವಾಗತಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
