By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕರ್ನಾಟಕ ದಮ್ಮ ಜನಜಾಗೃತಿ ಯಾತ್ರೆ
    ಹೆಚ್ಚು ಧ್ಯಾನದಿಂದ ವ್ಯಕ್ತಿ, ಕುಟುಂಬ ಮತ್ತು ಸಮಾಜ ಪ್ರಬುದ್ಧವಾಗುತ್ತದೆ | ಡಾ.ಬೋಧಿ ದಮ್ಮ ಬಂತೇಜಿ
    2 hours ago
    ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ
    ಮಾದಕ ವಸ್ತುಗಳಿಂದ ದೂರವಿರಿ, ಸಮಾಜದ ಸ್ವಾಸ್ಥ್ಯ ಕಾಪಾಡಿ | ಎಸ್‌ಪಿ ಕುಶಾಲ್ ಚೌಕ್ಸೆ
    2 hours ago
    ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ
    ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ | 1 ಸಾವಿರ ಕೊಳವೆಬಾವಿಗಳ ಮರುಪೂರಣಕ್ಕೆ ಜಿ.ಪಂ. ಸಿಇಒ ಸೂಚನೆ
    3 hours ago
    ಜಿಲ್ಲಾ ಪಂಚಾಯಿತಿ
    ಜಿಲ್ಲಾ ಪಂಚಾಯಿತಿ ಮೀಸಲಾತಿ | ಯಾವ ಕ್ಷೇತ್ರಕ್ಕೆ ಯಾವ ಮೀಸಲು?
    15 hours ago
    (SIR) Meeting of representatives of recognized political parties
    ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರು ಕೈಬಿಡುವುದಿಲ್ಲ | ಜಿಲ್ಲಾಧಿಕಾರಿ ಎಸ್.ರಮ್ಯಾ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    3 hours ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    1 week ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    4 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 10 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    14 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 09 | ಹಠಾತ್ ಪ್ರಯಾಣದ ಸೂಚನೆ, ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 08 | ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ, ಕೈಗೆತ್ತಿಕೊಂಡ ಕೆಲಸಗಳು ಪೂರ್ಣ 
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 07 | ವ್ಯವಹಾರಗಳಲ್ಲಿ ಹೂಡಿಕೆ, ಅರೋಗ್ಯದಲ್ಲಿ ಎಚ್ಚರ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 06 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 day ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 06 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 05 | ಶೇಂಗಾ, ರಾಗಿ, ಮೆಕ್ಕೆಜೋಳ ರೇಟ್….
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 week ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    4 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    potatoes
    ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಹಾನಿಕಾರಕವೇ? ತಿಳಿಯಿರಿ
    13 hours ago
    raw garlic
    ಯಾರು ಪ್ರತಿದಿನ ಹಸಿ ಬೆಳ್ಳುಳ್ಳಿ ತಿನ್ನಬಾರದು ಗೊತ್ತಾ?
    14 hours ago
    knee pain
    ಚಿಕ್ಕ ವಯಸ್ಸಿನಲ್ಲಿಯೇ ಮೊಣಕಾಲು ನೋವು ಬರಲು ನೀವು ತಿಳಿಯದೆ ಮಾಡುವ ಈ ತಪ್ಪುಗಳೇ ಕಾರಣವಂತೆ
    2 days ago
    cholesterol
    ಕೊಲೆಸ್ಟ್ರಾಲ್ ಕಡಿಮೆ ಮಾಡಲು ಪ್ರತಿದಿನ ಒಂದು ಚಮಚ ಈ ಪುಡಿಯನ್ನು ಸೇವಿಸಿ
    2 days ago
    dry hair
    ಒಣ ಕೂದಲಿನ ಸಮಸ್ಯೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಹಚ್ಚಿ
    3 days ago
Reading: ಸಾಣೇಹಳ್ಳಿ ಶ್ರೀ ಅಮೃತ ಮಹೋತ್ಸವ | ಮಠಾಧೀಶರಿಂದ ಪುಷ್ಪವೃಷ್ಠಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಾಣೇಹಳ್ಳಿ ಶ್ರೀ ಅಮೃತ ಮಹೋತ್ಸವ | ಮಠಾಧೀಶರಿಂದ ಪುಷ್ಪವೃಷ್ಠಿ

News Desk Chitradurga News
Last updated: 9 October 2026 18:12
News Desk Chitradurga News
1 day ago
Share
Sanehalli Sri Amrutha Mahotsava
ಸಾಣೇಹಳ್ಳಿ ಶ್ರೀ ಅಮೃತ ಮಹೋತ್ಸವ
SHARE

CHITRADURGA NEWS | 09 OCTOBER 2026

ಚಿತ್ರದುರ್ಗ: ರಂಗ ಜಂಗಮ ಎಂದೇ ಹೆಸರಾಗಿರುವ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರಿಗೆ 75 ವರ್ಷ ಸಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮಠಾಧೀಶರು ಪತ್ರಿಕಾ ಭವನದಲ್ಲಿ ಶುಕ್ರವಾರ ಅಮೃತ ಮಹೋತ್ಸವ ಹಾಗೂ ಶ್ರೀಗಳು ರಚಿಸಿರುವ ಒಲಿದಂತೆ ಹಾಡುವೆ ಕೃತಿಗಳ ಲೋಕಾರ್ಪಣೆ ಮಾಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….

ಈ ವೇಳೆ ಮಾತನಾಡಿದ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ವ್ಯಕ್ತಿ ಎಷ್ಟು ವರ್ಷ ಬದುಕುತ್ತಾನೆ ಎನ್ನುವುದು ಮುಖ್ಯವಲ್ಲ, ಹೇಗೆ ಬದುಕುತ್ತಾನೆ ಎನ್ನುವುದು ಮುಖ್ಯ ಎಂದರು.

ನೂರು ವರ್ಷ ಬದುಕಬೇಕು ಎನ್ನುವುದು ನಮ್ಮ ಉದ್ದೇಶವಲ್ಲ, ಸತ್ಕಾರ್ಯ ಮಾಡಲು ಸಾಧ್ಯವಾಗುವಷ್ಟು ಮತ್ತು ಆರೋಗ್ಯ ಚೆನ್ನಾಗಿರುವಷ್ಟು ದಿನ ಬದುಕಿದರೆ ಸಾಕು. ಕಾವಿ ಧರಿಸಿದ ತಕ್ಷಣ ಯಾರೂ ಸ್ವಾಮಿಗಳಾಗುವುದಿಲ್ಲ, ಮನಸ್ಸಿಗೆ ಕಾವಿ ಹಾಕಿಕೊಳ್ಳಬೇಕು. ನಮ್ಮ ನಡವಳಿಕೆ ಮತ್ತು ಸಾಗುವ ಮಾರ್ಗ ಅತ್ಯಂತ ಮುಖ್ಯ ಎಂದರು.

ಆರಂಭದಲ್ಲಿ ಪಿಯುಸಿ ಹಾಗೂ ಡಿಗ್ರಿಯಲ್ಲಿ ಫೇಲಾಗಿದ್ದ ನಾನು, ನಂತರ ತತ್ವಶಾಸ್ತ್ರ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಗಳಿಸಿದೆ. ಹಿರಿಯ ಗುರುಗಳ ಆಶೀರ್ವಾದವೇ ಈ ಮಟ್ಟಕ್ಕೆ ಬೆಳೆಸಿದೆ. ಈವರೆಗಿನ ಆತ್ಮಾವಲೋಕನ ಮಾಡಿಕೊಂಡಾಗ ಸಾಧನೆ ಶೂನ್ಯ ಎನಿಸುತ್ತದೆ, ಇನ್ನೂ ಅನೇಕ ಕೆಲಸಗಳನ್ನು ಮಾಡಲು ಅವಕಾಶವಿದೆ. ಟೀಕೆಗಳಿಗೆ ಅಂಜದೆ, ವೇದಿಕೆಯ ಮೇಲೊಂದು ಹೊರಗಡೆ ಮತ್ತೊಂದಾಗದೆ ನೇರ ಮತ್ತು ನಿಷ್ಠುರ ನಡೆ ನಮ್ಮದಾಗಿದೆ ಎಂದರು.

ಇದನ್ನೂ ಓದಿ: ಜಿ.ಪಂ.ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಯುವಸಂಸತ್ತು ಸಭೆ

ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಆಡುಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಸಾಣೇಹಳ್ಳಿ ಶ್ರೀಗಳು ಎಲ್ಲಾ ಕ್ಷೇತ್ರಗಳಲ್ಲಿ ಸೇವೆ ಮಾಡಿದ್ದಾರೆ. ಬಂಡಾಯದ ಮೂಲಕವೇ ಬೆಳೆದು ಬಂದವರು. ಅತೀ ಸರಳ ಮತ್ತು ಸುಲಭವಾಗಿ ಸಿಗುವ ಗುರುಗಳು. ವಚನ ಝೇಂಕಾರ ಸೇರಿದಂತೆ ಅವರು ನಡೆಸಿದ ಕಾರ್ಯಕ್ರಮಗಳು ನಾಡಿನಲ್ಲಿ ಸದ್ದು ಮಾಡಿವೆ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಿದ್ದಯ್ಯನಕೋಟೆ ಶ್ರೀ ಬಸವಲಿಂಗ ಸ್ವಾಮೀಜಿ, ಶ್ರೀ ಯಾದವಾನಂದ ಸ್ವಾಮೀಜಿ, ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಶ್ರೀ ಶಿವಾನಂದ ಸ್ವಾಮೀಜಿ, ಶ್ರೀ ಮಹಾಲಿಂಗ ಸ್ವಾಮೀಜಿ, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ತಿಪ್ಪೇರುದ್ರ ಸ್ವಾಮೀಜಿ, ಶ್ರೀ ಅಪ್ಪಣ್ಣ ಸ್ವಾಮೀಜಿ, ಶ್ರೀ ವನಕಲ್ಲು ರಮಾನಂದ ಸ್ವಾಮೀಜಿ, ಶ್ರೀ ಬಸವ ಭೂಷಣ ಸ್ವಾಮೀಜಿ ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ನವೆಂಬರ್ 1 ರಿಂದ 6 ರವರೆಗೆ ಸಾಣೇಹಳ್ಳಿಯಲ್ಲಿ ರಾಷ್ಟ್ರೀಯ ನಾಟಕೋತ್ಸವ ವಿಶೇಷವಾಗಿ ನಡೆಯಲಿದೆ. ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಸಿರಿಗೆರೆ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ಸಾಣೇಹಳ್ಳಿ ಶ್ರೀ ತಿಳಿಸಿದರು.

ಇದನ್ನೂ ಓದಿ: ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಿ

ಶ್ರೀಗಳು ಅತ್ಯಂತ ಶಿಸ್ತಿನ ಮಠಾಧೀಶರಾಗಿದ್ದು, ಲಿಂಗಪೂಜೆಯಂತೆ ಪ್ರತಿ ದಿನ ಬರುವ ಕಾಣಿಕೆಯನ್ನೂ ಲೆಕ್ಕ ಹಾಕಿ ಬರೆಯುತ್ತಾರೆ. ವಿಚಾರ ಮತ್ತು ವ್ಯವಹಾರ ಎರಡರಲ್ಲೂ ಕಠಿಣ ತತ್ವ ಪಾಲಕರು.

| ಶ್ರೀ ಶಾಂತವೀರ ಸ್ವಾಮೀಜಿ.

ಪಂಡಿತಾರಾಧ್ಯ ಶ್ರೀಗಳು ಒಂದು ಮಹಾನ್ ಶಕ್ತಿ. ಸಾಣೇಹಳ್ಳಿ ಮಠ ಹಾಗೂ ಗ್ರಾಮವನ್ನು ಜಗತ್ತಿನ ಮಟ್ಟಕ್ಕೆ ಬೆಳೆಸಿದ್ದಾರೆ. ಕಷ್ಟ ಕಾಲದಲ್ಲೂ ಅವರು ತತ್ವಗಳನ್ನು ಬಿಟ್ಟುಕೊಟ್ಟವರಲ್ಲ.

| ಶ್ರೀ ಮಾದಾರ ಚನ್ನಯ್ಯ ಶ್ರೀಗಳು ಹೇಳಿದರು.

ನಾಟಕಗಳ ಮೂಲಕ ಕರ್ನಾಟಕ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿ ಬಸವತತ್ವ ಮತ್ತು ಸಾಮಾಜಿಕ ಸಂದೇಶ ಪಸರಿಸಿದ ನೇರ, ನಿಷ್ಠುರ ವ್ಯಕ್ತಿತ್ವ ಶ್ರೀಗಳದ್ದು.

| ಜಿ.ಎಚ್‌.ತಿಪ್ಪಾರೆಡ್ಡಿ, ಮಾಜಿ ಶಾಸಕರು.

ಬಸವಾದಿ ಶರಣರ ಹಾದಿಯಲ್ಲಿ ಸಾಗುತ್ತಿರುವ ಶ್ರೀಗಳು ರಚಿಸುತ್ತಿರುವ ‘ಒಲಿದಂತೆ ಹಾಡುವ’ ಕೃತಿಗಳು ಸಮಾಜಕ್ಕೆ ಮುತ್ತಿನಂತಿವೆ. ಸಮಾಜದಲ್ಲಿ ಪರಿವರ್ತನೆ ತರುವ ನಿಟ್ಟಿನಲ್ಲಿ ಶ್ರೀಗಳದ್ದು ದೃಢವಾದ ಹೆಜ್ಜೆ. ನಡೆ ಮತ್ತು ನುಡಿಗಳಲ್ಲಿ ಎಂದೂ ರಾಜಿ ಮಾಡಿಕೊಂಡವರಲ್ಲ.

| ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ.

ಮಠಾಧೀಶರು ಮಂಡೆ ಬೋಳಿಸಿಕೊಳ್ಳುತ್ತಾರೆ. ಆದರೆ, ಪಂಡಿತಾರಾಧ್ಯ ಶ್ರೀಗಳಿ ಮಂಡೆಯ ಜೊತೆಗೆ ಮನಸ್ಸನ್ನೂ ಬೋಳು ಮಾಡಿಕೊಂಡ ನಿಜವಾದ ಸನ್ಯಾಸಿ. ರಂಗಭೂಮಿ ಮತ್ತು ನಾಟಕ ಮಾಧ್ಯಮವನ್ನು ತಪಸ್ಸಿನಂತೆ ಬಳಸಿ ಸಮಾಜ ಸುಧಾರಣೆ ಮಾಡಿದ್ದಾರೆ.

| ಎಸ್.ಕೆ.ಬಸವರಾಜನ್, ಮಾಜಿ ಶಾಸಕರು.

ಜಿಲ್ಲೆಯ ಮಠಾಧೀಶರಿಗೆ ಪ್ರೇರಣೆಯಾಗಿರುವ ಶ್ರೀಗಳು, 75 ವರ್ಷಗಳಲ್ಲಿ ರಂಗಭೂಮಿ ಮೂಲಕ ಶರಣರ ಸಂದೇಶ ತಲುಪಿಸಿ ಮಾದರಿಯಾಗಿದ್ದಾರೆ.

| ಶ್ರೀ ಈಶ್ವರಾನಂದಪುರಿ ಸ್ವಾಮೀಜಿ.

ಆಧುನಿಕ ಮಾಧ್ಯಮಗಳಿಂದ ಗ್ರಾಮೀಣ ಸೊಗಡು ನಶಿಸುತ್ತಿರುವ ಕಾಲದಲ್ಲಿ ನಾಟಕೋತ್ಸವದ ಮೂಲಕ ಜನರನ್ನು ಸೆಳೆಯುತ್ತಿದ್ದಾರೆ.

| ಎ.ವಿ.ಉಮಾಪತಿ, ಮಾಜಿ ಶಾಸಕರು.

ಬಸವತತ್ವ ಪಾಲನೆಯಲ್ಲಿ ಮುಂಚೂಣಿಯಲ್ಲಿರುವ ಶ್ರೀಗಳು, ಮುರುಘಾ ಮಠದೊಂದಿಗೆ ಅವಿನಾಭಾವ ಬಾಂಧವ್ಯ ಹೊಂದಿದ್ದರು. ಮಲ್ಲಿಕಾರ್ಜುನ ಗುರುಗಳು ಪಂಡಿತಾರಾಧ್ಯ ಶ್ರೀಗಳ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

| ಶ್ರೀ ವಚನಾನಂದ ಸ್ವಾಮೀಜಿ.

ವಿಚಾರಗಳಲ್ಲಿ ವಜ್ರದಂತೆ ಕಠಿಣ, ಮನುಷ್ಯ ಸಂಬಂಧಗಳಲ್ಲಿ ಕುಸುಮದಂತೆ ಕೋಮಲ ಸ್ವಭಾವ ಶ್ರೀಗಳದ್ದು.

| ಶ್ರೀ ಮರುಳಸಿದ್ದ ಸ್ವಾಮೀಜಿ.

ದುರ್ಗದ ಏಳ್ಗೆಗೆ ಎಲ್ಲ ಮಠಗಳು ಚಿಂತನೆ ನಡೆಸಬೇಕು. ಮಠಾಧೀಶರು ಈ ವಿಚಾರದಲ್ಲಿ ಮುಂದೆ ಬಂದರೆ ಜನ ನಿಮ್ಮ ಜೊತೆ ಬರುತ್ತಾರೆ.

| ಜಿ.ಎಸ್.ಮಂಜುನಾಥ್, ಆದಿಜಾಂಬವ ನಿಗಮದ ಅಧ್ಯಕ್ಷರು.

ಗೋಲ್ಡ್ ಮೆಡಲ್ ಪಡೆದು ಶಿಕ್ಷಣ ಪೂರೈಸಿದ ಶ್ರೀಗಳು ಜಾತಿ, ಮತ ನೋಡದೆ ಎಲ್ಲರಿಗೂ ಮಾರ್ಗದರ್ಶನ ಮಾಡುತ್ತಿದ್ದಾರೆ.

| ಪಿ.ರಘು, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು.

ಸಮಾಜಕ್ಕೆ ಮುಟ್ಟಿಸಬೇಕಾದ ವಿಚಾರಗಳನ್ನು ನಿರ್ಧಾಕ್ಷಿಣ್ಯವಾಗಿ ಮುಟ್ಟಿಸುವ ಕೆಲಸವನ್ನು ಸಾಣೇಹಳ್ಳಿ ಶ್ರೀಗಳು ಮಾಡಿದ್ದಾರೆ.

| ಶ್ರೀ ಶಿವಬಸವ ಸ್ವಾಮೀಜಿ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಸಾಣೇಹಳ್ಳಿ ಶ್ರೀ, ಅಮೃತ ಮಹೋತ್ಸವ, ಮಠಾಧೀಶರು, ಪುಷ್ಪವೃಷ್ಠಿ, Chitradurga, Chitradurga News, Sanehalli Sri, Amrutha Mahotsava, Mathadheeshar, Pushpavrushti,
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
Next Article (SIR) Meeting of representatives of recognized political parties ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರು ಕೈಬಿಡುವುದಿಲ್ಲ | ಜಿಲ್ಲಾಧಿಕಾರಿ ಎಸ್.ರಮ್ಯಾ
Leave a Comment

Leave a Reply Cancel reply

Your email address will not be published. Required fields are marked *

ಕರ್ನಾಟಕ ದಮ್ಮ ಜನಜಾಗೃತಿ ಯಾತ್ರೆ
ಹೆಚ್ಚು ಧ್ಯಾನದಿಂದ ವ್ಯಕ್ತಿ, ಕುಟುಂಬ ಮತ್ತು ಸಮಾಜ ಪ್ರಬುದ್ಧವಾಗುತ್ತದೆ | ಡಾ.ಬೋಧಿ ದಮ್ಮ ಬಂತೇಜಿ
ಮುಖ್ಯ ಸುದ್ದಿ
ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ
ಮಾದಕ ವಸ್ತುಗಳಿಂದ ದೂರವಿರಿ, ಸಮಾಜದ ಸ್ವಾಸ್ಥ್ಯ ಕಾಪಾಡಿ | ಎಸ್‌ಪಿ ಕುಶಾಲ್ ಚೌಕ್ಸೆ
ಮುಖ್ಯ ಸುದ್ದಿ
ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ
ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ | 1 ಸಾವಿರ ಕೊಳವೆಬಾವಿಗಳ ಮರುಪೂರಣಕ್ಕೆ ಜಿ.ಪಂ. ಸಿಇಒ ಸೂಚನೆ
ಮುಖ್ಯ ಸುದ್ದಿ
ಆರೋಪಿ ರಂಗಸ್ವಾಮಿ
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
ಕ್ರೈಂ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up