ಹೊಸದುರ್ಗ
ಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಪ್ರಶಸ್ತಿಗೆ ಸಾಣೇಹಳ್ಳಿ ಶ್ರೀ ಆಯ್ಕೆ
CHITRADURGA NEWS | 06 JANUARY 2025
ಹೊಸದುರ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗೆ ಸಾಣೇಹಳ್ಳಿಯ ತರಳಬಾಳು ಶಾಖಾಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಆಯ್ಕೆಯಾಗಿದ್ದಾರೆ.
ಕ್ಲಿಕ್ ಮಾಡಿ ಓದಿ: ರೈತರಿಗೆ ಗುಡ್ ನ್ಯೂಸ್ | ಜಿಲ್ಲೆಯಲ್ಲಿ ರೂ.23.33 ಕೋಟಿ ಬೆಳೆವಿಮೆ ಬಿಡುಗಡೆ
ಪ್ರಶಸ್ತಿಯು ₹5 ಲಕ್ಷ ನಗದು, ಸ್ಮರಣಿಕೆ ಮತ್ತು ಫಲಕ ಒಳಗೊಂಡಿದೆ.
ಜನಪರ ಕಾಳಜಿ, ವೈಚಾರಿಕೆ, ರಂಗಾಸಕ್ತಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಒಲವು ಹಾಗೂ ಅವರ ಜೀವನಾದರ್ಶಗಳನ್ನು ಪರಿಗಣಿಸಿ ಸ್ವಾಮೀಜಿ ಅವರನ್ನು ಈ ಸಾಲಿನ ಪ್ರಶಸ್ತಿಗೆ ಮಲ್ಲಿಕಾ ಘಂಟಿ ಅವರ ಅಧ್ಯಕ್ಷತೆಯ ಸಮಿತಿ ಆಯ್ಕೆ ಮಾಡಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: 15. ಹಿರೇ ಬಡಗಿ ಗೌನಳ್ಳಿಗೆ ಬಂದರು | ಹಬ್ಬಿದಾ ಮಲೆ ಮಧ್ಯದೊಳಗೆ
ಜನವರಿ 14ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಶ್ರೀ ಸಿದ್ದರಾಮೇಶ್ವರ ಜಯಂತಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದಿದ್ದಾರೆ.