CHITRADURGA NEWS | 16 AUGUST 2024
ಚಿತ್ರದುರ್ಗ: ಸ್ವಾತಂತ್ಯ ಬಂದಿದೆ. ಆದರೆ ಸ್ವಾತಂತ್ರ್ಯವನ್ನು ಉಳಿಸಿಕೊಂಡು, ಬೆಳೆಸಿಕೊಂಡು ಜವಾಬ್ದಾರಿಯಿಂದ ನಡೆದುಕೊಳ್ಳುವ ಪ್ರಜಾಪ್ರತಿನಿಧಿಗಳು ಹಾಗೂ ಪ್ರಜಾಪ್ರಭುಗಳ ಕೊರತೆ ಎದ್ದು ಕಾಣುತ್ತಿದೆ ಎಂದು ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿಷಾದಿಸಿದರು.
ಸಾಣೇಹಳ್ಳಿಯ ಶ್ರೀ ಮಠದಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ದಿನದಂದು ಆದರ್ಶಗಳ ಬಗ್ಗೆ ಅರ್ಥಪೂರ್ಣವಾಗಿ ಆಲೋಚಿಸಿ ಮಾತನಾಡುತ್ತಾರೆ. ಆದರೆ ಮರುಕ್ಷಣದಿಂದಲೇ ಆದರ್ಶಗಳನ್ನು ಗಾಳಿಗೆ ತೂರಿ ಸ್ವೇಚ್ಛೆಯಿಂದ ನಡೆದುಕೊಳ್ಳುವ ವಾತಾವರಣ ಇಡೀ ನಾಡಿನಲ್ಲಿ ಕಾಣುತ್ತಿದ್ದೇವೆ’ ಎಂದರು.
ಕ್ಲಿಕ್ ಮಾಡಿ ಓದಿ: ಒಳ್ಳೆಯವನಾಗಲು ನಾನು ಬಂದಿಲ್ಲ | ರೇಣುಕಾಸ್ವಾಮಿ ಕುಟುಂಬಕ್ಕೆ ನಟ ಪ್ರಥಮ್ ಸಾಂತ್ವನ
‘ಹಿರಿಯರು ಸ್ವಾರ್ಥ ಜೀವಿಗಳಾಗಿ ಬದುಕಿದವರಲ್ಲ. ಲೋಕಕಲ್ಯಾಣಕ್ಕಾಗಿ ತಮ್ಮನ್ನು ತಾವು ಗಂಧದ ಕೊರಡಿನ ಹಾಗೆ ತೀಡಿಕೊಂಡಂಥವರು. ನಮ್ಮ ಹಕ್ಕು ಮತ್ತು ಜವಾಬ್ದಾರಿಯನ್ನು ಮರೆತು ಮನಬಂದಂತೆ ನಡೆದುಕೊಳ್ಳದೇ ಜವಾಬ್ದಾರಿಯನ್ನು ಅರಿತು ಹೆಜ್ಜೆಯನ್ನಿಡುತ್ತಿದ್ದರು’ ಎಂದು ತಿಳಿಸಿದರು.
‘ವೈಜ್ಞಾನಿಕ, ಆರ್ಥಿಕ, ಸಾಮಾಜಿಕ ಹಾಗೂ ಆಧುನಿಕವಾಗಿ ನಾಡಿನ ಪ್ರಗತಿ ತುಂಬಾ ಆಗಿದೆ. ಆದರೆ ವ್ಯಕ್ತಿಯ ವ್ಯಕ್ತಿತ್ವ ನಾಶ ಆಗುತ್ತಿದೆ. ಸತ್ಯ, ಪ್ರಾಮಾಣಿಕತೆ, ನೀತಿ ಇವೆಲ್ಲವೂ ಗಾಳಿಗೆ ತೂರುವ ವಾತಾವರಣ ನಿರ್ಮಾಣ ಆಗುತ್ತಿದೆ. ಹಾಗಾಗಿ ಸ್ವಾತಂತ್ರ್ಯದ ದಿನದಂದು ಜವಾಬ್ದಾರಿ ಸ್ಥಾನದಲ್ಲಿರುವವರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಎಂದಿಗಿಂತ ಇಂದು ಅಗತ್ಯವಿದೆ’ ಎಂದರು.
ಕ್ಲಿಕ್ ಮಾಡಿ ಓದಿ: ಕರ್ನಾಟಕಕ್ಕೆ ಚಿತ್ರದುರ್ಗವೇ ನಂ.1 | ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್
‘ಪ್ರತಿಯೊಬ್ಬರು ತಮ್ಮನ್ನು ತಾವು ಆತ್ಮಾವಲೋಕನ ಮಾಡಿಕೊಂಡು ವ್ಯಕ್ತಿ ಕಲ್ಯಾಣದ ಜೊತೆಗೆ ಲೋಕಕಲ್ಯಾಣವನ್ನು ಬಯಸುವುದು ಹೇಗೆ ಎಂದು ಚಿಂತನೆ ಮಾಡಬೇಕು. ಅದಕ್ಕನುಗುಣವಾಗಿ ಕಾರ್ಯ ಯೋಜನೆಗಳನ್ನು ರೂಪಿಸಿಕೊಂಡಾಗ ನಾವು ಪಡೆದ ಸ್ವಾತಂತ್ರ್ಯಕ್ಕೆ ವಿಶೇಷವಾದ ಅರ್ಥ ಬರುವುದು’ ಎಂದು ತಿಳಿಸಿದರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರದೊಂದಿಗೆ, ಶಿಸ್ತಿನಿಂದ ಪ್ರಭಾತ್ ಫೇರಿ ನಡೆಸಿದರು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ಆಕರ್ಷಕ ನೃತ್ಯ ಮಾಡಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
