ಮುಖ್ಯ ಸುದ್ದಿ
Application; ಸವಿತಾ ಸಮಾಜ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ
CHITRADURGA NEWS | 12 AUGUST 2024
ಚಿತ್ರದುರ್ಗ: ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಸವಿತಾ ಮತ್ತು ಇದರ ಉಪಜಾತಿಗೆ ಸೇರಿದ ಜನರ ಅಭಿವೃದ್ಧಿಗಾಗಿ 2024-25ನೇ ಸಾಲಿಗೆ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಕ್ಲಿಕ್ ಮಾಡಿ ಓದಿ: Bear Temple run: ಹನುಮಪ್ಪನ ಗುಡಿಗೆ ಬಂದ ಜಾಂಬವಂತ | ದೀಪದ ಎಣ್ಣೆ ಕುಡಿದ ಕರಡಿ
ಈ ನಿಗದಡಿಯಲ್ಲಿ ಅನುಷ್ಟಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.kssd.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004, 8050770005, ಅಭಿವೃದ್ಧಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.