CHITRADURGA NEWS | 20 SEPTEMBER 2026
ಚಿತ್ರದುರ್ಗ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2026–27ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಹಾಗೂ ಸೌಲಭ್ಯ ಪಡೆಯಲು ಅರ್ಹರಿಂದ ಸೇವಾ ಸಿಂಧು ತಂತ್ರಾಂಶದ ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 01 ಅರ್ಜಿ ಸಲ್ಲಿಸಲು ಕೊನೆಯ ದಿನ.
ಸ್ವಯಂ ಉದ್ಯೋಗ ಸಾಲ ಯೋಜನೆ,ಮ ಅರಿವು–ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸಕ್ಕೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಲೋಬಿಪಿ ಸಮಸ್ಯೆ ಇರುವವರು ಈ ಆಹಾರ ಸೇವಿಸಿ
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2024-25 ಮತ್ತು 2025-26ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹೆಚ್.ಸಿ.ಸಾತ್ವಿಕ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

