
CHITRADURGA NEWS | 17 FEBRUARY 2026
ಚಿತ್ರದುರ್ಗ: ಶತ ಶತಮಾನಗಳಿಂದಲೂ ಶೋಷಣೆಗೆ ಗುರಿಯಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನ್ಯಾಯ ಮಾಡುತ್ತಿವುದರಿಂದ ಹಕ್ಕುಗಳ ರಕ್ಷಣೆಗಾಗಿ ಜಾಗೃತರಾಗುವಂತೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಎಚ್ಚರಿಸಿದರು.

ಇದನ್ನೂ ಓದಿ: PM-SYM ಯೋಜನೆ | ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ | ADC
ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 8 ಜಿಲ್ಲೆಗಳಲ್ಲಿ ಈಗಾಗಲೇ ಪ್ರವಾಸ ಮಾಡಿದ್ದೇನೆ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮೀಸಲಾತಿ ಹಕ್ಕು ನೀಡಿದ್ದಾರೆ. ಭಿಕ್ಷೆಯಲ್ಲ, ಸಾಮಾಜಿಕ, ಶೈಕ್ಷಣಿಕವಾಗಿ ಮುಂದುವರೆದಿರುವ ಜನಾಂಗಕ್ಕೆ ದೇಶದ ಪ್ರಧಾನಿ ಮೋದಿ ತರಾತುರಿಯಲ್ಲಿ ಶೇ.10 ರಷ್ಟು ಮೀಸಲಾತಿ ನೀಡಿದರು.
ರಾಜ್ಯದಲ್ಲಿ 50 ಲಕ್ಷದಷ್ಟು ನಾಯಕ ಸಮಾಜದವರಿದ್ದಾರೆ. 1.ಕೋಟಿ 25 ಲಕ್ಷ ಪರಿಶಿಷ್ಟ ಜಾತಿಯವರಿದ್ದಾರೆ. ಎರಡು ಕಾಲು ಕೋಟಿ ಓ.ಬಿ.ಸಿ.ಗಳಿದ್ದಾರೆ. ಕುಲಶಾಸ್ತ್ರ ಅಧ್ಯಯನ ಪ್ರಕಾರ ಯಾರ್ಯಾರೂ ಅರ್ಹರಿದ್ದಾರೋ ಅವರನ್ನೆಲ್ಲಾ ಪರಿಶಿಷ್ಟ ವರ್ಗಕ್ಕೆ ಸೇರಿಸಲಿ ನಮ್ಮದೇನು ಅಭ್ಯಂತರವಿಲ್ಲ ಎಂದರು.
ರಾಜಕಾರಣಿಗಳು ಶೋಷಿತರನ್ನು ಮತ ಬ್ಯಾಂಕಾಗಿ ಮಾಡಿಕೊಂಡು ಚೆಲ್ಲಾಟವಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಮೀಸಲಾತಿ ಶೇ.50 ಕ್ಕಿ ಜಾಸ್ತಿಯಾಗಬಾರದೆಂದು ಸೂಚಿಸಿದೆ.
ತಮಿಳುನಾಡಿನಲ್ಲಿ ಶೇ.69 ರಷ್ಟು ಮೀಸಲಾತಿ ಜಾರಿಯಲ್ಲಿದೆ. ರಾಜ್ಯ ಸರ್ಕಾರ 23-10-2022 ರಂದು ಜಸ್ಟಿಸ್ ನಾಗಮೋಹನ್‍ದಾಸ್ ವರದಿ ಮೇಲೆ ಕಾನೂನು ಮಾಡಿರುವುದರಿಂದ ಶೋಷಿತ ಸಮುದಾಯಗಳಿಗೆ ನ್ಯಾಯ ಸಿಗುವುದಿಲ್ಲ. ಹಿಂದುಗಳು ನಾವೆಲ್ಲಾ ಒಂದು ಎಂದು ಹೇಳಿಕೊಳ್ಳುತ್ತಿರುವ ಪ್ರಧಾನಿ ಮೋದಿರವರು ಈ ಸಮಾಜಗಳಿಗೆ ಏಕೆ ನ್ಯಾಯ ಕೊಡುತ್ತಿಲ್ಲವೆಂದು ಪ್ರಶ್ನಿಸಿದರು?
ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಂಗವಿಕಲರ ನಡೆ ರಾಜಕೀಯ ಕಡೆ ಅಭಿಯಾನ
ಆಲ್ ಪಾರ್ಟಿ ಶೆಡ್ಯೂಲ್ ಮೋದಿ ಬಳಿ ಹೋಗಿ ಮನವಿ ಮಾಡಿದ್ದೇವೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ನಿಗಧಿತ ಗಡುವಿನಲ್ಲಿ ಪ್ರಧಾನಿ ಮೋದಿ ಬಳಿ ನಿಯೋಗ ಹೋಗಿ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಲಿ. ನಮ್ಮ ತಾಳ್ಮೆಯನ್ನು ಕೆಣಕಿದರೆ ಸುಮ್ಮನಿರಲ್ಲ.
ಎಂ.ಆರ್.ನಾಯಕ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಬಹಿರಂಗಪಡಿಸಿ ಎಸ್ಸಿಪಿ, ಟಿಎಸ್ಪಿ ಹಣ 4 ಲಕ್ಷ 40 ಸಾವಿರ ಕೋಟಿ ಬಜೆಟ್‍ನಲ್ಲಿ ಪರಿಶಿಷ್ಟ ವರ್ಗಕ್ಕೆ 7 ಪರ್ಸೆಂಟ್ ಎಸ್ಟಿಗಳಿಗೆ, ಹದಿನಾಲ್ಕು ಸಾವಿರ ಕೋಟಿ ರೂ. ಪರಿಶಿಷ್ಟ ಜಾತಿಗೆ, 35 ಸಾವಿರ ಕೋಟಿ ರೂ. ಹಿಂದುಳಿದ ವರ್ಗಗಳಿಗೆ ನೀಡಬೇಕು.
ಎಸ್ಸಿ. ಎಸ್ಟಿಗಳ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು. ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಮುಂದಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮಠಗಳಿಗೆ ಪ್ರತಿ ವರ್ಷ 5 ಕೋಟಿ ರೂ.ಅನುದಾನ ನೀಡುವಂತೆ ವಿ.ಎಸ್.ಉಗ್ರಪ್ಪ ಒತ್ತಾಯಿಸಿದರು.
ಇದನ್ನೂ ಓದಿ: ಮಾರ್ಚ್ 06 ರಂದು ನಾಯಕನಹಟ್ಟಿ ಜಾತ್ರೆ | ಪ್ರಾಣಿಬಲಿ ನಿಷೇಧ
ನಮ್ಮ ಸಮುದಾಯದಿಂದ ಗೆದ್ದು ಹೋಗಿರುವ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರುಗಳು ಏಕೆ ಮಾತನಾಡುತ್ತಿಲ್ಲ. ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ.ಅವ್ಯವಹಾರವಾಗಿದೆ. ಕೆಡುಕುಂಟು ಮಾಡುವವರ ವಿರುದ್ದ ಈಗಾಲಾದರೂ ಧ್ವನಿ ಎತ್ತದಿದ್ದರೆ ರಾಜ್ಯಾದ್ಯಂತ ಹೋರಾಡುತ್ತೇವೆ ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಕೆ.ಪಿ.ಸಂಪತ್‍ಕುಮಾರ್, ನರಸಿಂಹಯ್ಯ, ರಾಜಣ್ಣ, ವೇಣುಗೋಪಾಲನಾಯಕ, ಆನಂದ, ಡಾ.ಮಂಜುಳ, ಜಯಶ್ರಿ ಗುಡ್ಡೆಕಾಯಿ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
