CHITRADURGA NEWS | 16 MAY 2025
ಚಿತ್ರದುರ್ಗ: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಮೇ.28 ರವರೆಗೆ ವಿಸ್ತರಿಸಲಾಗಿದೆ.
Also Read: ಎರಡು ದಿನ ಶಾಂತಿಸಾಗರ (ಸೂಳೆಕೆರೆ) ನೀರು ಸರಬರಾಜು ಸ್ಥಗಿತ

ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕಾರ್ಯ ಕಳೆದ ಮೇ. 05 ರಿಂದ ಆರಂಭಗೊಂಡಿದ್ದು, ಸರ್ಕಾರದ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ವಿಡಿಯೋ ಸಂವಾದ ಸಭೆಯಲ್ಲಿ ಸೂಚನೆ ನೀಡಿರುವಂತೆ, ಇದೀಗ ಸಮೀಕ್ಷಾ ಕಾರ್ಯವನ್ನು ಮೇ.28 ರವರೆಗೆ ವಿಸ್ತರಿಸಲಾಗಿದೆ. ಈ ಹಿಂದಿನ ವೇಳಾಪಟ್ಟಿಯಂತೆ ಒಟ್ಟಾರೆ ಸಮೀಕ್ಷಾ ಕಾರ್ಯ ಮೇ. 23 ರವರೆಗೆ ನಡೆಸಬೇಕಾಗಿತ್ತು. ಇದೀಗ ಮೇ. 28 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಪರಿಷ್ಕøತ ವೇಳಾಪಟ್ಟಿಯಂತೆ ಮೊದಲನೆ ಹಂತದಲ್ಲಿ ಮನೆ ಮನೆ ಭೇಟಿ ನೀಡಿ ಕೈಗೊಳ್ಳುವ ಸಮೀಕ್ಷಾ ಕಾರ್ಯವು ಮೇ. 25 ರವರೆಗೆ ಜರುಗಲಿದೆ. ಎರಡನೆ ಹಂತದಲ್ಲಿ, ಸಮೀಕ್ಷೆ ಬ್ಲಾಕ್‍ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು, ಮನೆ-ಮನೆ ಭೇಟಿ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ಮೇ. 28 ರವರೆಗೆ ಜರುಗಲಿದ್ದು, ಮೂರನೆ ಹಂತದಲ್ಲಿ ಸ್ವಯಂ ಘೋಷಣೆ ಮಾಡಿ, ಆನ್‍ಲೈನ್ ಮೂಲಕ ಸಮೀಕ್ಷೆ ಕಾರ್ಯವು ಮೇ.28 ರವರೆಗೆ ಜರುಗಲಿದೆ.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಸಾರ್ವಜನಿಕರು ಪರಿಷ್ಕøತ ವೇಳಾಪಟ್ಟಿಯನ್ವಯ ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರಿಗೆ ಮತ್ತು ಮೇಲ್ವಿಚಾರಕರಿಗೆ ಕುಟುಂಬದ ಸಂಪೂರ್ಣ ಮಾಹಿತಿ ನೀಡಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
