Connect with us

ಪರಿಶಿಷ್ಟರ ಹಣ ಅನ್ಯ ಬಳಕೆ ಉದ್ದೇಶಕ್ಕೆ ಬೇಡ | ಕಾಯ್ದೆ ಪರಿಣಾಕಾರಿ ಅನುಷ್ಠಾನಕ್ಕೆ ತುರ್ತು ಆದೇಶ ಅಗತ್ಯ | ಹೆಚ್.ಆಂಜನೇಯ

ಸಚಿವ ಸತೀಶ್ ಜಾರಕಿಹೊಳಿ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ

ಮುಖ್ಯ ಸುದ್ದಿ

ಪರಿಶಿಷ್ಟರ ಹಣ ಅನ್ಯ ಬಳಕೆ ಉದ್ದೇಶಕ್ಕೆ ಬೇಡ | ಕಾಯ್ದೆ ಪರಿಣಾಕಾರಿ ಅನುಷ್ಠಾನಕ್ಕೆ ತುರ್ತು ಆದೇಶ ಅಗತ್ಯ | ಹೆಚ್.ಆಂಜನೇಯ

CHITRADURGA NEWS | 15 MARCH 2024

ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮಗ್ರ ಅಭಿವೃದ್ಧಿಗಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಜಾರಿಗೆ ತಂದ ಎಸ್‍ಸಿಎಸ್‍ಪಿ-ಟಿಎಸ್‍ಪಿ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಕಠಿಣ ಆದೇಶ ಹೊರಡಿಸುವ ತುರ್ತು ಅಗತ್ಯವಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು.

ಇದನ್ನೂ ಓದಿ: ಬ್ಯಾಂಕ್‍ಗಳು ಬಡವರ ಹೆಬ್ಬಾಗಿಲಾದಾಗ ಮಾತ್ರ ದೇಶದಲ್ಲಿ ಪರಿವರ್ತನೆಯಾಗಲು ಸಾಧ್ಯ

ಕರ್ನಾಟಕ ರಾಜ್ಯ ಎಸ್‍ಸಿ-ಎಸ್‍ಟಿ ಗುತ್ತಿಗೆದಾರರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಬುಧವಾರ ಆಯೋಜಿಸಿದ್ದ ಸಚಿವ ಸತೀಶ್ ಜಾರಕಿಹೊಳಿ ಅಭಿನಂದನಾ ಸಮಾರಂಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿ.

ಈ ಕಾಯ್ದೆಯ ಮೂಲ ಆಶಯ ಎಸ್ಸಿ-ಎಸ್ಟಿ ಜನರ ಸಮಗ್ರ ಅಭಿವೃದ್ಧಿ ಆಗಿದೆ. ಎಸ್ಸಿ-ಎಸ್ಟಿ ಜನರು ವಾಸಿಸುವ ಪ್ರದೇಶವನ್ನು ಅಭಿವೃದ್ಧಿಗೊಳಿಸುವ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಮುಖ್ಯವಾಹಿನಿಗೆ ತರುವ ಉದ್ದೇಶ ಹೊಂದಲಾಗಿದೆ. ಆದರೆ ಕಳೆದ ಸರ್ಕಾರದ ಅವಧಿಯಲ್ಲಿ ಈ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಅನ್ಯ ಜಾತಿ ಜನರು ವಾಸಿಸುವ, ವಾಣಿಜ್ಯ ಪ್ರದೇಶದ ಅಭಿವೃದ್ಧಿಗೆ ಬಳಸಲಾಗಿದೆ. ಜೊತೆಗೆ ಅನ್ಯ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ದುರ್ಗದ ಸೊಸೆ ದಾವಣಗೆರೆ ಬಿಜೆಪಿ ಅಭ್ಯರ್ಥಿ 

ವ್ಯಾಪಾರಸ್ಥರ ಅನುಕೂಲಕ್ಕಾಗಿ ಎಸ್‍ಸಿಎಸ್‍ಪಿ-ಟಿಎಸ್‍ಪಿಯ ಕೋಟ್ಯಾಂತರ ರೂಪಾಯಿ ಹಣವನ್ನು ಬಳಕೆ ಮಾಡಿ, ಪರಿಶಿಷ್ಟರಿಗೆ ಅನ್ಯಾಯ ಮಾಡಲಾಗಿದೆ. ಜೊತೆಗೆ ಪ್ಯಾಕೇಜ್ ಹೆಸರಲ್ಲಿ ಟೆಂಡರ್ ಪದ್ಧತಿ ಜಾರಿಗೆ ತಂದು ಶ್ರೀಮಂತರನ್ನು ಇನ್ನಷ್ಟು ಶ್ರೀಮಂತರನ್ನಾಗಿ ಮಾಡಲಾಗಿದೆ ಎಂದು ದೂರಿದರು.

ಇದಕ್ಕೆ ಕಡಿವಾಣ ಹಾಕಲು ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ 50 ಲಕ್ಷದವರೆಗೆ ಎಸ್ಸಿ-ಎಸ್ಟಿ ಜನರಿಗೆ ಗುತ್ತಿಗೆ ನೀಡುವ ಪದ್ಧತಿ ಜಾರಿಗೆ ತಂದರು. ಪ್ರಸ್ತುತ ಅದನ್ನು 1 ಕೋಟಿ ರೂಪಾಯಿಗೆ ಹೆಚ್ಚಿಸಿ ನಾನೊಬ್ಬ ದಲಿತ ಪರ, ನೊಂದ ಜನರ ಧ್ವನಿ ಎಂಬುದನ್ನು ಸಾಬೀತು ಪಡಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಎಂಪಿ ಟಿಕೇಟ್ ಸಸ್ಪೆನ್ಸ್ | ಕಗ್ಗಂಟಾಯ್ತು ಅಭ್ಯರ್ಥಿ ಆಯ್ಕೆ ವಿಚಾರ

ಈ ಗುತ್ತಿಗೆ ಮೊತ್ತವನ್ನು 2 ಕೋಟಿ ರೂಪಾಯಿಗೆ ಹೆಚ್ಚಿಸುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಗಮನ ತರಲಾಗುವುದು. ಅನುದಾನವನ್ನು ದುರ್ಬಳಕೆ ಮಾಡುವ ಅಧಿಕಾರಿ ವರ್ಗದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಶೋಷಿತರು ತಮ್ಮ ಸಮುದಾಯದ ಕುರಿತು ಮಾನವೀಯ ಗುಣ ಬೆಳೆಸಿ ಕೊಳ್ಳಬೇಕು. ಆದರೆ ಇತ್ತೀಚೆಗೆ ಶೋಷಣೆ ಮಾಡುತ್ತಿರುವುದು ನೋವಿನ ವಿಷಯ. ಇಂತಹ ನಡೆ ಕೈಬಿಟ್ಟು ಒಗ್ಗೂಡಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸೇರ್ತಿರಾ ಅಂದಾಕ್ಷಣ ಕೆಂಡಾಮಂಡಲರಾದ ಸಚಿವ ನಾರಾಯಣಸ್ವಾಮಿ

ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಮಹಾದೇವಸ್ವಾಮಿ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ವಿಧಾನಪರಿಷತ್ ಸದಸ್ಯ ನಸೀರ್ ಅಹಮ್ಮದ್, ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ್, ಸಹ ಪ್ರಾಧ್ಯಾಪಕ ಪ್ರದೀಪ್ ರಮಾವತ್, ಸುಪ್ರೀಂ ಕೋರ್ಟ್ ನ್ಯಾಯವಾದಿ ಚೈನಾ ಕೊಠಾರಿ, ದಲಿತ ಸಂಘರ್ಷ ಸಮಿತಿ ಸಂಚಾಲಕ ಮಾವಳ್ಳಿ ಶಂಕರ್ ಇತರರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version