
CHITRADURGA NEWS | 04 JANUARY 2026
ಚಿತ್ರದುರ್ಗ: ಪ್ರಸಕ್ತ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 15 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಕೈಗಾರಿಕೋದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ
ಕೇಂದ್ರಿಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಲ್ಲಿ ಶುಲ್ಕ ರಹಿತ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಜ.15 ರೊಳಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಸಲ್ಲಿಸಲು ಕೋರಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 03 | ಹತ್ತಿ ರೇಟ್ ಎಷ್ಟಿದೆ?
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
