CHITRADURGA NEWS | 06 OCTOBER 2026
ಚಿತ್ರದುರ್ಗ: ವಿಕಲಚೇತನ ವಿದ್ಯಾರ್ಥಿಗಳು 2026-27ನೇ ಸಾಲಿಗೆ ಪ್ರೀ-ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೈಶಾಲಿ.ಜೆ ತಿಳಿಸಿದ್ದಾರೆ.
ಇದನ್ನೂ ಓದಿ: ಮಲ್ಟಿಫ್ಲೆಕ್ಸ್ಗಳಲ್ಲಿ ಕನ್ನಡ ಚಿತ್ರಗಳ ಹವಾ | ನಟ ಶಿವರಾಜ್ಕುಮಾರ್
ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳ ಮುಖಾಂತರ ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶ https://scholarships.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಒಂದು ಪ್ರತಿಯನ್ನು ಆಯಾ ತಾಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಗ್ರಾಮ ಪಂಚಾಯಿತಿಯಲ್ಲಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.
ಇದನ್ನೂ ಓದಿ: ಕೆರೆ ಒತ್ತುವರಿ ತೆರವು, ರಾಗಿ ಹಣ ಬಿಡುಗಡೆಗೆ ಆಗ್ರಹ | ಮಾವಿನಕಟ್ಟೆ ಗೇಟ್ ಬಳಿ ರೈತರ ರಸ್ತೆ ತಡೆ
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಪಂಚಾಯಿತಿ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಒನಕೆ ಓಬವ್ವ ಕ್ರೀಡಾಂಗಣ ರಸ್ತೆ, ಚಿತ್ರದುರ್ಗ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ 08194-235284 ಕರೆ ಮಾಡಬಹುದು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

