Connect with us

Scholarship fraud: ತಂದೆ ಇಲ್ಲದ ಮಕ್ಕಳಿಗೆ ಸ್ಕಾಲರ್‌ಷಿಪ್‌ | ಸಂದೇಶ ಸುಳ್ಳು ಎಚ್ಚರ ವಹಿಸಿ

scholrship

ಮುಖ್ಯ ಸುದ್ದಿ

Scholarship fraud: ತಂದೆ ಇಲ್ಲದ ಮಕ್ಕಳಿಗೆ ಸ್ಕಾಲರ್‌ಷಿಪ್‌ | ಸಂದೇಶ ಸುಳ್ಳು ಎಚ್ಚರ ವಹಿಸಿ

CHITRADURGA NEWS | 26 SEPTEMBER 2024
ಚಿತ್ರದುರ್ಗ: ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ₹24,000 ಸ್ಕಾಲರ್‌ಷಿಪ್‌ ಪಾವತಿಸಲಾಗುವುದು ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸುದ್ದಿ ಗೊಂದಲ ಸೃಷ್ಟಿಸಿದ್ದು, ಇದು ವ್ಯವಸ್ಥಿತ ಸಂಚಿನ ಉದ್ದೇಶವಾಗಿದೆ.

ಸಾಮಾಜಿಕ ಜಾಲತಾಣದ ಸಂದೇಶ ನಂಬಿ ಅರ್ಜಿ ಹಾಕಿ ಯಾರೂ ಹಣ ಕಳೆದುಕೊಳ್ಳಬಾರದು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ದಕ್ಷಿಣ ಕನ್ನಡ, ಮಂಗಳೂರು ಎಂಬ ಮೊಹರು ಹಾಕಿರುವ ಈ ವಾಟ್ಸ್‌ಆ್ಯಪ್‌ ಸಂದೇಶ ತಿಂಗಳಿನಿಂದ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಸಂದೇಶವನ್ನು ನೋಡಿದ ಜನ ಪ್ರತಿನಿತ್ಯ ಗ್ರಾಮ ಪಂಚಾಯಿತಿ, ಕಂದಾಯ ಅಧಿಕಾರಿ ಕಚೇರಿ, ತಾಲ್ಲೂಕು, ಜಿಲ್ಲಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಯಲ್ಲಿ ಪ್ರತಿದಿನ ನೂರಾರು ಜನರು ಬಂದು ಯೋಜನೆಯ ಬಗ್ಗೆ ವಿಚಾರಿಸಿ ಅರ್ಜಿ ನೀಡುತ್ತಿರುವುದು ಅಧಿಕಾರಿಗಳನ್ನು ಚಿಂತೆಗೀಡು ಮಾಡಿದೆ. ಬಹಳಷ್ಟು ಜನರು ದೂರವಾಣಿ ಕರೆ ಮೂಲಕವು ವಿಚಾರಿಸುತ್ತಿದ್ದಾರೆ.

ಕ್ಲಿಕ್ ಮಾಡಿ ಓದಿ: ನಮ್ಮ ಹೋರಾಟ ಸಿರಿಗೆರೆ ಸ್ವಾಮೀಜಿ ವಿರುದ್ಧವಲ್ಲ | ನಾವು ಹೈಕೋರ್ಟ್‌ ಮೆಟ್ಟಿಲೇರಿಲ್ಲ | ರೈತ ಮುಖಂಡರ ಸ್ಪಷ್ಟನೆ

ಈ ಸಂದೇಶವನ್ನು ಬಂಡವಾಳ ಮಾಡಿಕೊಂಡಿರುವ ಕೆಲವರು ಅಮಾಯಕ, ಮುಗ್ಧ ಜನರನ್ನು ಸುಲಿಗೆ ಮಾಡಲು ಶುರು ಮಾಡಿದ್ದಾರೆ. ಒಂದೊಂದು ಅರ್ಜಿಗೆ ಕನಿಷ್ಠ ₹5000, ₹10,000ದವರೆಗೆ ಹಣ ವಸೂಲಿ ಮಾಡಿ ಜನರಿಗೆ ಮೋಸ ಮಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರಿಕೆಯಿಂದಿರುವಂತೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಯೋಜನೆಯಡಿ ಸಂಕಷ್ಟಕ್ಕೆ ಸಿಲುಕಿದ ಕುಟುಂಬದಲ್ಲಿನ ಮಗುವನ್ನು ರಕ್ಷಿಸಲಾಗುತ್ತದೆ. ಮಗುವಿನ ಶಿಕ್ಷಣ, ಮಕ್ಕಳು ನಿರ್ಗತಿಕರಾಗುವುದು, ಸಂಕಷ್ಟಕ್ಕೀಡಾಗುವುದು, ಓಡಿಹೋಗುವುದು, ಬಲವಂತದ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಮುಂತಾದವುಗಳಿಂದ ತಡೆಗಟ್ಟುವ ಪ್ರಯತ್ನ ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸಲಾಗುತ್ತದೆ. ಸ್ಕಾಲರ್‌ಶಿಪ್‌ ಕೊಡುವ ಬಗ್ಗೆ ಹರಿದಾಡುತ್ತಿರುವ ಸುದ್ದಿ ನಿಜವಲ್ಲಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version