CHITRADURGA NEWS | 30 DECEMBER 2025
ಹಿರಿಯೂರು: ಹಿರಿಯೂರು ತಾಲೂಕು ಹೊಸಯಳನಾಡು ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಮೈಸೂರು ರಾಜವಂಶಸ್ಥರು ಹಾಗೂ ಸಂಸದರಾದ ಯದುವೀರ ಕೃಷ್ಣದತ್ತ ಒಡೆಯರ್, ಖ್ಯಾತ ಸಿನಿಮಾ ನಟ ರಮೇಶ್ ಅರವಿಂದ್, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಆರೆಸ್ಸೆಸ್ಸ್ ಮುಖಂಡರಾದ ನ.ತಿಪ್ಪೇಸ್ವಾಮಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಕೃಷಿಯಿಂದ ದೇಶದ ಅಭಿವೃದ್ಧಿ ಸಾಧ್ಯ:
ಕಾರ್ಯಕ್ರಮ ಉದ್ಘಾಟಿಸಿದ ಸಂಸದರಾದ ಯದುವೀರ ಕೃಷ್ಣದತ್ತ ಒಡೆಯರ್ ಮಾತನಾಡಿ, ಗ್ರಾಮೀಣ ಭಾಗಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ. ಕೃಷಿಯಿಂದ ಗ್ರಾಮಗಳ ಅಭಿವೃದ್ಧಿ ಆಗಬೇಕು ಎಂದರು.
ಇದನ್ನೂ ಓದಿ: ಬೆಂಕಿ ದುರಂತದಲ್ಲಿ ಮಡಿದವರ ಪಾರ್ಥೀವ ಶರೀರ ಹಸ್ತಾಂತರ | ಕಣ್ಣೀರಿಟ್ಟ ಕುಟುಂಬದವರು
ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗಬೇಕು, ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಗ್ರಾಮಗಳಿಗೆ ಮೂಲ ಸೌಲಭ್ಯ ಸಿಗಬೇಕು ಎಂದು ಹೇಳಿದರು.
ಹೊಸಯಳನಾಡು ಕರ್ನಾಟಕ ಪಬ್ಲಿಕ್ ಶಾಲೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಸಂತೋಷ ತಂದಿದೆ. ಈ ಭಾಗದ ಜನರಿಗೆ ಉತ್ತಮ ಮಳೆ, ಬೆಳೆ ಆಗಲೆಂದು ತಾಯಿ ಚಾಮುಂಡೇಶ್ವರಿ ದೇವಿಯನ್ನು ಪ್ರಾರ್ಥಿಸುತ್ತೇನೆ ಎಂದರು.
ಇದನ್ನೂ ಓದಿ: ವೀರಶೈವ ಅರ್ಬನ್ ಬ್ಯಾಂಕ್ ಚುನಾವಣೆ | ಪಟೇಲ್ ಶಿವಕುಮಾರ್ ಬಣಕ್ಕೆ ಗೆಲುವು
ಜನಸೇವಕರು ಸಮಾಜವನ್ನು ನೋಡುವ ದೃಷ್ಟಿಕೋನಗಳು ಬದಲಾಗಬೇಕು. ಶಾಶ್ವತವಾಗಿ ಉಳಿಯುವಂತಹ ಕೆಲಸಗಳನ್ನು ಮಾಡಬೇಕು. ಸ್ವದೇಶಿ ಆಲೋಚನೆ ಮಾಡಬೇಕು. ವಿಕಸಿತ ಭಾರತವಾಗಬೇಕಾದರೆ ಎಲ್ಲರೂ ಸ್ವದೇಶಿ ಉತ್ಪನ್ನಗಳನ್ನು ಬಳಸಬೇಕು ಎಂದು ತಿಳಿಸಿದರು.
ಖ್ಯಾತ ಚಿತ್ರನಟ ರಮೇಶ್ ಅರವಿಂದ್ ಮಾತನಾಡಿ, ಸರ್ಕಾರಿ ಶಾಲೆಗಳ ಬಗ್ಗೆ ಜನರಲ್ಲಿ ಸಾಕಷ್ಟು ತಪ್ಪು ಕಲ್ಪನೆಗಳಿವೆ. ಆದರೆ, ಹೊಸಯಳನಾಡು ಶಾಲೆ ನೋಡಿದಾಗ ಆ ಎಲ್ಲಾ ಭಾವನೆಗಳು ಬದಲಾಗುತ್ತವೆ. ಈ ಶಾಲೆಯಲ್ಲಿರುವ ಸೌಲಭ್ಯಗಳ ಬಗ್ಗೆ ಶಿಕ್ಷಕರಲ್ಲಿ ತಿಳಿದುಕೊಳ್ಳಲು ಸಾಕಷ್ಟು ಸಮಯ ಬೇಕಾಯಿತು ಎಂದು ಪ್ರಶಂಸಿದರು.
ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆ | ವಿಎಚ್ಪಿ, ಬಜರಂಗದಳ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ | ಆಕ್ರೋಶ
ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಮುಖಂಡರಾದ ನಾ.ತಿಪ್ಪೇಸ್ವಾಮಿ ಅವರು ಶ್ರಮಿಸುತ್ತಿರುವುದು ಶ್ಲಾಘನೀಯ. ಅವರ ಕಾರ್ಯವೈಖರಿ ನೋಡಿ ಇಲ್ಲಿಗೆ ಬಂದಿದ್ದೇನೆ. ಇಲ್ಲಿನ ಶಾಲೆ, ಮಕ್ಕಳು ಹಾಗೂ ಸೌಲಭ್ಯಗಳನ್ನು ನೋಡಿ ಹೆಮ್ಮೆ ಎನ್ನಿಸಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಮಾತನಾಡಿ, ಮೈಸೂರು ರಾಜ ಮನೆತನದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಅತೀವ ಸಂತೋಷ ತಂದಿದೆ. ರಾಜ ವಂಶಸ್ಥರ ಬಗ್ಗೆ ನನಗೆ ಅಪಾರ ಗೌರವವಿದೆ. ಹಿರಿಯೂರು ನಗರದ ಪ್ರಧಾನ ರಸ್ತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಯಾವ ಬಣ್ಣದ ಜೀನ್ಸ್ ನೊಂದಿಗೆ ಯಾವ ಟಾಪ್ಗಳನ್ನು ಧರಿಸಬೇಕು ಎಂದು ತಿಳಿಯಿರಿ
ಈ ಕ್ಷೇತ್ರದ ಶಾಸಕ, ಮಂತ್ರಿಯಾದ ಮೇಲೆ ಈ ಭಾಗದಲ್ಲಿ ಮುರಾರ್ಜಿ ವಸತಿ ಶಾಲೆ ಕಿತ್ತೂರು ರಾಣಿ ಚೆನ್ನಮ್ಮ ಏಕಲವ್ಯ ವಸತಿ ಶಾಲೆ ಸೇರಿದಂತೆ ಎಲ್ಲಾ ಮಾದರಿ ಶಾಲೆಗಳನ್ನು ಆರಂಭಿಸಿದ್ದೇನೆ. ಈ ಶಾಲೆಯ ಅಭಿವೃದ್ಧಿಗೆ ನ.ತಿಪ್ಪೇಸ್ವಾಮಿ ಅವರ ಕೊಡುಗೆ ಸಾಕಷ್ಟಿದೆ. ಎಲ್ಲಿ ಸೇವೆ ಇರುತ್ತದೆಯೋ ಅಲ್ಲಿ ಭಗವಂತ ಇರುತ್ತಾನೆ ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಮುಖ್ಯಸ್ಥರು, ಆರೆಸ್ಸೆಸ್ಸ್ ಮುಖಂಡರಾದ ನ,ತಿಪ್ಪೇಸ್ವಾಮಿ, ಖ್ಯಾತ ಸಂಗೀತ ನಿರ್ದೇಶಕ ಪ್ರವೀಣ್ ಡಿ ರಾವ್, ಶಾಲೆಯ ಉಪ ಪ್ರಾಂಶುಪಾಲರಾದ ನಾಗರಾಜಚಾರಿ, ಅಶೋಕ್, ಶಿಕ್ಷಕರು, ವಿದ್ಯಾರ್ಥಿಗಳು ಗ್ರಾಮಸ್ಥರು, ಪೋಷಕರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

