CHITRADURGA NEWS | 23 MAY 2026
ಚಿತ್ರದುರ್ಗ: ಶಾಲಾ ದಾಖಲಾತಿ ಆಂದೋಲನವು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆ ತರಲು ಸಹಕಾರಿಯಾಗಲಿದೆ ಎಂದು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಗೌರವಾಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
ಚಿಕ್ಕಗೊಂಡನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ದಾಖಲಾತಿ ಆಂದೋಲನ ಉದ್ಘಾಟಿಸಿ ಮಾತನಾಡಿದರು.
ಪ್ರತಿ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಳ್ಳುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಒಂದನೆ ತರಗತಿ ಹಾಗೂ ಇತರೆ ತರಗತಿಗಳಿಗೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯನ್ನು ಗರಿಷ್ಠಗೊಳಿಸಿ ಅದರಂತೆ ಮನೆ ಮನೆಗೆ ಭೇಟಿ ಮಾಡಿ ಎಲ್.ಕೆ.ಜಿ. ವಿಭಾಗಕ್ಕೆ 25 ಮಕ್ಕಳು ಹಾಗೂ ಒಂದನೆ ತರಗತಿಗೆ 24 ಮಕ್ಕಳು ದಾಖಲಾಗುವಂತೆ ಶಿಕ್ಷಕರು ಕಾಳಜಿ ವಹಿಸಿರುವುದು ವಿಶೇಷ ಎಂದು ಶ್ಲಾಘಿಸಿದರು.
ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ದಿನೇಶ್ ಮಾತನಾಡಿ, ಶಿಕ್ಷಕರುಗಳು ಮನೆ ಮನೆಗೆ ಭೇಟಿ ನೀಡಿ ಪೋಷಕರುಗಳಲ್ಲಿ ಜಾಗೃತಿ ಮೂಡಿಸುವುದು ಮತ್ತು ಶಾಲಾ ವಯಸ್ಸಿನ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡಿಸಿ ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳ ಕುರಿತು ಮನವರಿಕೆ ಮಾಡುವುದು ಆಂದೋಲನದ ಪ್ರಮುಖ ಉದ್ದೇಶವಾಗಬೇಕು.
ಇದನ್ನೂ ಓದಿ: ಪಾದರಕ್ಷೆ ತಯಾರಿಕೆ ಸ್ಪರ್ಧೆ | ಅರ್ಜಿ ಆಹ್ವಾನ
ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಉಚಿತ ಪಠ್ಯ ಪುಸ್ತಕಗಳು, ಕ್ಷೀರಭಾಗ್ಯ ಯೋಜನೆಯಡಿ ಹಾಲು, ಶೂ, ಸಾಕ್ಸ್ ವಿತರಣೆ. ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಸತಿ ನಿಲಯಗಳ ಸೌಲಭ್ಯಗಳನ್ನು ಮಕ್ಕಳಿಗೆ ತಲುಪಿಸುವುದೇ ಶಾಲಾ ದಾಖಲಾತಿ ಆಂದೋಲನದ ಗುರಿ ಎಂದು ಹೇಳಿದರು.
ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕರುಗಳಾದ ಕುಸುಮ ಕೆ, ರೇವಣ್ಣ, ರೀಟಾಮಣಿ, ಸಿದ್ದಮ್ಮ, ವೀಣಾ, ತ್ರಿವೇಣಿ, ಅರುಣ್‍ಕುಮಾರ್, ಅಣ್ಣಪ್ಪಸ್ವಾಮಿ, ಬಸವರಾಜ್, ರತ್ನಮ್ಮ, ಪೋಷಕರು ಹಾಗೂ ಮಕ್ಕಳು ದಾಖಲಾತಿ ಆಂದೋಲನದಲ್ಲಿ ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

