CHITRADURGA NEWS | 04 JULY 2026
ಚಿತ್ರದುರ್ಗ: ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಶಾಲಾ ಸಂಸತ್ ಚುನಾವಣೆಯು ದಿಕ್ಸೂಚಿಯಾಗಿದೆ ಎಂದು ಕೂನಬೇವು ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎಸ್. ಹನುಮಂತಪ್ಪ ತಿಳಿಸಿದರು.
ಇದನ್ನೂ ಓದಿ: ಸರ್ಕಾರಿ ನೌಕರರ ಮಕ್ಕಳಿಗೆ ಜುಲೈ 05 ರಂದು ಪ್ರತಿಭಾ ಪುರಸ್ಕಾರ | ಮಾಲತೇಶ್ ಮುದ್ದಜ್ಜಿ
ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಶಾಲಾ ಸಂಸತ್ ಚುನಾವಣೆ’ಯ ಕುರಿತು ಮಾತನಾಡಿದರು.
ಪ್ರಜಾಪ್ರಭುತ್ವದ ಯಶಸ್ಸಿಗೆ ಚುನಾವಣೆಗಳು ಅತ್ಯಂತ ಮಹತ್ತರ ಪಾತ್ರ ವಹಿಸುತ್ತವೆ. ದೇಶದಲ್ಲಿ ಮತದಾನ ಎಂಬುದು ಬಹಳ ಮುಖ್ಯ. ಎಲ್ಲಾ ಮಕ್ಕಳಿಗೆ ಶಾಲೆಯ ಚುನಾವಣೆಗಳು ಪ್ರಜಾಪ್ರಭುತ್ವದ ಗರಡಿ ಮನೆಯಿದ್ದಂತೆ ಎಂದು ಅವರು ಅಭಿಪ್ರಾಯಪಟ್ಟರು.
ಶಾಲೆಯ ಸಹ ಶಿಕ್ಷಕ ಕೃಷ್ಣಪ್ಪ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಹಾಗೂ ತಮ್ಮ ಪರಿವಾರದವರು, ಮನೆಯವರನ್ನೆಲ್ಲಾ ಚುನಾವಣೆಯ ಸಂದರ್ಭದಲ್ಲಿ ಮತದಾನ ಮಾಡುವಂತೆ ಪ್ರೇರೇಪಿಸಬೇಕು.
ಇದನ್ನೂ ಓದಿ: ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ
ಭಾರತೀಯ ಚುನಾವಣಾ ಆಯೋಗವು ಈಗ ನಡೆಸುತ್ತಿರುವ ವಿಶೇಷ ಮತದಾರರ ಪರಿಷ್ಕರಣೆಗೆ ಅಗತ್ಯ ದಾಖಲೆಗಳನ್ನು ಒದಗಿಸುವಂತೆ ಮನವೊಲಿಸಬೇಕು. ಚುನಾವಣೆಗಳಲ್ಲಿ ಶೇ.100 ರಷ್ಟು ಮತದಾನವಾದರೆ ಉತ್ತಮ ಎಂದು ಆಶಯ ವ್ಯಕ್ತಪಡಿಸಿದರು.
ಶಾಲೆಯ ಹಿರಿಯ ಶಿಕ್ಷಕಿ ಪ್ರಶಾಂತ್ ಕುಮಾರಿ ಅವರು ಮತಗಟ್ಟೆ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಸಹಾಯಕರಾಗಿ ಶಿಕ್ಷಕರಾದ ರಾಧಾಮಣಿ, ವೀಣಾ ಹಾಗೂ ಎಣಿಕೆ ಅಧಿಕಾರಿಗಳಾಗಿ ಷರೀಪ್, ಮಾರುತಿ ಪ್ರಸಾದ್ ಕಾರ್ಯನಿರ್ವಹಿಸಿದರು.
ಶಾಲಾ ಚುನಾವಣೆಯಲ್ಲಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹ ಮತ್ತು ಖುಷಿಯಿಂದ ಭಾಗವಹಿಸಿ ತಮ್ಮ ಮತ ಚಲಾಯಿಸಿದರು.
ಇದನ್ನೂ ಓದಿ: ತುಕ್ಕು ಹಿಡಿದ ಚಾಕುಗಳನ್ನು ಬಳಸಿದರೆ ಏನಾಗುತ್ತದೆ ಗೊತ್ತಾ?
ಚುನಾವಣಾ ಫಲಿತಾಂಶದ ಬಳಿಕ ವಿಜೇತರಾದ ಧನುಷ್ ನಾಯಕ್ ಅವರು ಮುಖ್ಯಮಂತ್ರಿಯಾಗಿ ಹಾಗೂ ಶ್ರೇಯಾ ಅವರು ಗೃಹಮಂತ್ರಿಯಾಗಿ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿ ಪ್ರಮಾಣ ವಚನ ಸ್ವೀಕರಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
