
CHITRADURGA NEWS | 17 JULY 2024
ಚಿತ್ರದುರ್ಗ: ತಾಲ್ಲೂಕಿನ ಕುರುಬರಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ವಿದ್ಯಾರ್ಥಿಗಳಿಗೆ ಸಂಸತ್ ಚುನಾವಣೆ ನಡೆಸಲಾಯಿತು.
ಇದನ್ನೂ ಓದಿ: ಕುರಿ, ಮೇಕೆ ಸಾಕಾಣಿಕೆಗೆ ಅರ್ಜಿ ಅಹ್ವಾನ
ಈ ಚುನಾವಣೆಯಲ್ಲಿ ಶಾಲಾ ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಹಿಡಿದು ಮತದಾನ ಮಾಡಿದರು.
ಶಾಲೆಯಲ್ಲಿ ಒಟ್ಟು 230 ವಿದ್ಯಾರ್ಥಿಗಳು ಇದ್ದು, ಇದರಲ್ಲಿ 25:1 ರ ಅನುಪಾತದಲ್ಲಿ 10 ಜನರನ್ನು ಆಯ್ಕೆ ಮಾಡಲು ಅವಕಾಶ ನೀಡಲಾಯಿತು. ಶಾಲಾ ಸಂಸತ್ ಚುನಾವಣೆಯಲ್ಲಿ 27 ವಿದ್ಯಾರ್ಥಿಗಳು ಅಭ್ಯರ್ಥಿಗಳಾಗಿ ಭಾಗವಹಿಸಿದ್ದರು.
ಸಾರ್ವತ್ರಿಕ ಚುನಾವಣೆಯ ರೀತಿಯಲ್ಲಿ ಶಾಲಾ ಸಂಸತ್ ಚುನಾವಣೆ ನಡೆಸಿ, ಚುನಾವಣೆಯ ಪರಿಕಲ್ಪನೆಯನ್ನು ಮಕ್ಕಳಿಗೆ ತಿಳಿಸಲಾಯಿತು.
ಇದನ್ನೂ ಓದಿ: RAIN; ಬಾಗೂರಿನಲ್ಲಿ ಅತೀ ಹೆಚ್ಚು ಮಳೆ | ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ | ಇಲ್ಲಿದೆ ವರದಿ..
ಮುಖ್ಯ ಶಿಕ್ಷಕಿ ಕೆ.ಪದ್ಮಾ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ, ಆಲಿಯಾ ಪರ್ವೀನ್, ಎಸ್. ಕೆ. ಅರ್ಚನಾ, ಇಲಾಹಿನ್ ಬಾನು, ಬಾಬಾ ಫರ್ಹಾನ್, ಸಯ್ಯದ್ ಮುಬಾರಕ್, ಎಂ.ಶ್ರೀಧರ್, ದರ್ಶನ್ , ಇಶಾಂತ್, ಗೌಸಿಯ ಸಿದ್ದಿಖ, ಆಯಿಷಾಬಾನು ಚುನಾವಣೆಯಲ್ಲಿ ಜಯಗಳಿಸಿದರು.
ಶಾಲಾ ಸಂಸತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಸಮಾಜ ವಿಜ್ಞಾನ ಶಿಕ್ಷಕಿ ಫರ್ಜಾನ ಬೇಗಂ ಬಹುಮಾನ ನೀಡಿ ಗೌರವಿಸಿದರು.
ಈ ವೇಳೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಚುನಾಯಿತ ಪ್ರತಿನಿದಿಗಳೊಂದಿಗೆ ಪ್ರತಿ ತಿಂಗಳಿಗೊಮ್ಮೆ ಸಂಸತ್ ಕಲಾಪದ ಮಾದರಿಯಲ್ಲಿ ಸಂವಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: BANGALORE; ಚಿತ್ರದುರ್ಗದ ಅಭಿವೃದ್ಧಿ ಕುರಿತು ಬೆಂಗಳೂರಿನಲ್ಲಿ ಸಚಿವರು, ಸಂಸದರ ಸಭೆ
ಶಾಲಾ ಸಂಸತ್ ಚುನಾವಣೆಯಲ್ಲಿ ಶಾಲೆಯ ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
