
CHITRADURGA NEWS | 24 JULY 2025
ಚಿತ್ರದುರ್ಗ: ವಿದ್ಯಾರ್ಥಿಗಳಲ್ಲಿ ಚುನಾವಣೆ ಪ್ರಕ್ರಿಯೆ ಪರಿಕಲ್ಪನೆ ಮೂಡಿಸುವುದು ಅಗತ್ಯ ಎಂದು ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕ ಕೆ.ಜಿ.ಪ್ರಶಾಂತ್ ಹೇಳಿದರು.
ಇದನ್ನೂ ಓದಿ: ಭಾರತ್ ಎಲೆಕ್ಟ್ರಾನಿಕ್ಸ್ | ಚಾಲಕರ ಹುದ್ದೆಗಳಿಗೆ ಅರ್ಜಿ ಅಹ್ವಾನ

ಚಿತ್ರದುರ್ಗ ತಾಲ್ಲೂಕಿನ ಗುಡ್ಡದ ರಂಗವ್ವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಶಾಲಾ ಸಂಸತ್ ಚುನಾವಣೆ ಪ್ರಕ್ರಿಯೆ ವೀಕ್ಷಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಚುನಾವಣೆ ಪ್ರಕ್ರಿಯೆ, ಮತದಾನ, ಮತಎಣಿಕೆ ವಿಧಾನ ತಿಳಿಯಲು ಶಾಲಾ ಸಂಸತ್ ಚುನಾವಣೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಪಠ್ಯ ವಿಷಯದ ಜತೆಗೆ ಇಲಾಖೆಯಿಂದ ಆಯೋಜಿಸುವ ಪ್ರಾಚ್ಯಪ್ರಜ್ಞೆ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದರು.
ಡಯಟ್ ಉಪನ್ಯಾಸಕ ಎಸ್.ಬಸವರಾಜು ಮಾತನಾಡಿ, ಶಾಲಾ ಸಂಸತ್ ಚುನಾವಣೆ ವಿದ್ಯಾರ್ಥಿಗಳಿಗೆ ಮತದಾನ ಪ್ರಕ್ರಿಯೆಯ ನೈಜ ಅನುಭವ ನೀಡುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಇದನ್ನೂ ಓದಿ: ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ
ವಿದ್ಯಾರ್ಥಿಗಳು 18 ವರ್ಷ ಪೂರ್ಣಗೊಂಡ ನಂತರ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಹೆಸರನ್ನು ನೊಂದಣಿ ಮಾಡಿಕೊಳ್ಳಬೇಕು. ಪ್ರತಿಯೊಂದು ಮತವು ಅಮೂಲ್ಯವಾಗಿದ್ದು, ಶಾಲಾ ಸಂಸತ್ ಚುನಾವಣೆಯಲ್ಲಿ ಆಸಕ್ತಿಯಿಂದ ಭಾಗವಹಿಸಿದಂತೆ ಭವಿಷ್ಯದ ಚುನಾವಣೆ ಪ್ರಕ್ರಿಯೆಯಲ್ಲಿ ತಪ್ಪದೇ ಮತದಾನ ಮಾಡಬೇಕು ಎಂದರು.
ಮುಖ್ಯ ಶಿಕ್ಷಕ ಹೆಚ್.ಗೋವಿಂದಪ್ಪ ಮಾತನಾಡಿ, ವಿದ್ಯಾರ್ಥಿಗಳಿಗೆ ಮತದಾನ ಪ್ರಕ್ರಿಯೆ ಪರಿಕಲ್ಪನೆ ಮೂಡಿಸಲು ಮತ ಪತ್ರಗಳ ಪರಿಚಯ, ಮತ ಚಲಾಯಿಸುವ ವಿಧಾನ ತಿಳಿಸಲು ಮತಗಟ್ಟೆ ನಿರ್ಮಿಸಿ ಶಾಲಾ ಸಂಸತ್ ಚುನಾವಣೆ ನಡೆಸಲಾಯಿತು.
15 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದು ಅಧಿಕ ಮತಗಳನ್ನು ಪಡೆದ 9 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಶಾಲಾ ಸಂಸತ್‍ನ ಸಚಿವ ಸಂಪುಟ ರಚಿಸಲಾಗುವುದು ಎಂದರು.
ಮತಗಟ್ಟೆ ಅಧಿಕಾರಿಗಳಾಗಿ ಶಿಕ್ಷಕರಾದ ರಷೀದಾಬಾನು, ಡಾ.ಎಸ್.ಸವಿತ, ಕೆ.ಎಂ.ಆರ್.ಶೋಭ, ಬಿ.ಓಕವಿತ, ಎಚ್.ಕೆ. ಮಹೇಶ್, ಎಚ್.ಎನ್.ಮಂಜುನಾಥ್, ಎಂ.ಆರ್.ನಾಗರಾಜು, ಕಾರ್ಯ ನಿರ್ವಹಿಸಿದರು.
ಇದನ್ನೂ ಓದಿ: ವೃತ್ತಿಪರ ತರಬೇತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ದ್ವಿತೀಯ ದರ್ಜೆ ಸಹಾಯಕ ಎಂ.ಎಸ್.ಕಿರಣ್‍ಕುಮಾರ್, ಎಸ್.ಆರ್.ಎಸ್ ಬಿ.ಇಡಿ ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
