
CHITRADURGA NEWS | 16 JULY 2026
ಚಿತ್ರದುರ್ಗ: ಕನ್ನಡದಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ಡಾ.ಟಿ.ಆರ್.ಅನಂತರಾಮು ಹೆಸರಿನಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿಗಾಗಿ ವಿಜ್ಞಾನ ಬರಹಗಾರರು ಹಾಗೂ ಪ್ರಕಾಶಕರಿಂದ ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಅಧಿಕಾರ ಶಾಶ್ವತವಲ್ಲ, ಅಭಿವೃದ್ಧಿಯ ಕೆಲಸವೇ ಶಾಶ್ವತ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಆಯ್ಕೆಯಾಗುವ ಅತ್ಯುತ್ತಮ ಜನಪ್ರಿಯ ವಿಜ್ಞಾನ ಪುಸ್ತಕಕ್ಕೆ ರೂ.20,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಆಸಕ್ತ ಲೇಖಕರು, ಬರಹಗಾರರು ಅಥವಾ ಪ್ರಕಾಶಕರು 2026ರ ನವೆಂಬರ್ 30ರೊಳಗಾಗಿ ತಮ್ಮ ಪುಸ್ತಕಗಳನ್ನು ಅಕಾಡೆಮಿಯ ವಿಳಾಸಕ್ಕೆ ತಲುಪಿಸಬೇಕಾಗಿದೆ.
ಪುಸ್ತಕಗಳನ್ನು ‘ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ.ಯು. ಆರ್. ರಾವ್ ವಿಜ್ಞಾನ ಭವನ, ತೋಟಗಾರಿಕೆ ವಿಜ್ಞಾನಗಳ ಕಾಲೇಜು ಮಹಾದ್ವಾರದ ಹತ್ತಿರ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ದೊಡ್ಡಬೆಟ್ಟಹಳ್ಳಿ ಬಡಾವಣೆ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು-560097′ ಈ ವಿಳಾಸಕ್ಕೆ ಕಳುಹಿಸಬೇಕು.
ಇದನ್ನೂ ಓದಿ: KPSC, KEA ಪರೀಕ್ಷೆಗಳಿಗೆ ತರಬೇತಿ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29721550, ಅಕಾಡೆಮಿಯ ವೆಬ್‍ಸೈಟ್ https://kstacademy.in ಸಂಪರ್ಕಿಸಬಹುದಾಗಿದೆ ಎಂದು ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆರ್.ಆನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

