
CHITRADURGA NEWS | 31 OCTOBER 2025
ಚಿತ್ರದುರ್ಗ: ಶಾಲಾ ಶಿಕ್ಷಣ ಇಲಾಖೆ, ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ, ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ, ಬೆಂಗಳೂರು ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಹೊಳಲ್ಕೆರೆ ಪಟ್ಟಣದ ವಾಗ್ದೇವಿ ಪ್ರೌಢ ಶಾಲೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಇದನ್ನೂ ಓದಿ: 26 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕಾರ
ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಡಯಟ್‌ನ ಉಪ ಪ್ರಾಂಶುಪಾಲರಾದ ಎಸ್.ನಾಗಭೂಷಣ್ ಪ್ರಶಸ್ತಿ ಪತ್ರ ವಿತರಿಸಿದರು.
ನೋಡಲ್ ಅಧಿಕಾರಿ ಶಿವಲೀಲ, ಉಪನ್ಯಾಸಕರಾದ ಎಸ್.ಬಸವರಾಜು, ರಾಮಣ್ಣ, ತೀರ್ಪುಗಾರರಾದ ದಾಸೇಗೌಡ, ಕೆ.ಆರ್.ಲೋಕೇಶ್, ನಾಗಭೂಷಣ್, ಮಧು ಮತ್ತಿತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
