CHITRADURGA NEWS | 24 OCTOBER 2026
ಚಿತ್ರದುರ್ಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇದೇ ಅಕ್ಟೋಬರ್ 27 ಮತ್ತು 28ರಂದು ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನೂ ಓದಿ: ಕಪ್ಪು ದ್ರಾಕ್ಷಿ ಸೇವಿಸಿ; ಈ ಪ್ರಯೋಜನವನ್ನು ಪಡೆಯಿರಿ
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಪಾಸ್ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಜಾತಿ ಪ್ರಮಾಣ ತರುವುದು.
ಹೆಚ್ಚಿನ ವಿವರಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮೊಬೈಲ್ ಸಂಖ್ಯೆ 9886002248, 9886803637ಗೆ ಸಂಪರ್ಕಿಸಬಹುದು. ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ರೈತರು ಮುಂಚಿತವಾಗಿ ವಾಟ್ಸಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾವಣೆ ಮಾಡಿಕೊಳ್ಳಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

