
CHITRADURGA NEWS | 24 FEBRUARY 2026
ಚಿತ್ರದುರ್ಗ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ಫೆ.25 ರಿಂದ 26 ರವರೆಗೆ ಚಿತ್ರದುರ್ಗ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರು | ₹36,000 ಕೋಟಿ ಬಾಕಿ ಬಿಲ್‌ಗಾಗಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ 25 ಜನರ ಗುರಿ ನಿಗಧಿಪಡಿಸಲಾಗಿದ್ದು, ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್ ಪೋರ್ಟ್ ಸೈಜ್ ಪೊಟೋ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ತರಬೇತಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9482943111, 9886002248ಗೆ ಸಂಪರ್ಕಿಸಲು ಕೋರಿದೆ. ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ರೈತರು ಮುಂಚಿತವಾಗಿ ವಾಟ್ಸಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾವಣಿ ಮಾಡಿಕೊಳ್ಳಬೇಕು ಎಂದು ಚಿತ್ರದುರ್ಗ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
