
CHITRADURGA NEWS | 09 SEPTEMBER 2025
ಚಿತ್ರದುರ್ಗ: ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪ್ರಧಾನ ಅಂಚೆ ಕಛೇರಿ ಪಕ್ಕದ ಪಶುಆಸ್ಪತ್ರೆ ಆವರಣದಲ್ಲಿರುವ ತರಬೇತಿ ಕೇಂದ್ರದಲ್ಲಿ, ರೈತರಿಗೆ ಪಶುಸಂಗೋಪನೆ ಕುರಿತು ವೈಜ್ಞಾನಿಕ ತರಬೇತಿ ನೀಡಲಾಗುವುದು.
ಸೆ.11 ರಿಂದ 12 ವರೆಗೆ ಕುರಿ ಸಾಕಾಣಿಕೆ, ಸೆ.15 ರಿಂದ 16 ವರೆಗೆ ಹೈನುಗಾರಿಕೆ, ಸೆ.22 ರಿಂದ 23 ವರಗೆ ಕೋಳಿ ಸಾಕಣಿಕೆ ಹಾಗೂ ಸೆ.25 ರಿಂದ 26 ವರೆಗೆ ಕುರಿ ಸಾಕಾಣಿಕೆ ಕುರಿತು ತರಬೇತಿ ನೀಡಲಾಗುವುದು.
ಇದನ್ನೂ ಓದಿ: ಚಳ್ಳಕೆರೆ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ | ಶಾಸಕ ಟಿ.ರಘುಮೂರ್ತಿ
ಪ್ರತಿ ತರಬೇತಿಯಲ್ಲಿ 25 ರೈತರು ಭಾಗವಹಿಸಲು ಅವಕಾಶವಿದೆ. ಆಸಕ್ತರು ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು ಜಾತಿ ಪ್ರಮಾಣ ಪತ್ರದ ಪ್ರತಿಯೊಂದಿಗೆ ಆಗಮಿಸಬೇಕು. ವಾಟ್ಸ್‍ಪ್ ಮೂಲಕವೂ ನೊಂದಣಿಗೆ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9482943111 ಹಾಗೂ 9886002248 ಸಂಪರ್ಕಿಸಬಹುದು. ತರಬೇತಿಗೆ ಯಾವುದೇ ಪ್ರೋತ್ಸಾಹ ಧನ ನೀಡುವುದಿಲ್ಲ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

