By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    suspended
    ಚುನಾವಣಾ ಕರ್ತವ್ಯ ಲೋಪ | ಶಿಕ್ಷಕಿ ಅಮಾನತು ಮಾಡಿ ಡಿಸಿ ವೆಂಕಟೇಶ್ ಆದೇಶ 
    1 hour ago
    ನವೋದಯ ವಿದ್ಯಾಲಯ
    ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದ ಪ್ರವೇಶ | ಅರ್ಜಿ ಆಹ್ವಾನ
    2 hours ago
    ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು
    ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
    2 hours ago
    ಅರ್ಜಿ ಅಹ್ವಾನ
    ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
    5 hours ago
    ಬಿ.ಕೆ.ಬಸವರಾಜ
    ಸರ್ಕಾರಿ ಕಲಾ ಕಾಲೇಜು ಸಹ ಪ್ರಾಧ್ಯಾಪಕ ಬಸವರಾಜ್ ಗೆ PHD 
    6 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    13 hours ago
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    14 hours ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    2 days ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    2 days ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    3 days ago
Reading: ಫೆ.28 ರಿಂದ ದ್ವಿತೀಯ PU ಪರೀಕ್ಷೆ-1 | 14,281 ವಿದ್ಯಾರ್ಥಿಗಳು, 26 ಪರೀಕ್ಷಾ ಕೇಂದ್ರಗಳು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಫೆ.28 ರಿಂದ ದ್ವಿತೀಯ PU ಪರೀಕ್ಷೆ-1 | 14,281 ವಿದ್ಯಾರ್ಥಿಗಳು, 26 ಪರೀಕ್ಷಾ ಕೇಂದ್ರಗಳು

News Desk Chitradurga News
Last updated: 26 February 2026 08:14
News Desk Chitradurga News
4 months ago
Share
ದ್ವಿತೀಯ ಪಿಯುಸಿ ಪರೀಕ್ಷೆ-01 ರ ಪೂರ್ವಸಿದ್ಧತೆ ಸಭೆ
ದ್ವಿತೀಯ ಪಿಯುಸಿ ಪರೀಕ್ಷೆ-01 ರ ಪೂರ್ವಸಿದ್ಧತೆ ಸಭೆ
SHARE

CHITRADURGA NEWS | 26 FEBRUARY 2026

ಚಿತ್ರದುರ್ಗ: ಫೆ.28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಜಿಲ್ಲೆಯಲ್ಲಿ 14,281 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಸುಗಮ ಹಾಗೂ ಗೊಂದಲ ರಹಿತವಾಗಿ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.

ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ ಪ್ರಶಸ್ತಿ | ಅರ್ಜಿ ಆಹ್ವಾನ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-01 ರ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಹಿಂದೆ ಪರೀಕ್ಷಾ ಅಕ್ರಮ ನಡೆದರೆ ಕೇವಲ ಇಲಾಖಾ ವಿಚಾರಣೆ ನಡೆಸಿ ಅಮಾನತು ಮಾಡಲಾಗುತ್ತಿತ್ತು. ಆದರೆ ಈಗ ಪರೀಕ್ಷಾ ಅಕ್ರಮ ತಡೆಗೆ ಹೊಸ ಕಾನೂನು ಜಾರಿಗೆ ಬಂದಿದ್ದು, ತಪ್ಪಿತಸ್ಥರ ಮೇಲೆ ಎಫ್‍ಐಆರ್ ದಾಖಲಿಸಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿಸಿದ ಅವರು, ಮುಕ್ತ ಮತ್ತು ನ್ಯಾಯಸಮ್ಮತವಾಗಿ ಪರೀಕ್ಷೆ ನಡೆಸುವ ಉದ್ದೇಶದಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದರೊಂದಿಗೆ ವೆಬ್‍ಕಾಸ್ಟಿಂಗ್ ಮೂಲಕ ಬೆಂಗಳೂರಿನಿಂದಲೂ ನೇರ ನಿಗಾ ಇಡಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳ ಬಗ್ಗೆ ವಿಶೇಷ ನಿಗಾ ವಹಿಸಬೇಕು. ಪರೀಕ್ಷಾ ಕೇಂದ್ರದ ಒಳಗೆ ಕೊಠಡಿ ಮೇಲ್ಚಿಚಾರಕರನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ಸ್ಕ್ಯಾಡ್ ಸದಸ್ಯರು ಅತ್ಯಂತ ಜವಾಬ್ದಾರಿಯಿಂದ ಕರ್ತವ್ಯನಿರ್ವಹಿಸಬೇಕು. ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆ ತರುವ ಯಾವುದೇ ಸಣ್ಣ ಲೋಪವನ್ನೂ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಪರೀಕ್ಷಾ ಸಮಯದಲ್ಲಿ ಏಕಾಗ್ರತೆ ವೃದ್ಧಿಗೆ ಆಯುಷ್ ಇಲಾಖೆಯ ವಿದ್ಯಾರ್ಥಿ ಚೇತನ ಸಹಕಾರಿ

ಪರೀಕ್ಷಾ ಭದ್ರತೆಯ ದೃಷ್ಟಿಯಿಂದ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಕೇಂದ್ರಗಳಿಗೆ ಸಾಗಿಸುವಾಗ ಮತ್ತು ಪರೀಕ್ಷೆಯ ನಂತರ ಉತ್ತರ ಪತ್ರಿಕೆಗಳನ್ನು ಅಂಚೆ ಕಚೇರಿಗೆ ತಲುಪಿಸುವಾಗ ಕಡ್ಡಾಯವಾಗಿ ಶಸ್ತ್ರಸಜ್ಜಿತ ಪೊಲೀಸ್ ಭದ್ರತೆ ಇರಲೇಬೇಕು. ಪರೀಕ್ಷಾ ಕೇಂದ್ರಗಳಲ್ಲಿ ತಹಶೀಲ್ದಾರ್ ನೇತೃತ್ವದ ತ್ರಿಸದಸ್ಯ ಸಮಿತಿಯು ಕಡ್ಡಾಯವಾಗಿ ಹಾಜರಿರಬೇಕು ಮತ್ತು ಯಾವುದೇ ಅಡೆತಡೆಯಿಲ್ಲದಂತೆ ಸಿಸಿಟಿವಿ ಕಾರ್ಯನಿರ್ವಹಿಸಲು ಇನ್ವರ್ಟರ್ ಅಥವಾ ಯುಪಿಎಸ್ ಬ್ಯಾಕಪ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಕರ್ಯ ಒದಗಿಸಿ:

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದ್ದು, ಇವು ಸುಸ್ಥಿತಿಯಲ್ಲಿರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಕುಡಿಯುವ ನೀರು, ಶೌಚಾಲಯ, ಬೆಳಕಿನ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅಗತ್ಯವಿರುವ ಬೆಂಚ್ ಮತ್ತು ಡೆಸ್ಕ್‍ಗಳ ಲಭ್ಯತೆಯನ್ನು ಪರಿಶೀಲಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಪೊಲೀಸ್ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಇದು ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ಪರೀಕ್ಷಾ ಮೇಲ್ವಿಚಾರಕರಿಗೂ ಅನ್ವಯಿಸುತ್ತದೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಅವರಿಗೆ ಮಾತ್ರ ಸಂವಹನಕ್ಕಾಗಿ ಬೇಸಿಕ್ ಕೀಪ್ಯಾಡ್ ಫೆÇೀನ್ ಬಳಸಲು ಅವಕಾಶ ನೀಡಲಾಗಿದೆ. ಸ್ಮಾರ್ಟ್ ವಾಚ್ ಹಾಗೂ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ ಎಂದು ತಿಳಿಸಿದರು.

26 ಪರೀಕ್ಷಾ ಕೇಂದ್ರಗಳು, 14,281 ವಿದ್ಯಾರ್ಥಿಗಳು :

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ತಿಮ್ಮಯ್ಯ ಮಾತನಾಡಿ, ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಜಿಲ್ಲೆಯಲ್ಲಿ 14,281 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಈ ಪೈಕಿ 12,371 ಹೊಸ ವಿದ್ಯಾರ್ಥಿಗಳು, 1,645 ಪುನರಾವರ್ತಿತ ಅಭ್ಯರ್ಥಿಗಳು, 173 ಖಾಸಗಿ ಅಭ್ಯರ್ಥಿಗಳು ಹಾಗೂ 5 ಮಂದಿ ಅಭ್ಯರ್ಥಿಗಳು ಫಲಿತಾಂಶ ಸುಧಾರಣೆಗಾಗಿ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಮೊಬೈಲ್‌ ಅಂಗಡಿ ಮಾಲಿಕನಿಗೆ ಚಾಕುವಿನಿಂದ ಹಲ್ಲೆ | ಆಸ್ಪತ್ರೆ ಬಳಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಚಿತ್ರದುರ್ಗ ತಾಲ್ಲೂಕಿನಲ್ಲಿ 10 ಪರೀಕ್ಷಾ ಕೇಂದ್ರಗಳು, ಚಳ್ಳಕೆರೆ, ಹಿರಿಯೂರು, ಹೊಸದುರ್ಗ ತಾಲ್ಲೂಕಿನಲ್ಲಿ ತಲಾ 04 ಪರೀಕ್ಷಾ ಕೇಂದ್ರಗಳು ಹಾಗೂ ಮೊಳಕಾಲ್ಮುರು ಮತ್ತು ಹೊಳಲ್ಕೆರೆ ತಾಲ್ಲೂಕಿನಲ್ಲಿ ತಲಾ 02 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 26 ಪರೀಕ್ಷಾ ಕೇಂದ್ರಗಳಿಗೆ 141 ಕಾಲೇಜುಗಳು ಟ್ಯಾಗ್ ಆಗಿವೆ ಎಂದು ತಿಳಿಸಿದರು.

ದ್ವಿತೀಯ ಪಿಯು ಪರೀಕ್ಷೆಯಲ್ಲಿ ವೆಬ್‍ಕಾಸ್ಟಿಂಗ್ ಇದ್ದು, ಇದರ ವೀಕ್ಷಣಾ ಕಾರ್ಯಕ್ಕೆ ಜಿಲ್ಲಾ ಪಂಚಾಯತ್‍ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಖಜಾನೆಯಲ್ಲಿ ಠೇವಣಿಸಿದ ಪ್ರಶ್ನೆ ಪತ್ರಿಕೆಗಳ ಬಂಡಲ್‍ಗಳ ವೀಕ್ಷಣೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಿಸಿ ಟಿವಿ ವೀಕ್ಷಣಾ ವ್ಯವಸ್ಥೆ ದಿನದ 24ಗಂಟೆಯೂ ಇರುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಶಿಕ್ಷಕಿ ಶೋಭಾ ಅವರಿಗೆ ರಾಷ್ಟ್ರಮಟ್ಟದ ಶಿಕ್ಷಣ ರತ್ನ ಪ್ರಶಸ್ತಿ

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅನಿಲ್ ನಾಗೇಗೌಡ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಶೀಲ್ದಾರ್‍ಗಳು ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPUC Examಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಿಯುಸಿ ಪರೀಕ್ಷೆ
Share This Article
Facebook Email Print
Previous Article car ವಾಸ್ತು ನಿಯಮದ ಪ್ರಕಾರ ಈ ವಿಗ್ರಹಗಳನ್ನು ಕಾರಿನಲ್ಲಿ ಇಡಬಾರದಂತೆ
Next Article ನಿವೃತ್ತ ಯೋಧ ನಾಗಭೂಷಣ್‍ CRPF ನಲ್ಲಿ 22 ವರ್ಷ ಸೇವೆ | ನಿವೃತ್ತ ಯೋಧ ನಾಗಭೂಷಣ್‍ಗೆ ಅಭಿನಂದನಾ ಸಮಾರಂಭ
Leave a Comment

Leave a Reply Cancel reply

Your email address will not be published. Required fields are marked *

suspended
ಚುನಾವಣಾ ಕರ್ತವ್ಯ ಲೋಪ | ಶಿಕ್ಷಕಿ ಅಮಾನತು ಮಾಡಿ ಡಿಸಿ ವೆಂಕಟೇಶ್ ಆದೇಶ 
ಮುಖ್ಯ ಸುದ್ದಿ
ನವೋದಯ ವಿದ್ಯಾಲಯ
ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದ ಪ್ರವೇಶ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು
ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up