
CHITRADURGA NEWS | 05 JUNE 2025
ಚಿತ್ರದುರ್ಗ: ಜೂನ್ 9 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದೆ. ಜಿಲ್ಲೆಯಲ್ಲಿ 8658 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 06 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ನಿಯಾಮಾನುಸಾರ ಪರೀಕ್ಷಾ ಕಾರ್ಯನಿರ್ವಹಿಸುವಂತೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?


ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಪರೀಕ್ಷಾ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ಸಹ ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರೀಕ್ಷೆಯ ವೆಬ್ ಕಾಸ್ಟಿಂಗ್ ಮಾಡಲಾಗುವುದು.
ಯಾವುದೇ ಅಕ್ರಮಗಳು ಕಂಡುಬ0ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಕ್ರಮದಲ್ಲಿ ಭಾಗಿಯಾದವರ ವಿರುದ್ದ ಎಫ್.ಐ.ಆರ್ ಸಹ ದಾಖಲಾಗುತ್ತದೆ. ಅಧಿಕಾರಿ ಹಾಗೂ ಸಿಬ್ಬಂದಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಪಾವಿತ್ರತೆ ಕಾಪಾಡಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದರು.
Also Read: ಮುಖ ಸ್ವಚ್ಛಗೊಳಿಸಲು ತೆಂಗಿನ ಎಣ್ಣೆಯೊಂದಿಗೆ ಇದನ್ನು ಬೆರೆಸಿ ಹಚ್ಚಿ
ಶಾಲೆ ಹಾಗೂ ಕಾಲೇಜುಗಳು ಪ್ರಾರಂಭವಾಗಿರುವುದರಿ0ದ ಸಂಯುಕ್ತ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪಿಯು ಪರೀಕ್ಷೆ ನಡೆಯುವ ಅವಧಿಗೆ ಬಿಡುವು ನೀಡಬೇಕು. ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ 144 ಸೆಕ್ಷನ್ ಎಂದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ತೆರೆಯುವಂತಿಲ್ಲ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಕೊಂಡೊಯ್ಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ 06 ಮಾರ್ಗಗಳ ತಂಡಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ ನೀಡಬೇಕು.
ಮುಂಚಿತವಾಗಿ ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಕೊಂಡ್ಯೊಯುವ 06 ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರ ಮುಖ್ಯಸ್ಥರು ಬೇಸಿಕ್ ಸೆಟ್ ಮಾತ್ರ ಉಪಯೋಗಿಸಬೇಕು. ಇದನ್ನು ಹೊರತು ಪಡಿಸಿ, ಪರೀಕ್ಷೆ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿ ಕೂಡ ಯಾವುದೇ ಮೊಬೈಲ್ ಬಳಸುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ತಿಮ್ಮಯ್ಯ ಮಾತನಾಡಿ, ಚಿತ್ರದುರ್ಗ ಸೇರಿದಂತೆ ಎಲ್ಲ ತಾಲ್ಲೂಕು ಕೇಂದ್ರಗಳ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 6 ಪರೀಕ್ಷಾ ಕೇಂದ್ರಗಳಿದ್ದು ಒಟ್ಟು 8658 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ.
Also Read: ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಸೌಂದರ್ಯದ ರಹಸ್ಯ ತಿಳಿದುಕೊಳ್ಳಿ
ಜಿಲ್ಲೆಯಲ್ಲಿ ಸೂಕ್ಷ ಹಾಗೂ ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇಲ್ಲ. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಅವಶ್ಯಕತೆ ಇದೆ. ಪರೀಕ್ಷೆ ಪ್ರಾರಂಭವಾಗುವುದಕ್ಕಿ0ತ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಕಲ್ಪಿಸಬೇಕು.
ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವಾಗ ಸಿ.ಸಿ ಟಿವಿ ವೀಕ್ಷಣೆಯಡಿಯಲ್ಲಿ ಕಾರ್ಯನಿರ್ವಹಿಸುವುದು ಮತ್ತು ಎಲ್ಲ ಕೊಠಡಿಗಳಿಗೆ ಸಿ.ಸಿ ಟಿವಿ ಅಳವಡಿಸುವುದು.
ಚಿತ್ರದುರ್ಗ ಜಿಲ್ಲಾ ಪಂಚಾಯತ್‍ನಲ್ಲಿ ಜಿಲ್ಲೆಯ ಎಲ್ಲಾ 06 ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
Also Read: ಇಂದಿರಾ ಕ್ಯಾಂಟೀನ್ ಊಟದ ಮೆನು ವ್ಯತ್ಯಾಸ | ಹೆಚ್ಚುವರಿ ಹಣ | ಪರಿಶೀಲಿಸಿ ಅಮಾನತು ಸಚಿವ ರಹೀಂ ಖಾನ್
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಪರೀಕ್ಷಾ ವೇಳಾಪಟ್ಟಿ :ಜೂ. 9 ರಂದು ಕನ್ನಡ, ಅರೇಬಿಕ್. ಜೂ.10 ರಂದು ಇತಿಹಾಸ, ಭೌತಶಾಸ್ತ್ರ, ಜೂ.11 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ. ಜೂ.12 ರಂದು ರಸಾಯನಶಾಸ್ತç, ಅರ್ಥಶಾಸ್ತ್ರ, ಜೂ.13 ರಂದು ಇಂಗ್ಲೀಷ್, ಜೂ.14 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣಶಾಸ್ತ್ರ, ಗೃಹವಿಜ್ಞಾನ, ಜೂ.16 ರಂದು ಸಮಾಜಶಾಸ್ತç, ಭೂಗರ್ಭಶಾಸ್ತ್ರ, ವಿದ್ಯುನ್ಮಾನ ಶಾಸ್ತç, ಗಣಕ ವಿಜ್ಞಾನ, ಜೂ.17 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಜೂ.18 ರಂದು ಹಿಂದಿ, ಜೂ.19 ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ, ಜೂ.20 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಪರೀಕ್ಷೆಗಳು ನಡೆಯಲಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
