ಮುಖ್ಯ ಸುದ್ದಿ
ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಆಯ್ಕೆಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಮಾರ್ಚ್ 12 ಕೊನೆ ದಿನ

CHITRADURGA NEWS | 08 MARCH 2025
ಚಿತ್ರದುರ್ಗ: ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ಸಹಾಯಧನ ನೀಡಲು ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
Also Read: ಬಡವರ ಪಾಲಿನ ದೇವರು | ಡಾ.ಜಯರಾಮ್ ಇನ್ನು ನೆನಪು ಮಾತ್ರ | ನುಡಿನಮನ
ಎಸ್.ಸಿ.ಎಸ್.ಪಿ, ಟಿ,ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ರೂ 5 ಲಕ್ಷಗಳ ಸಹಾಯಧನ ನೀಡಲು ಉದ್ದೇಶಿಸಲಾಗಿರುತ್ತದೆ.
ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಚಿತ್ರದುರ್ಗ ಜಿಲ್ಲೆಯ ಪರಿಶಿಷ್ಟ ಜಾತಿ-06 ಮತ್ತು ಪರಿಶಿಷ್ಟ ಪಂಗಡದ-05 ಅಭ್ಯರ್ಥಿಗಳು ಸೇರಿದಂತೆ ಒಟ್ಟು 11 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗದಿಪಡಿಸಿ 2025ರ ಜ.23 ರಿಂದ ಜ.31ರವರೆಗೆ ಅರ್ಜಿ ಕರೆಯಲಾಗಿತ್ತು.
Also Read: 200 ಖಾಲಿ ಹುದ್ದೆಗಳಿಗೆ ಮಾ.13ರಂದು ನೇರ ನೇಮಕಾತಿ ಸಂದರ್ಶನ
2025ರ ಫೆ.21ರಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, 2025ರ ಮಾರ್ಚ್ 04ರಂದು ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರವಾಸೋದ್ಯಮ ಇಲಾಖೆಯ ಸೂಚನಾ ಫಲಕದಲ್ಲಿ ಅಳವಡಿಸಲಾಗಿದ್ದು, ಫಲಾನುಭವಿಗಳ ಆಯ್ಕೆಯ ಬಗ್ಗೆ ಯಾವುದಾದರು ಅಭ್ಯರ್ಥಿಗಳು ಈ ವಿಷಯದಲ್ಲಿ ಆಕ್ಷೇಪಣೆ ಇದ್ದಲ್ಲಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಚಿತ್ರದುರ್ಗ ಇವರಿಗೆ 2025ರ ಮಾರ್ಚ್ 12 ರವರೆಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಚಿತ್ರದುರ್ಗ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
