ಮುಖ್ಯ ಸುದ್ದಿ
ವಸತಿ ಯೋಜನೆಗೆ 129 ಫಲಾನುಭವಿಗಳ ಆಯ್ಕೆ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅಧ್ಯಕ್ಷತೆಯಲ್ಲಿ ಸಭೆ

CHITRADURGA NEWS | 30 JANUARY 2024
ಚಿತ್ರದುರ್ಗ: ಗಣಿ ಬಾಧಿತ ಪ್ರದೇಶಗಳಲ್ಲಿ ವಾಸ ಮಾಡುವ ವಸತಿ ರಹಿತ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು 129 ವಸತಿ ರಹಿತ ಫಲಾನುಭವಿಗಳನ್ನು ಗ್ರಾಮ ಸಭೆಯ ಮೂಲಕ ಆಯ್ಕೆ ಮಾಡಲಾಯಿತು.
ಇದನ್ನೂ ಓದಿ: ರಂಗೇರಿದ ಎಂಎಲ್ಸಿ ಚುನಾವಣಾ ಕಣ
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಬೊಮ್ಮೆನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮಂಗಳವಾರ ನಡೆದ ಗ್ರಾಮ ಸಭೆಗಳಲ್ಲಿ ಆಯ್ಕೆ ಮಾಡಲಾಯಿತು.
ಬೊಮ್ಮನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಮ್ಮೇನಹಳ್ಳಿ, ಕಡ್ಲೆಗುದ್ದು ಮತ್ತು ಮೇಗಳಹಳ್ಳಿ ಗ್ರಾಮಗಳಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ ಗಣಿ ಬಾಧಿತ ಪ್ರದೇಶಗಳಲ್ಲಿ ವಾಸ ಮಾಡುವ ವಸತಿ ರಹಿತ ಫಲಾನುಭವಿಗಳಿಗೆ ವಸತಿ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಲು 129 ವಸತಿ ರಹಿತ ಫಲಾನುಭವಿಗಳನ್ನು ಗ್ರಾಮ ಸಭೆಯ ಮೂಲಕ ಆಯ್ಕೆ ಮಾಡಲಾಯಿತು.
ಇದನ್ನೂ ಓದಿ: ಜನವರಿ 30ರ ಅಡಿಕೆ ಧಾರಣೆ
ಗ್ರಾಮ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಗ್ರಾಮಸ್ಥರು, ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಸಭೆಯಲ್ಲಿ ಹಾಜರಿದ್ದರು.
