CHITRADURGA NEWS | 12 MARCH 2026
ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಸಿದ್ಧಪಡಿಸಲಾಗುತ್ತಿರುವ ‘ವಚನ ಕಲ್ಯಾಣ’ ಎಂಬ 9 ಗಂಟೆಗಳ ಕಾಲಾವಧಿಯ ಅಹೋರಾತ್ರಿ ನಾಟಕ ಪ್ರದರ್ಶನಕ್ಕಾಗಿ ಪ್ರತಿಭಾವಂತ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 20 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ ಸನ್ಮಾನ | ಸುಜ್ಞಾನ ಸಂಗಮ
ರಾಜ್ಯಾದ್ಯಂತ ಪ್ರದರ್ಶನಗೊಳ್ಳಲಿರುವ ಈ ಬೃಹತ್ ರಂಗ ಪ್ರಯೋಗದಲ್ಲಿ ಭಾಗವಹಿಸಲು ಆಸಕ್ತಿಯಿರುವ ಯುವಕ-ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು/ಗಾಯಕರು ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿ 18 ರಿಂದ 40 ವರ್ಷಗಳು. ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಆದ್ಯತೆ ನೀಡಲಾಗುವುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 20 ರೊಳಗೆ ಸದಸ್ಯ ಕಾರ್ಯದರ್ಶಿಗಳು, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ತಲುಪುವಂತೆ ಅಥವಾ ಇ-ಮೇಲ್ ಮೂಲಕ: kanakaresearchcentre@gmail.com ವಿಳಾಸಕ್ಕೂ ಅರ್ಜಿ ಸಲ್ಲಿಸಬಹುದು.
ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳ ಕಾಲ ಪೂರ್ಣಕಾಲಿಕವಾಗಿ ತರಬೇತಿ ಹಾಗೂ ಪ್ರದರ್ಶನಗಳಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ಈ ಅವಧಿಯಲ್ಲಿ ಕಲಾವಿದರಿಗೆ ಮಾಸಿಕ ಗೌರವಧನ ನೀಡಲಾಗುವುದು ಹಾಗೂ ಊಟ-ವಸತಿ ವ್ಯವಸ್ಥೆಯನ್ನು ಇಲಾಖೆಯೇ ಕಲ್ಪಿಸಲಿದೆ. ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕøತಿಯ ಇಲಾಖೆಯ ವೆಬ್‍ಸೈಟ್ kannadasiri.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಇದನ್ನೂ ಓದಿ: ಅಂಬೇಡ್ಕರ್, ಬಾಬು ಜಗಜೀವನ್ ರಾಂ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಹೆಚ್ಚಿನ ಮಾಹಿತಿಗಾಗಿ ನಾಟಕದ ನಿರ್ದೇಶಕ ಸಿ. ಬಸವಲಿಂಗಯ್ಯ ಅವರ ಮೊಬೈಲ್ ಸಂಖ್ಯೆ 94485 38620 ಗೆ ಸಂಪರ್ಕಿಸಬಹುದು. ಸಂದರ್ಶನಕ್ಕೆ ಹಾಜರಾಗುವ ಕಲಾವಿದರಿಗೆ ಇಲಾಖೆಯು ಯಾವುದೇ ಭತ್ಯೆ ನೀಡಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

