CHITRADURGA NEWS | 03 FEBRUARY 2026
ಚಿತ್ರದುರ್ಗ: ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದ ಕ್ರೀಡಾ ವಸತಿ ಶಾಲೆಗೆ ವಾಲಿಬಾಲ್ ಹಾಗೂ ಅಥ್ಲೆಟಿಕ್ಸ್ ಕ್ರೀಡೆಗಳಲ್ಲಿ 2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಭಾವಂತ ಬಾಲಕ ಹಾಗೂ ಬಾಲಕಿಯರನ್ನು ಗುರುತಿಸಿ ಕ್ರೀಡಾಶಾಲೆಗೆ ಪ್ರವೇಶ ನೀಡಲಾಗುವುದು.
ಇದನ್ನೂ ಓದಿ: ದೊಡ್ಡಪೇಟೆಯಲ್ಲಿ ಹಿಂದೂ ಸಂಗಮ | ಚಿಂತಕ ವಿಕಾಸ್ ಪುತ್ತೂರು ಭಾಗೀ | ಶೋಭಾಯಾತ್ರೆಗೆ ಮೆರಗು ತಂದ ಪುಟಾಣಿಗಳು
ಪ್ರವೇಶ ಪಡೆದ ಬಾಲಕ-ಬಾಲಕಿಯರಿಗೆ ಇಲಾಖೆಯ ವತಿಯಿಂದ ಉಚಿತವಾಗಿ ಊಟ, ವಸತಿ ಮತ್ತು ಕ್ರೀಡಾ ಪರಿಣಿತರುಗಳಿಂದ ತರಬೇತಿಯನ್ನು ನೀಡಿ ಅತ್ಯುತ್ತಮ ಕ್ರೀಡಾಪಟುಗಳನ್ನಾಗಿ ರೂಪುಗೊಳಿಸಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ರೀತಿಯಲ್ಲಿ ತರಬೇತಿಗೊಳಿಸಲಾಗುವುದು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 4ನೇ ತರಗತಿಯಲ್ಲಿ ಓದುತ್ತಿರುವ ಮತ್ತು 2026 ಜೂನ್ 1ಕ್ಕೆ 10 ವರ್ಷ ಮತ್ತು 11 ವರ್ಷ ಮೀರದ ಬಾಲಕ ಬಾಲಕಿಯರು ಆಯ್ಕೆಯಲ್ಲಿ ಭಾಗವಹಿಸಬಹುದು. ಆಯ್ಕೆಯಲ್ಲಿ ಅಭ್ಯರ್ಥಿಗಳ ದೈಹಿಕ ಸಾಮಥ್ರ್ಯ, ಶಕ್ತಿ, ಚಾಕಚಕ್ಯತೆ, ಸಹಿಷ್ಣುತೆ, ಕುಶಲತೆ, ವೇಗ ಹಾಗೂ ಆಯಾ ಕ್ರೀಡೆಗೆ ಅಗತ್ಯವಿರುವ ಎತ್ತರ ಪರೀಕ್ಷಿಸಿ ಒಟ್ಟಾರೆ ಶೇ.50 ಕ್ಕೂ ಹೆಚ್ಚು ಅಂಕಗಳನ್ನು ಪಡೆದವರಿಗೆ ಯೋಗ್ಯತಾನುಸಾರ ಆಯ್ಕೆಗೆ ಪರಿಗಣಿಸಲಾಗುವುದು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಆಯ್ಕೆ ನಡೆಸಲಾಗುತ್ತಿದ್ದು, ಆಯ್ಕೆ ನಡೆಯುವ ಸ್ಥಳ, ವೇಳ ಹಾಗೂ ದಿನಾಂಕಗಳ ವಿವರ ಈ ಕೆಳಗಿನಂತಿದೆ.
ಇದನ್ನೂ ಓದಿ: ಕಟ್ಟಕಡೆಯ ವ್ಯಕ್ತಿಗೂ ಉಚಿತ ಆರೋಗ್ಯ ಸೇವೆ | ಬಿ.ಮೂಗಪ್ಪ
ಫೆ.5ರಂದು ಬೆಳಿಗ್ಗೆ 11 ರಿಂದ ಮೊಳಕಾಲ್ಮೂರು ಸರ್ಕಾರಿ ಪದವಿ ಪೂರ್ವ ಕಾಲೇಜು, ಫೆ.6 ರಂದು ಬೆಳಿಗ್ಗೆ 11 ರಿಂದ ಚಳ್ಳಕೆರೆ ತಾಲ್ಲೂಕು ಕ್ರೀಡಾಂಗಣ, ಫೆ.7 ರಂದು ಬೆಳಿಗ್ಗೆ 11 ರಿಂದ ಹೊಳಲ್ಕೆರೆ ತಾಲ್ಲೂಕು ಕ್ರೀಡಾಂಗಣ, ಫೆ.9ರಂದು ಬೆಳಿಗ್ಗೆ 11 ರಿಂದ ಹೊಸದುರ್ಗ ತಾಲ್ಲೂಕು ಕ್ರೀಡಾಂಗಣ, ಫೆ.10ರಂದು ಬೆಳಿಗ್ಗೆ 11 ರಿಂದ ಹಿರಿಯೂರು ತಾಲ್ಲೂಕು ಕ್ರೀಡಾಂಗಣ , ಫೆ.11ರಂದು ಬೆಳಿಗ್ಗೆ 11 ರಿಂದ ಚಿತ್ರದುರ್ಗ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.
ಜಿಲ್ಲಾ ಮಟ್ಟದ ಆಯ್ಕೆಯನ್ನು ಫೆ. 12 ರಿಂದ 14 ರವರೆಗೆ ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.
ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ತಾಲ್ಲೂಕು ಕೇಂದ್ರಗಳಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದಲ್ಲಿ ಫೆ.12 ಮತ್ತು ಫೆ.14 ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆಯುವ ಆಯ್ಕೆ ಟ್ರಯಲ್ಸ್‍ನಲ್ಲಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಭಾಗವಹಿಸಬಹುದಾಗಿದೆ. ಆಯ್ಕೆಯಲ್ಲಿ ಭಾಗವಹಿಸುವ ಬಾಲಕ-ಬಾಲಕಿಯರಿಗೆ ಯಾವುದೇ ರೀತಿಯ ಭತ್ಯೆಯನ್ನು ಇಲಾಖೆ ವತಿಯಿಂದ ನೀಡಲಾಗುವುದಿಲ್ಲ.
ಇದನ್ನೂ ಓದಿ: ಅಡಿಕೆ ಧಾರಣೆ | 2 ಫೆಬ್ರವರಿ | ಚನ್ನಗಿರಿ, ಭೀಮಸಮುದ್ರ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್ಸ್
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ, ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣ, ಚಿತ್ರದುರ್ಗ, ಕಛೇರಿ ದೂರವಾಣಿ ಸಂಖ್ಯೆ 08194-235635 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
