By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    2 hours ago
    ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್‍ಗೆ ಅರ್ಜಿ ಆಹ್ವಾನ
    2 hours ago
    jobs in chitradurga news
    ಇಸ್ರೋದಲ್ಲಿ ಉದ್ಯೋಗಾವಕಾಶ | ಮಾಜಿ ಸೈನಿಕರಿಂದ ಅರ್ಜಿ ಅಹ್ವಾನ 
    2 hours ago
    Bhadra water flow
    ಭದ್ರಾ ನೀರು ಇನ್ನೆಷ್ಟು ದಿನ ಹರಿಯುತ್ತೆ ? | ಕೆರೆಗಳಿಗೆ ತುಂಬುತ್ತಾ ? | ಮುಖ್ಯ ಇಂಜಿನಿಯರ್‌ ರವಿಶಂಕರ್‌ ಉತ್ತರ ಏನು ?
    4 hours ago
    ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ
    ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ–ಮಗುವಿನ ಆರೋಗ್ಯ ರಕ್ಷಣೆ | ಲಲಿತಮ್ಮ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    6 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    7 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    3 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    19 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    5 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Body inflammation
    ದೇಹದ ಉರಿಯೂತವನ್ನು ನಿವಾರಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಈ ಸೂಪರ್‌ಫುಡ್‌ಗಳನ್ನು ಸೇರಿಸಿಕೊಳ್ಳಿ
    3 hours ago
    Taking deep breaths
    ಆಳವಾದ ಉಸಿರನ್ನು ತೆಗೆದುಕೊಳ್ಳುವುದರಿಂದ ದೇಹಕ್ಕೆ ಈ ಪ್ರಯೋಜನಗಳು ದೊರೆಯುತ್ತದೆಯಂತೆ
    4 hours ago
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    1 day ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    1 day ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    2 days ago
Reading: LATEST NEWS-ಪ್ರಪ್ರಥಮ ಅಂತರ್ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಸಾಣೇಹಳ್ಳಿ ಶ್ರೀಗಳ ಆಯ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

LATEST NEWS-ಪ್ರಪ್ರಥಮ ಅಂತರ್ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಸಾಣೇಹಳ್ಳಿ ಶ್ರೀಗಳ ಆಯ್ಕೆ

chitradurganews.com
Last updated: 1 October 2023 14:50
chitradurganews.com
3 years ago
Share
Sri Sanehalli Panditaradhya Swamiji
SHARE

ಚಿತ್ರದುರ್ಗ ನ್ಯೂಸ್.ಕಾಂ: ಪ್ರಪ್ರಥಮ ಅಂತರ್ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಣೇಹಳ್ಳಿ ಮಠದ ಡಾ.ಶ್ರೀ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ.

2023 ಡಿಸೆಂಬರ್ 30 ಹಾಗೂ 31 ರಂದು ಸಾಣೇಹಳ್ಳಿಯಲ್ಲಿ ಚಿತ್ರದುರ್ಗ-ಚಿಕ್ಕಮಗಳೂರು ಎರಡೂ ಜಿಲ್ಲೆಗಳನ್ನೊಳಗೊಂಡ ಅಂತರ್ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನಕ್ಕೆ ಶ್ರೀಗಳು ಗೌರವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಎರಡು ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆಯಲ್ಲಿ ಶ್ರೀಗಳ ಹೆಸರನ್ನು ಅನುಮೋದಿಸಲಾಗಿದೆ.

ಶ್ರೀಗಳು ಸ್ವತಃ ವೈಚಾರಿಕ ಲೇಖಕರಾಗಿ, ನಾಟಕಕಾರರಾಗಿ, ರಂಗ ಸಂಘಟಕರಾಗಿ ರಾಜ್ಯದಲ್ಲಿ ಮನೆಮಾತಾಗಿದ್ದಾರೆ. ಅವರ ನಾಟಕ ಚಟುವಟಿಕೆಗಳು ರಾಜ್ಯ, ದೇಶದ ಗಡಿಗಳನ್ನು ಮೀರಿವೆ. ಸಾಣೇಹಳ್ಳಿ ಪುಟ್ಟ ಗ್ರಾಮವನ್ನು ತಮ್ಮ ರಂಗ ಚಟುವಟಿಕೆಗಳ ಮೂಲಕ ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಕೀರ್ತಿ ಪಂಡಿತಾರಾಧ್ಯರಿಗೆ ಸಲ್ಲುತ್ತದೆ.

ಇದನ್ನೂ ಓದಿ: ಸಾಣೇಹಳ್ಳಿ ಶ್ರೀಗಳ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ: ದೇಶದ ಮೊದಲ ವಚನ ಅಭಿಯಾನಕ್ಕೆ ಪ್ರಶಂಸೆ

ಚಿತ್ರದುರ್ಗ ಜಿಲ್ಲೆಯ ತಳಕು ಮತ್ತು ಬೆಳಗೆರೆ ಸಾಹಿತ್ಯಕ್ಕೆ ಹೆಸರು ಪಡೆದರೆ, ಸಾಣೆಹಳ್ಳಿ ಗ್ರಾಮವು ರಂಗಭೂಮಿ ಚಟುವಟಿಕೆಗೆ ರಾಜ್ಯ ಮತ್ತು ದೇಶದಲ್ಲಿ ಗಮನ ಸೆಳೆದಿದೆ. ಇದರ ಹಿಂದಿನ ಪೂರ್ಣ ಪ್ರಯತ್ನ ಶ್ರೀ ಗಳದ್ದಾಗಿದೆ. ಇವರ ಸಾಹಿತ್ಯ, ರಂಗಭೂಮಿ, ವಚನ ಸಾಹಿತ್ಯ ಪ್ರಸಾರ, ಶಿಕ್ಷಣ, ದಾಸೋಹಗಳ ಕೊಡುಗೆಗಳನ್ನು ಸ್ಮರಿಸಿ, ಕಸಾಪದ ಎರಡೂ ಜಿಲ್ಲಾ ಘಟಕಗಳು ಶ್ರೀ ಪಂಡಿರಾಧ್ಯರನ್ನು ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಘೋಷಿಸಿದೆ.

ಸಾಹಿತ್ಯ ಕೃಷಿಯಲ್ಲಿ ಸಾಣೇಹಳ್ಳಿ ಶ್ರೀಗಳು:
50 ಕ್ಕೂ ಹೆಚ್ಚು ಸ್ವತಂತ್ರ ವೈಚಾರಿಕ ಕೃತಿಗಳು, 6 ನಾಟಕ ಮತ್ತು 1 ಪ್ರವಾಸ ಕಥನ, ಎರಡು ವಚನ ಕೃತಿಗಳನ್ನು ಪಂಡಿತಾರಾಧ್ಯ ಶ್ರೀಗಳು ರಚಿಸಿದ್ದಾರೆ. 2004 ರಲ್ಲಿ ಹೊಸದುರ್ಗದಲ್ಲಿ ಜರುಗಿದ ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಇದೀಗ ಮೊದಲ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎರಡೂ ಜಿಲ್ಲೆಗಳ ಕಸಾಪದ ಪದಾಧಿಕಾರಿಗಳ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ಮತ್ತು ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಹಾಗೂ ಎರಡೂ ಜಿಲ್ಲೆಗಳ ಕಸಾಪ ಪದಾಧಿಕಾರಿಗಳ ಪೂರ್ಣ ಒಮ್ಮತದಿಂದ ಸಮ್ಮೇಳನಾಧ್ಯಕ್ಷರ ಆಯ್ಕೆ ಜರುಗಿದೆ.

ಪಂಡಿತಾರಾಧ್ಯ ಶ್ರೀಗಳಿಗೆ 1998 ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ‘ಗೌರವ ಫೆಲೋಷಿಪ್’, 2004 ರಲ್ಲಿ ಕರ್ನಾಟಕ ಸರ್ಕಾರ ‘ರಾಜ್ಯೋತ್ಸವ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಂತಾರಾಷ್ಟ್ರೀಯ ರೋಟರಿ ಸಂಸ್ಥೆ ‘ಫಾಲ್ ಹ್ಯಾರಿಸ್’ ಪ್ರಶಸ್ತಿ ನೀಡಿದೆ. 2007 ರಲ್ಲಿ ‘ಕೆ.ವಿ.ಶಂಕರೇಗೌಡ’ ಸೇವಾ ಪ್ರಶಸ್ತಿ, 2010ರಲ್ಲಿ ‘ದುರ್ಗದ ಸಿರಿ’ ಪ್ರಶಸ್ತಿ, 2012ರಲ್ಲಿ ಕುವೆಂಪು ವಿವಿ ‘ಗೌರವ ಡಾಕ್ಟರೇಟ್’ ಹಾಗೂ ಆಳ್ವಾಸ್ ‘ನುಡಿಸಿರಿ’ ಪ್ರಶಸ್ತಿ ಮತ್ತು 2013ರಲ್ಲಿ ದುಬೈ ‘ಶ್ರೀರಂಗ’ ಧ್ವನಿ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ.

ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳ ಹಿನ್ನೆಲೆ:
1951 ಸೆಪ್ಟಂಬರ್ 4 ರಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಹೆಡಿಯಾಲ ಗ್ರಾಮದಲ್ಲಿ ಜನನ. ಪೂರ್ವಾಶ್ರಮದ ತಂದೆ ನಾಗಯ್ಯ, ತಾಯಿ ಶಿವನಮ್ಮ.

ಪ್ರಾಥಮಿಕ ಶಿಕ್ಷಣವನ್ನು ಹೆಡಿಯಾಲದಲ್ಲಿ, ಪ್ರೌಢ ಶಿಕ್ಷಣವನ್ನು ಸುಣಕಲ್ಲು ಬಿದರಿಯಲ್ಲಿ, ಕಾಲೇಜು ಶಿಕ್ಷಣವನ್ನು ಸಿರಿಗೆರೆಯಲ್ಲಿ ಪಡೆದರು. ಮೈಸೂರು ವಿವಿಯಿಂದ 1974 ರಲ್ಲಿ ತತ್ವ ಶಾಸ್ತ್ರ ವಿಷಯದಲ್ಲಿ ಸ್ನಾತಕೊತ್ತರ ಪದವಿಯನ್ನು ಪ್ರಥಮ ರ್ಯಾಂಕನ್ನು ಚಿನ್ನದ ಪದಕದೊಂದಿಗೆ ಪಡೆದರು.

1977 ಡಿಸೆಂಬರ್ 25 ರಂದು ಸಾಣೆಹಳ್ಳಿಯ ಪೀಠಾಧ್ಯಕ್ಷರಾದರು. 1987 ರಲ್ಲಿ ಶ್ರೀ ಶಿವಕುಮಾರ ಕಲಾ ಸಂಘ ಸ್ಥಾಪಿಸಿದರು. 1990 ರಲ್ಲಿ ಶಿವಸಂಚಾರ ರೆಫರರ್ಟರಿ ಆರಂಭಿಸಿದರು. 2003 ರಲ್ಲಿ ಸಿ.ಜಿ.ಕೆ. ಆಸಕ್ತಿಯಿಂದ 5 ಸಾವಿರ ಆಸನಗಳ ಸಾಮಥ್ರ್ಯದ ಗ್ರೀಕ್ ಮಾದರಿಯ ಸುಸಜ್ಜಿತ ಬಯಲು ರಂಗ ಮಂದಿರ ಸಾಣೇಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿದೆ.

ಕಳೆದ 12 ವರ್ಷಗಳಿಂದ ಶ್ರೀ ಶಿವಕುಮಾರ ಕಲಾಸಂಘದ ವತಿಯಿಂದ ಶ್ರೀ ಶಿವಕುಮಾರ ರಂಗ ಪ್ರಶಸ್ತಿ ನೀಡುತ್ತಲಿದೆ. 2007 ರಲ್ಲಿ ಭಾರತ ಸಂಚಾರ, ಶಿವದೇಶ ಸಂಚಾರದ ಮೂಲಕ ಭಾರತಾಧ್ಯಂತ ಪರ್ಯಟನೆ ಮಾಡಿ 21 ರಾಜ್ಯಗಳಲ್ಲಿ ಮರಣವೇ ಮಹಾ ನವಮಿ, ಶರಣ ಸತಿ, ಲಿಂಗಪತಿ, ಜಂಗಮದೆಡೆಗೆ ಸೇರಿದಂತೆ ಶರಣ ತತ್ವ ಪ್ರತಿಪಾದಿಸುವ 10 ನಾಟಕಗಳನ್ನು ಹಿಂದಿ ಅವತರಣಿಕೆಯಲ್ಲಿ ಪ್ರದರ್ಶಿಸಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChikkamagaluruChitradurgaChitradurga UpdatesDr.Sri.Panditaradhya Shivacharya SwamijiHosadurgaInter District Literary ConferenceKannada Latest NewsKannada Literary ConferenceKasapasanehalliSanehalli SriSarvadhyakshaಅಂತರ್ ಜಿಲ್ಲಾ ಸಾಹಿತ್ಯ ಸಮ್ಮೇಳನಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸಾಹಿತ್ಯ ಸಮ್ಮೇಳನಕಸಾಪಚಿಕ್ಕಮಗಳೂರುಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಡಾ.ಶ್ರೀ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಸರ್ವಾಧ್ಯಕ್ಷರುಸಾಣೇಹಳ್ಳಿಸಾಣೇಹಳ್ಳಿ ಶ್ರೀಹೊಸದುರ್ಗ
Share This Article
Facebook Email Print
Previous Article ಎನ್.ದೇವರಹಳ್ಳಿಗೆ ವಿಶೇಷ ಚೇತನ ದಂಪತಿ ಪ್ರವೇಶ ದಂಪತಿ ಬಹಿಷ್ಕಾರ ಪ್ರಕರಣ | ಶಾಂತಿಯುತ ಅಂತ್ಯ | ಎನ್.ದೇವರಹಳ್ಳಿಗೆ ವಿಶೇಷ ಚೇತನ ದಂಪತಿ ಪ್ರವೇಶ
Next Article ಲೇಸರ್ ಶೋ ಬಾನಂಗಳದಲ್ಲಿ ಚಿತ್ತಾರ ಮೂಡಿಸುವ ಲೇಸರ್ ಶೋಗೆ ಕ್ಷಣಗಣನೆ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್‍ಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
jobs in chitradurga news
ಇಸ್ರೋದಲ್ಲಿ ಉದ್ಯೋಗಾವಕಾಶ | ಮಾಜಿ ಸೈನಿಕರಿಂದ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
Body inflammation
ದೇಹದ ಉರಿಯೂತವನ್ನು ನಿವಾರಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಈ ಸೂಪರ್‌ಫುಡ್‌ಗಳನ್ನು ಸೇರಿಸಿಕೊಳ್ಳಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up