CHITRADURGA NEWS | 11 SEPTEMBER 2024
ಚಿತ್ರದುರ್ಗ: ಸಾಲದ ಹೊರೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸದುರ್ಗ ತಾಲ್ಲೂಕಿನ ದೇವಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಜಪ್ಪ (53) ಆತ್ಮಹತ್ಯೆ ಮಾಡಿಕೊಂಡವರು. ಅವರು ತಂದೆ ಹೆಸರಿನಲ್ಲಿದ್ದ ಎರಡು ಎಕರೆ ಜಮೀನಿನ ಜೊತೆಗೆ 4 ಎಕರೆ ಜಮೀನನ್ನು ಗುತ್ತಿಗೆ ಆಧಾರದಲ್ಲಿ ಉಳುಮೆ ಮಾಡುತ್ತಿದ್ದರು.
ಕ್ಲಿಕ್ ಮಾಡಿ ಓದಿ: ಕುರಿ ಮೇಲೆ ಚಿರತೆ ದಾಳಿ | ಗ್ರಾಮಸ್ಥರಲ್ಲಿ ಆತಂಕ
ಕೃಷಿಗಾಗಿ ಬ್ಯಾಂಕ್ನಲ್ಲಿ ಆಭರಣ ಅಡವಿಟ್ಟು ₹ 2 ಲಕ್ಷ ಹಾಗೂ ₹ 90,000 ಸಾಲ ಹಾಗೂ ವೈಯಕ್ತಿಕವಾಗಿ ₹ 4 ಲಕ್ಷ ಸಾಲ ಮಾಡಿಕೊಂಡಿದ್ದರು. ಆದರೆ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದರು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number