
CHITRADURGA NEWS | 23 DECEMBER 2025
ಚಿತ್ರದುರ್ಗ: ಚಿತ್ರದುರ್ಗ ರುಡ್‌ಸೆಟ್ ಸಂಸ್ಥೆಯಿಂದ ನಿರುದ್ಯೋಗಿ ಗ್ರಾಮೀಣ ಭಾಗದ ಯುವಕ-ಯುವತಿಯರಿಗಾಗಿ ಸ್ವ-ಉದ್ಯೋಗ ಮಾಡಲು ಈ ಕೆಳಕಂಡ ತರಬೇತಿಗಳನ್ನು ಜನವರಿ ತಿಂಗಳಿನಲ್ಲಿ ಪ್ರಾರಂಭಿಸಲಾಗುವುದು, ಆದ್ದರಿಂದ ಆಸಕ್ತರು ಡಿಸೆಂಬರ್ 31 ರೊಳಗಾಗಿ ಕೆಳಕಂಡ ದಾಖಲೆಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.
ಇದನ್ನೂ ಓದಿ: ಭರತನಾಟ್ಯದಲ್ಲಿ ಚಿತ್ರದುರ್ಗದ ಪ್ರಾರ್ಥನಾ ರಾಜ್ಯಮಟ್ಟಕ್ಕೆ ಆಯ್ಕೆ
ಮೋಟಾರ್ ರಿವೈಂಡಿಂಗ್ ಮತ್ತು ಪಂಪ್‌ಸೆಟ್ ರಿಪೇರಿ, ಮೊಬೈಲ್ ರಿಪೇರಿ ತರಬೇತಿ, ಮಹಿಳೆಯರ ಟೈಲರಿಂಗ್ ತರಬೇತಿ 31 ದಿನ ತರಬೇತಿ ನೀಡಲಾಗುವುದು.
ಲಘು ಮೋಟಾರ್ ವಾಹನ ಚಾಲನೆ 30 ದಿನ, ಕಂಪ್ಯೂಟರ್ ಡಿ.ಟಿ.ಪಿ. ತರಬೇತಿ 45 ದಿನಗಳವರೆಗೆ ತರಬೇತಿ ನೀಡಲಾಗುವುದು.
19 ರಿಂದ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹೊಂದಿರಬೇಕು. ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು. ಈ ತರಬೇತಿಗೆ ಸಂಬಂದಪಟ್ಟ ಕೌಶಲ್ಯ ಕುರಿತು ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಮತ್ತೆ ಚೇತರಿಕೆ ಕಂಡ ರಾಶಿ ಅಡಿಕೆ ಬೆಲೆ
ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ನಂಬರ್‌ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, 4 ಪಾಸ್‌ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಜಾತಿ ಪ್ರಮಾಣ ಪತ್ರ ಜೆರಾಕ್ಸ್ 2 ಪ್ರತಿಗಳೊಂದಿಗೆ (ಒರಿಜಿನಲ್ ಜೆರಾಕ್ಸ್) ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ 8618282445,9481778047, 9019299901, 8660627785 ಗೆ ಸಂಪರ್ಕಿಸಬಹುದು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
