
CHITRADURGA NEWS | 13 MAY 2026
ಚಿತ್ರದುರ್ಗ: ಚಿತ್ರದುರ್ಗದ ರುಡ್‍ಸೆಟ್ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ ಸ್ವಯಂ ಉದ್ಯೋಗ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 18ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಇದನ್ನೂ ಓದಿ: ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಪಂ ಸಿಇಓ ಖಡಕ್ ಸೂಚನೆ
ಮಹಿಳೆಯರ 30 ದಿನಗಳ ಟೈಲರಿಂಗ್ ಹಾಗೂ 35 ದಿನಗಳು ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿ, ಹಾಗೂ ಎಲ್ಲರಿಗೂ 38 ದಿನಗಳು ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 19 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹಾಗೂ ಸ್ವಯಂ ಉದ್ಯೋಗ ಮಾಡುವ ಆಸಕ್ತಿ ಇರಬೇಕು. ಸಂಬಂಧಪಟ್ಟ ಕೌಶಲದಲ್ಲಿ ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.12 | ಹತ್ತಿ ರೇಟ್ ಎಷ್ಟಿದೆ?
ಈ ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ ಹೊಂದಿರುವ ಸ್ವವಿವರದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಮೇ 18, 2026 ರಂದು ನೇರವಾಗಿ ರುಡ್‍ಸೆಟ್ ಸಂಸ್ಥೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8431329162, 8618282445, 8660627785, 9019244300 ಸಂಪರ್ಕಿಸಬಹುದು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

