CHITRADURGA NEWS | 01 JUNE 2025
ಚಿತ್ರದುರ್ಗ: ಹರಿಹರಗುರು ಅಡ್ವೋಕೇಟ್ಸ್ ಅಂಡ್ ಅಸೋಸಿಯೇಟ್ಸ್ ನ ಹಿರಿಯ ವಕೀಲರು, ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕರು, ಗಾಯಕ, ರಂಗಭೂಮಿ ಕಲಾವಿದರಾಗಿದ್ದ ಡಾ. ಎಂ.ಸಿ.ನರಹರಿ (53) ಅನಾರೋಗ್ಯದಿಂದ ಜೂನ್ 1 ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.
Also Read: ಈ ಹಣ್ಣುಗಳನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆಯೇ?

ಎರಡು ದಿನಗಳ ಹಿಂದಷ್ಟೇ ಅನಾರೋಗ್ಯಕ್ಕೆ ತುತ್ತಾಗಿ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾಯಿ ಮತ್ತು ಪತ್ನಿ ಇಬ್ಬರು ಮಕ್ಕಳು ಹಾಗೂ ಅಪಾರ ಮಿತ್ರಬಳಗ ಬಂಧು ಬಳಗವನ್ನು ಅಗಲಿದ್ದಾರೆ.
ಚಿತ್ರದುರ್ಗದ ಕೆಳಗೋಟೆ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ವಗ್ರಾಮ ರಾಷ್ಟ್ರೀಯ ಹೆದ್ದಾರಿ ಪಕ್ಕದ ಬುರುಜಿನರೊಪ್ಪ ಸಮೀಪದ ಮರಡಿಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಆತ್ಮೀಯ ಒಡನಾಡಿ ಮಿತ್ರರಾದ ಟಿ.ಡಿ.ಗುರುನಾಥ್ ಅವರು ತಿಳಿಸಿದ್ದಾರೆ.
Also Read: ವಸತಿ ಶಾಲೆ ಪ್ರವೇಶ | ಜೂನ್ 3,4 ರಂದು ಕೌನ್ಸಲಿಂಗ್
ಎರಡು ದಶಕಗಳ ಹಿಂದೆ ಬೆಂಗಳೂರಿನಲ್ಲಿ ಕನ್ನಡಪ್ರಭ ವರದಿಗಾರರಾಗಿದ್ದರು. ಚಿತ್ರದುರ್ಗ ನಗರದ ಕೆಳಗೋಟೆಯ ಐತಿಹಾಸಿಕ ಚನ್ನಕೇಶವ ದೇವಸ್ಥಾನ ಸಮಿತಿಯ ಧರ್ಮದರ್ಶಿಯಾಗಿ ಧಾರ್ಮಿಕ ಸೇವಾ ಕಾರ್ಯದಲ್ಲಿ ನಿರತರಾಗಿದ್ದರು. ಒಳಮೀಸಲಾತಿ ಹೋರಾಟಗಾರದಲ್ಲಿ ಸಕ್ರಿಯವಾಗಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
