ಮುಖ್ಯ ಸುದ್ದಿ
Internal Reservation; ಒಳ ಮೀಸಲಾತಿ ಶೀಘ್ರ ಜಾರಿಗೆ ಹಿರಿಯ ವಕೀಲ ಎಂ.ಕುಂಬಯ್ಯ ಒತ್ತಾಯ
CHITRADURGA NEWS | 03 AUGUST 2024
ಚಿತ್ರದುರ್ಗ: ಒಳ ಮೀಸಲಾತಿ(Internal Reservation)ಗೆ ಸುಪ್ರೀಂಕೋರ್ಟ್ ತೀರ್ಪು ನೀಡಿರುವುದರಿಂದ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶೀಘ್ರ ಜಾರಿಗೊಳಿಸಬೇಕೆಂದು ಹೈಕೋರ್ಟ್ ಹಿರಿಯ ವಕೀಲ ಎಂ.ಕುಂಬಯ್ಯ(Senior advocate M. Kumbaya) ಒತ್ತಾಯಿಸಿದರು.
ಕ್ಲಿಕ್ ಮಾಡಿ ಓದಿ: ಯಾದಗಿರಿಯ PSI ಪರಶುರಾಮ್ ಸಾವು | CBI ತನಿಖೆಗೆ ವಹಿಸುವಂತೆ ಕರುನಾಡ ವಿಜಯಸೇನೆಯಿಂದ ಒತ್ತಾಯ
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಂದ್ರದಲ್ಲಿ ಮಂದಿಕೃಷ್ಣ ಮಾದಿಗರವರು ಒಳ ಮೀಸಲಾತಿ ಜಾರಿಗಾಗಿ ಸುಪ್ರಿಂಕೋರ್ಟ್‍ನಲ್ಲಿ ಕೇಸು ಹಾಕಿ ಅನೇಕ ಹೋರಾಟಗಳನ್ನು ನಡೆಸಿದ್ದಾರೆ.
ಅದೇ ರೀತಿ ಕರ್ನಾಟಕ, ತಮಿಳುನಾಡು, ಪಂಜಾಬ್ ಸೇರಿದಂತೆ ನಾನಾ ರಾಜ್ಯಗಳಲ್ಲಿ ನಡೆದ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ತುಳಿತಕ್ಕೊಳಗಾದವರಿಗೆ ನ್ಯಾಯ ಒದಗಿಸುವುದಕ್ಕಾಗಿ ಕಾಂಗ್ರೆಸ್ ಸರ್ಕಾರ ಸದಾಶಿವ ಆಯೋಗ ರಚಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿತ್ತು. ಈಗ ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಒಳ ಮೀಸಲಾತಿಯನ್ನು ಜಾರಿಗೆ ತರಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ಕ್ಲಿಕ್ ಮಾಡಿ ಓದಿ: VV Sagara: ವಿವಿ ಸಾಗರ | ಇಂದಿನ ಜಲಾಶಯದ ನೀರಿನ ಮಟ್ಟ ಎಷ್ಟಿದೆ
ಕಳೆದ ಮೂವತ್ತು ವರ್ಷಗಳಿಂದ ನಡೆದ ಹೋರಾಟಕ್ಕೆ ರಾಜ್ಯದಲ್ಲಿ ಐದು ಸಾವಿರಕ್ಕೂ ಹೆಚ್ಚು ಎಫ್.ಐ.ಆರ್.ಗಳಾಗಿರುವುದನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆಯಬೇಕು. ಅನುಸೂಚಿತ ಆಯೋಗಕ್ಕೆ ಸರ್ಕಾರ ದಲಿತರನ್ನು ನೇಮಕ ಮಾಡಬೇಕೆಂದು ಆಗ್ರಹಿಸಿದರು.
ನ್ಯಾಯವಾದಿ ಬೀಸ್ನಳ್ಳಿ ಜಯಣ್ಣ ಮಾತನಾಡಿ, ಒಳ ಮೀಸಲಾತಿಗಾಗಿ ಅನೇಕ ಹೋರಾಟ, ಪಾದಯಾತ್ರೆ, ಧರಣಿ, ಶಾಸಕರುಗಳ ನಿವಾಸದ ಎದುರು ಪ್ರತಿಭಟನೆ, ಜಾಥಗಳನ್ನು ನಡೆಸಿದ ಪರಿಣಾಮವಾಗಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿರುವುದರಿಂದ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ವಿಳಂಭ ಮಾಡದೆ ಜಾರಿಗೆ ತರಬೇಕು. ಇಲ್ಲವಾದಲ್ಲಿ ಮತ್ತೆ ಹೋರಾಟಕ್ಕೆ ಇಳಿಯಬೇಕಾಗುತ್ತದೆಂದು ಎಚ್ಚರಿಸಿದರು.
ಒಳ ಮೀಸಲಾತಿಯಿಂದ ನಮಗೆ ಶೈಕ್ಷಣಿಕ ಹಾಗೂ ಉದ್ಯೋಗದಲ್ಲಿ ಮೀಸಲಾತಿ ದೊರಕುತ್ತದೆಯೇ ವಿನಃ ರಾಜಕೀಯವಾಗಿ ಅಲ್ಲ. ಹಾಗಾಗಿ ದಲಿತರು ರಾಜಕೀಯವಾಗಿ ಅಧಿಕಾರದಲ್ಲಿದ್ದರೆ ಅಭಿವೃದ್ದಿಯಾಗಲು ಸಾಧ್ಯ. ಹಾಗಾಗಿ ರಾಜಕೀಯವಾಗಿಯೂ ಮೀಸಲಾತಿ ಬೇಕೆಂದು ಕೋರಿದರು.
ಕ್ಲಿಕ್ ಮಾಡಿ ಓದಿ: Dhruva Sarja: ಅಭಿಮಾನಿಗೆ ಸಮಾಧಾನ ಮಾಡಿದ ಧ್ರುವ ಸರ್ಜಾ | ಸೆಲ್ಫಿ ಕ್ಲಿಕ್..ಕ್ಲಿಕ್
ಪತ್ರಿಕಾಗೋಷ್ಠಿಯಲ್ಲಿ ವಕೀಲ ಜಿ.ಕೆ.ಮಲ್ಲಿಕಾರ್ಜುನಸ್ವಾಮಿ, ನ್ಯಾಯವಾದಿ ವೆಂಕಟೇಶ್, ಹೈಕೋರ್ಟ್‍ನ ಹಿರಿಯ ವಕೀಲರಾದ ಮುನಿಯಪ್ಪ, ತುಳಸಿರಾಮ, ಎಂ.ಕೆ.ಲೋಕೇಶ್, ಹನುಮಂತಪ್ಪ, ಶಿವಣ್ಣ, ಸುರೇಶ್, ಎಸ್.ಮಲ್ಲಿಕಾರ್ಜುನ, ಗಿರೀಶ್, ಸಿ.ಬಾಬು, ಆರ್.ಟಿ.ಸ್ವಾಮಿ ಉಪಸ್ಥಿತರಿದ್ದರು.