CHITRADURGA NEWS | 18 SEPTEMBER 2026
ಚಿತ್ರದುರ್ಗ: ಹಿರಿಯ ನಾಗರಿಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತಿ ಹೊಂದಿರಬೇಕು ಹಾಗೂ ಯಾವುದೇ ಸಮಸ್ಯೆಯಿದ್ದಲ್ಲಿ ಕಾನೂನಿನ ನೆರವು ಪಡೆಯಲು ಹಿಂಜರಿಯಬಾರದು ಎಂದು ಉಪವಿಭಾಗಾಧಿಕಾರಿ ಡಾ.ಕಾಂತರಾಜ್ ಅವರು ತಿಳಿಸಿದರು.
ಇದನ್ನೂ ಓದಿ: ಭದ್ರಾ ಕಾಲುವೆಗೆ ಹಾನಿ | ದೂರು ದಾಖಲು
ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ವಿವಿಧ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2026’ರ ಅಂಗವಾಗಿ ಆಯೋಜಿಸಲಾಗಿದ್ದ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರು ಹಾಗೂ ಫೋಷಕರ ಷಕರ ಫೋಷಣೆ ಮತ್ತು ಕ್ಷೇಮಾಭಿವೃದ್ಧಿ ಕಾಯ್ದೆ-2007ರ ಅಡಿಯಲ್ಲಿ ಹಿರಿಯ ನಾಗರಿಕರಿಗೆ ಮಕ್ಕಳಿಂದ ಅಥವಾ ಕುಟುಂಬದವರಿಂದ ಕಿರುಕುಳ ಅಥವಾ ನಿರ್ಲಕ್ಷ್ಯ ಉಂಟಾದರೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ನೇರವಾಗಿ ದೂರು ನೀಡಬಹುದು. ಒಂದು ಬಿಳಿ ಹಾಳೆಯಲ್ಲಿ ತಮ್ಮ ಸಮಸ್ಯೆ ಬರೆದುಕೊಟ್ಟರೂ ಸಾಕು, ಅದನ್ನು ಪ್ರಕರಣವಾಗಿ ದಾಖಲಿಸಿಕೊಂಡು, ಸಂಬಂಧಪಟ್ಟವರನ್ನು ಕರೆಸಿ ವಿಚಾರಣೆ ನಡೆಸಿ ನ್ಯಾಯ ಒದಗಿಸಲಾಗುವುದು ಎಂದರು.
ಹಿರಿಯರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಆಸ್ತಿಯನ್ನು ತಮ್ಮ ಹೆಸರಿನಲ್ಲೇ ಇಟ್ಟುಕೊಳ್ಳಬೇಕು. ತಂದೆ-ತಾಯಿಗಳು ತಮ್ಮ ಹೆಸರಿನಲ್ಲಿರುವ ಆಸ್ತಿಯನ್ನು ಮಕ್ಕಳ ಅಪೇಕ್ಷೆಗೆ ಒಳಗಾಗಿ ಸಂಪೂರ್ಣವಾಗಿ ದಾನ ಅಥವಾ ಹಸ್ತಾಂತರ ಮಾಡಬಾರದು. ಕೈಯಲ್ಲಿ ಆಸ್ತಿ ಅಥವಾ ಆರ್ಥಿಕ ಭದ್ರತೆ ಇದ್ದಾಗ ಮಾತ್ರ ಗೌರವ ಸಿಗುವ ವಾತಾವರಣ ನಿರ್ಮಾಣವಾಗುತ್ತಿರುವುದು ಪ್ರಸ್ತುತ ಸಮಾಜದ ವಿಪರ್ಯಾಸವಾಗಿದೆ. ಹಿರಿಯ ನಾಗರಿಕರು ಆಸ್ತಿ ಹಸ್ತಾಂತರದ ಕುರಿತು ಎಚ್ಚರಿಕೆಯಿಂದ ಇರಬೇಕು ಎಂದರು.
ಇದನ್ನೂ ಓದಿ: ಚಿತ್ರದುರ್ಗದ ಹೊರವಲಯದಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ನಿರ್ಮಾಣಕ್ಕೆ ಭೂಮಿ ಪೂಜೆ
ವಯಸ್ಸು ಎಂಬುದು ಕೇವಲ ಒಂದು ಸಂಖ್ಯೆಯಷ್ಟೇ, ಮನಸ್ಸಿಗೆ ವಯಸ್ಸಾಗುವುದಿಲ್ಲ. ಹಿರಿಯ ನಾಗರಿಕರು ನಿರಂತರವಾಗಿ ವಾಕಿಂಗ್, ಯೋಗ, ಧ್ಯಾನ ಹಾಗೂ ತಮ್ಮಿಷ್ಟದ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಡಾ.ಕಾಂತರಾಜ್ ಸಲಹೆ ನೀಡಿದರು.
ಹಿರಿಯ ನಾಗರಿಕರ ನೆರವು ಹಾಗೂ ತುರ್ತು ಸಹಾಯಕ್ಕಾಗಿ ಉಚಿತ ಸಹಾಯವಾಣಿ ಸಂಖ್ಯೆ 15100 ಚಾಲ್ತಿಯಲ್ಲಿದ್ದು, ಯಾವುದೇ ತೊಂದರೆ ಅಥವಾ ತುರ್ತು ಸಂದರ್ಭಗಳಲ್ಲಿ ಹಿರಿಯ ನಾಗರಿಕರು ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.
ಕಾಯ್ದೆಯಡಿ ಜೀವನಾಂಶಕ್ಕೆ ಅವಕಾಶ:
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಮೀರ್ ಪಿ. ನಂದ್ಯಾಲ್, ಹಿರಿಯ ನಾಗರಿಕರ ಕಾಯ್ದೆಯಡಿ ಹಿರಿಯ ಚೇತನರು ತಮ್ಮ ಜೀವನಪಾಲನೆ ಮತ್ತು ನಿರ್ವಹಣೆಗಾಗಿ ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಾಗಲಿ ಅಥವಾ ಸಿವಿಲ್ ನ್ಯಾಯಾಲಯದಲ್ಲಾಗಲಿ ಪ್ರಕರಣ ದಾಖಲಿಸಿ, ಕಡೆಗಣಿಸುವ ಮಕ್ಕಳಿಂದ ಜೀವನಾಂಶ ಪಡೆದುಕೊಳ್ಳಲು ಅವಕಾಶವಿದೆ ಎಂದು ತಿಳಿಸಿದಿರು.
ಇದನ್ನೂ ಓದಿ: ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳೂ ಬರಪೀಡಿತ ಪಟ್ಟಿಗೆ | ಸಚಿವ ಟಿ.ರಘುಮೂರ್ತಿ
ಕಷ್ಟದಲ್ಲಿರುವ ಮತ್ತು ಕಡೆಗಣಿಸಲ್ಪಟ್ಟ ವ್ಯಕ್ತಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾನೂನು ಸೇವೆಗಳ ಪ್ರಾಧಿಕಾರವು ನಿರಂತರವಾಗಿ ಅರಿವು ಹಾಗೂ ನೆರವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ರಾಷ್ಟ್ರ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲೂ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸಮಿತಿಗಳು ಕಾರ್ಯನಿರ್ವಹಿಸುತ್ತಿವೆ.
ಹಿರಿಯರಿಗಾಗಿ ಹಲವು ಸೌಲಭ್ಯಗಳನ್ನು ರೂಪಿಸಲಾಗಿದ್ದು, ಯಾವುದೇ ತೊಂದರೆಗಳಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದರೆ ಸಂಬಂಧಪಟ್ಟ ಇಲಾಖೆಗಳ ಸಹಯೋಗದೊಂದಿಗೆ ಪರಿಹಾರ ಒದಗಿಸಲಾಗುವುದು ಎಂದು ಭರವಸೆಯನ್ನು ನ್ಯಾಯಧೀಶ ಶಮೀರ್ ಪಿ. ನಂದ್ಯಾಲ್ ನೀಡಿದರು.
ಇದೇ ವೇಳೆ ಶನಿವಾರ ಸೆಪ್ಟೆಂಬರ್ 19 ಶನಿವಾರದಂದು ಪ್ರಸಕ್ತ ವರ್ಷದ ಮೂರನೇ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಹಿರಿಯ ನಾಗರಿಕರು ತಮಗೆ ಸಂಬಂಧಿಸಿದ ಪ್ರಕರಣಗಳು ಇದ್ದು, ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದರೆ, ವಕೀಲರ ಮೂಲಕ ಅಥವಾ ನೇರವಾಗಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದರೆ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ನರೇಂದ್ರ ಮೋದಿ ಜನ್ಮದಿನ | ನೀಲಕಂಠೇಶ್ವರ ದೇವಸ್ಥಾನದಲ್ಲಿ ಬಿಜೆಪಿ ವಿಶೇಷ ಪೂಜೆ
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಕೆ ಉಪನಿರ್ದೇಶಕ, ವಿಜಯ್ ಕುಮಾರ್ ಕೆ.ಹೆಚ್., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್.ಮಹೇಶ್ವರಪ್ಪ, ಕಾರ್ಯದರ್ಶಿ, ಹೆಚ್.ಓ.ಜಗದೀಶ್ ಗುಂಡೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ.ಎ.ಎಂ, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಉಪಸಭಾಪತಿ ಅರುಣ್‍ಕುಮಾರ್, ರೋಟರಿ ಕ್ಲಬ್ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ, ನಿವೃತ್ತ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಪ್ರೇಮನಾಥ್, ನಿಕಟಪೂರ್ವ ಅಧ್ಯಕ್ಷ ರಂಗಪ್ಪ ರೆಡ್ಡಿ, ಸೇರಿದಂತೆ ಹಿರಿಯ ನಾಗರಿಕರ ಕ್ರೀಡಾಪಟುಗಳು ಉಪಸ್ಥಿತರಿದ್ದರು. ಜಿಲ್ಲಾ ವಿಕಲಚೇತನ ಕಲ್ಯಾಣಧಿಕಾರಿ ವೈಶಾಲಿ.ಜೆ ಪ್ರಸ್ತಾವಿಕವಾಗಿ ಮಾತನಾಡಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

