CHITRADURGA NEWS | 27 MARCH 2026
ಚಿತ್ರದುರ್ಗ: ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆಯಲಿರುವ ಸೀನಿಯರ್ ಮಹಿಳಾ ರಾಷ್ಟ್ರೀಯ ಹ್ಯಾಂಡ್‍ಬಾಲ್ ಪಂದ್ಯಾವಳಿಗೆ ಚಿತ್ರದುರ್ಗದಿಂದ ನಾಲ್ಕು ಜನ ಮಹಿಳಾ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಕೆ.ಹೆಚ್.ಶಿವರಾಂ ತಿಳಿಸಿದ್ದಾರೆ.
ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು
ಉತ್ತರ ಪ್ರದೇಶದ ಬರೇಲಿಯಲ್ಲಿ ಮಾ.30ರಿಂದ ಏ.3ರ ವರೆಗೆ ಸೀನಿಯರ್ ಮಹಿಳಾ ರಾಷ್ಟ್ರೀಯ ಹ್ಯಾಂಡ್‍ಬಾಲ್ ಪಂದ್ಯಾವಳಿ ನಡೆಯಲಿದ್ದು, ಜಿಲ್ಲೆಯಿಂದ ಮಹಿಳಾ ಕ್ರೀಡಾಪಟುಗಳಾದ ಸಾನಿಯಾ, ಎಸ್.ಪೂಜಾ, ಪಿ.ಬಿಂದು ಶ್ರೀ ಹಾಗೂ ಎನ್.ಟಿ.ಉಷಾ ರವರು ಆಯ್ಕೆಯಾಗಿದ್ದಾರೆ.
ಮಾ.15 ರಿಂದ 26ರವರೆಗೆ ಹಾಸನ ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದರು. ಈ ಪಂದ್ಯಾವಳಿಯಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಮಾ.27 ರಂದು ಪ್ರಯಾಣ ಬೆಳಸಲಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | 26 ಮಾರ್ಚ್ | ಚನ್ನಗಿರಿ, ಭೀಮಸಮುದ್ರ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
ಈ ಪಂದ್ಯಾವಳಿಯಲ್ಲಿ ಭಾಗವಹಿಸಿ ಹೆಚ್ಚಿನ ಸಾಧನೆ ಮಾಡಿ, ಜಿಲ್ಲೆಗೆ, ರಾಜ್ಯಕ್ಕೆ ಕೀರ್ತಿ ತರುವಂತೆ ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಸಂಸ್ಥೆಯ ಎಂ.ಹೆಚ್.ಜಯ್ಯಣ್ಣ, ಲೋಹಿತಾಕ್ಷಿ, ಹಿರಿಯ ಕ್ರೀಡಾಪಟುಗಳಾದ ಸೂರಜ್ ಕಾರ್ಯದರ್ಶಿ ಎನ್.ಡಿ.ಗೌಡ ಸಿ.ಎ.ಪ್ರಮೇನಾಥ್ ಶುಭ ಕೋರಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
