
CHITRADURGA NEWS | 30 AUGUST 2025
ಚಿತ್ರದುರ್ಗ: ನಗರಸಭೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಪ್ರಭಾರೆ ಅಧ್ಯಕ್ಷರಾಗಿ ಉಪಾಧ್ಯಕ್ಷರಾದ ಶಕೀಲ ಬಾನು ಆಧಿಕಾರ ಸ್ವೀಕಾರ ಮಾಡಿದರು.
ಇದನ್ನೂ ಓದಿ: ಅಂಬೇಡ್ಕರ್ ಅವರದ್ದು ಸಾಮಾಜಿಕ ನ್ಯಾಯದ ದೃಷ್ಠಿಕೋನ | ಕೆ.ವಿ.ಪ್ರಭಾಕರ್

ನಗರಸಭೆಗೆ ಕಳೆದ ಒಂದು ವರ್ಷದ ಹಿಂದೆ ಸುಮಿತಾರವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದರು, ಈಗ ಅವರ ಒಪ್ಪಂದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು, ಕಾನೂನು ಪ್ರಕಾರ ಅಧ್ಯಕ್ಷ ಸ್ಥಾನ ತೆರವಾದಾಗ ಉಪಾಧ್ಯಕ್ಷರು ಪ್ರಬಾರೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುವುದು ಸಾಮಾನ್ಯವಾಗಿದೆ.
ಇದೇ ಹಿನ್ನಲೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ನಗರಸಭೆಯ ಉಪಾಧ್ಯಕ್ಷರಾದ ಶಕೀಲ ಬಾನು ಅಧ್ಯಕ್ಷರಾಗಿ ಹಿಂದಿನ ಅಧ್ಯಕ್ಷರಿಂದ ಅಧಿಕಾರವನ್ನು ಸ್ವೀಕಾರ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷರಾದ ಸಮಿತಾ, ಕಳೆದ ಒಂದು ವರ್ಷದಿಂದ ನಾನು ಚಿತ್ರದುರ್ಗ ನಗರಸಭೆಯ ಅಧ್ಯಕ್ಷರಾಗಿ ಅಧಿಕಾರವನ್ನು ನಡೆಸಿದ್ದೇನೆ.
ಈ ಸಮಯದಲ್ಲಿ ನಗರಸಭೆಯ ಪೌರಾಯುಕ್ತರು, ಎಲ್ಲಾ ಸಿಬ್ಬಂದಿಗಳು ಉತ್ತಮವಾದ ಸಹಕಾರವನ್ನು ನೀಡಿದ್ದಾರೆ.
ಇದನ್ನೂ ಓದಿ: ಧರ್ಮಪುರದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶೀಘ್ರ ಮಂಜೂರಾತಿ | ಸಚಿವ ರಾಮಲಿಂಗಾ ರೆಡ್ಡಿ
ಅಧಿಕಾರ ಶಾಶ್ವತವಲ್ಲ ಅಧಿಕಾರ ಸಿಕ್ಕಾಗ ಉತ್ತಮವಾದ ಕೆಲಸವನ್ನು ಮಾಡಬೇಕಿದೆ, ನಾವು ಮಾಡುವ ಕೆಲಸಗಳು ಶಾಶ್ವತ ನಾವು ಅಧಿಕಾರದಲ್ಲಿ ಇಲ್ಲದಿದ್ದರೂ ಸಹಾ ನಾವು ಮಾಡಿದ ಕೆಲಸಗಳು ನಮ್ಮ ಗುರುತನ್ನು ಹೇಳುತ್ತವೆ.
ಈಗ ನೂತನವಾಗಿ ಅಧ್ಯಕ್ಷರಾಗಿ ಇರುವವರೆಗೂ ಸಹಾ ಎಲ್ಲಾ ಸದಸ್ಯರು, ಪೌರಾಯುಕ್ತರು, ಸಿಬ್ಬಂದಿಗಳು ಸಹಕಾರ ನೀಡುವಂತೆ ಮನವಿ ಮಾಡಿದರು.
ನೂತನ ಅಧ್ಯಕ್ಷರಾದ ಶಕೀಲಬಾನು ಮಾತನಾಡಿ, ನನಗೆ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ಸಂತೋಷವಾಗಿದೆ. ಈ ಸಮಯದಲ್ಲಿ ಚಿತ್ರದುರ್ಗ ನಗರದಲ್ಲಿ ವಿವಿಧ ರೀತಿಯ ಅಭಿವೃದ್ಧಿ ಕಾರ್ಯ ಮಾಡಲಾಗುವುದು. ಇದಕ್ಕೆ ನಗರಸಭೆಯ ಸದಸ್ಯರು, ಪೌರಾಯುಕ್ತರು ಹಾಗೂ ಸಿಬ್ಬಂದಿ ಸಹಕಾರ ನೀಡುವಂತೆ ಮನವಿ ಮಾಡಿದರು.
ಇದನ್ನೂ ಓದಿ: ಬಬ್ಬೂರುಫಾರಂ | ಜಿಲ್ಲೆಯ ರೈತರಿಗೆ ಮೂರು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ
ಪೌರಾಯುಕ್ತೆ ರೇಣುಕಾ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ನಸ್ರುಲ್ಲಾ, ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ನಗರಸಭೆಯ ಮಾಜಿ ಸದಸ್ಯರಾದ ಮಹೇಶ್, ರಮೇಶ್, ನಿಸಾರ್, ನ್ಯಾಯಾವಾದಿಗಳಾದ ಉಮೇಶ್, ಜಯ್ಯಣ್ಣ, ಸೈಯದ್ ಸೇರಿದಂತೆ ಇತರರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
