CHITRADURGA NEWS | 16 MAY 2025
ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವ ಶಾಂತಿಸಾಗರ(ಸೂಳೆಕೆರೆ) ನೀರು ಎರಡು ದಿನಗಳ ಕಾಲ ಸ್ಥಗಿತವಾಗಲಿದೆ.
ಶಾಂತಿಸಾಗರ ಸರಬರಾಜು ಯೋಜನೆಯ ಕೊಟ್ಟಿಗೆಹಳ್ಳಿ ಮದ್ಯಂತರ ಜಲಗಾರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ವಿದ್ಯುತ್ ಉಪಕರಣಗಳ ಪುನಃಶ್ಚೇತನ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಚಿತ್ರದುರ್ಗಕ್ಕೆ ಮತ್ತೊಂದು ರೈಲು ಮಾರ್ಗ | ಮಲೆನಾಡಿನಿಂದ ಅರೆ ಮಲೆನಾಡು ಸಂಪರ್ಕ | 1825 ಕೋಟಿ ವೆಚ್ಚ
ನಗರಸಭೆ ವತಿಯಿಂದ ಮುಖ್ಯ ಕೊಳವೆ ಮಾರ್ಗದಲ್ಲಿ ದುರಸ್ಥಿ ಕೆಲಸವನ್ನು ಕೈಗೊಳ್ಳಬೇಕಾಗಿರುವುದರಿಂದ ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ಮೇ.17 ರಿಂದ 18 ರವರೆಗೆ ಸ್ಥಗಿತಗೊಳ್ಳಲಿದೆ.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ ಹಾಗೂ ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಕೋರಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
