ಮುಖ್ಯ ಸುದ್ದಿ
ಚಿತ್ರದುರ್ಗಕ್ಕೆ ಎರಡು ದಿನ ಶಾಂತಿಸಾಗರ ನೀರು ಸ್ಥಗಿತ

Published on
CHITRADURGA NEWS | 07 FEBRUARY 2025
ಚಿತ್ರದುರ್ಗ: ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ(ಸೂಳೆಕೆರೆ) ನೀರು ಸರಬರಾಜು ಯೋಜನೆಯ ಶಾಂತಿಸಾಗರ ಜಾಕ್‍ವೆಲ್ ವಿದ್ಯುತ್ ಸ್ಥಾವರದಲ್ಲಿ ಬ್ರೇಕರ್ ಅಳವಡಿಸುವ ಕೆಲಸ ಕೈಗೊಳ್ಳಬೇಕಾಗಿರುವುದರಿಂದ ಶಾಂತಿ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ಫೆ.09 ಮತ್ತು 10ರಂದು ಸ್ಥಗಿತಗೊಳಿಸಲಾಗುತ್ತಿದೆ.
Also Read: ಶ್ರೀರಾಮುಲುಗೆ ಪೈಪೋಟಿ ಕೊಡುವಷ್ಟು ದೊಡ್ಡ ನಾಯಕ ನಾನಲ್ಲ | ಬಿ.ವೈ.ವಿಜಯೇಂದ್ರ

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ.
ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
Continue Reading
Related Topics:Chitradurga, Chitradurga news, Chitradurga Updates, Kannada Latest News, Kannada News, Municipal Council, Shantisagara, shutdown, Water, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ನಗರಸಭೆ, ನೀರು, ಶಾಂತಿಸಾಗರ, ಸ್ಥಗಿತ

Click to comment