
CHITRADURGA NEWS | 06 JUNE 2026
ಚಿತ್ರದುರ್ಗ: ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಶಾಂತಿಸಾಗರ ನೀರು ಸರಬರಾಜು ಯೋಜನೆಯಡಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದಲ್ಲಿ ಮುಂದಿನ 5 ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ: ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
ಜೂನ್ 6 ರಿಂದ 11ನೇ ತಾರೀಖಿನವರೆಗೆ ಸಾರ್ವಜನಿಕರು ತಮ್ಮ ತಮ್ಮ ಪ್ರದೇಶಗಳಲ್ಲಿ ಲಭ್ಯವಿರುವ ಕೊಳವೆ ಬಾವಿಗಳ (ಬೋರ್‍ವೆಲ್) ನೀರನ್ನು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನೀರನ್ನು ಬಳಸಿಕೊಳ್ಳಬೇಕು. ಅಲ್ಲದೆ, ನೀರನ್ನು ಅತ್ಯಂತ ಮಿತವಾಗಿ ಬಳಸಿ ನಗರಸಭೆಯೊಂದಿಗೆ ಸಹಕರಿಸಬೇಕಾಗಿ ಪೌರಾಯುಕ್ತರು ಕೋರಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
