
CHITRADURGA NEWS | 25 SEPTEMBER 2025
ಚಿತ್ರದುರ್ಗ: ಹಿಂದಿನಿಂದಲೂ ಮುರುಘಾಮಠವೇ ಪ್ರಮುಖ ಮಠವಾಗಿದ್ದು, ಮುರುಘಾ ಪರಂಪರೆಗೆ ಶತಮಾನಗಳ ಇತಿಹಾಸವಿದೆ. ಈ ಪರಂಪರೆಯನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ರಾಜ್ಯಸಭಾ ಮಾಜಿ ಸದಸ್ಯರಾದ ಹೆಚ್.ಹನುಮಂತಪ್ಪ ಹೇಳಿದರು.
ಇದನ್ನೂ ಓದಿ: ಹೊಸದುರ್ಗ ತಾಲೂಕಿನಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಶರಣ ಸಂಸ್ಕೃತಿ ಉತ್ಸವ-2025ರಂದು ಬಸವ ತತ್ವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಶರಣ ಸಂಸ್ಕೃತಿ ಉತ್ಸವ-2025ರ ದಾಸೋಹಕ್ಕೆ ಮುಖಂಡರಾದ ವಾಣಿಜ್ಯೋದ್ಯಮಿ ಜೆ.ಎಂ.ಜಯಕುಮಾರ್ 50 ಸಾವಿರ ದೇಣಿಗೆಯನ್ನು ನೀಡಿದರು.
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಹರಗುರು ಚರಮೂರ್ತಿಗಳು ಚಿತ್ರದುರ್ಗ ವೀರಶೈವ ಅರ್ಬನ್ ಕ್ರೆಡಿಟ್ ಕೋ ಆಪರೇಟಿವ್ ಅಧ್ಯಕ್ಷರಾದ ಶ್ರೀ.ಪಟೇಲ್ ಶಿವಕುಮಾರ್, ಸಿದ್ದಾಪುರದ ವರ್ತಕರಾದ ಶ್ರೀ.ಎಸ್.ವಿ.ನಾಗರಾಜಪ್ಪ, ಬಾಪೂಜಿ ವಿದ್ಯಾಸಂಸ್ಥೆಯ ಶ್ರೀ.ಕೆ.ಎಂ.ವೀರೇಶ್, ಪಟೇಲ್ ಹನುಮಂತಪ್ಪ, ಕೆಇಬಿ ಷಣ್ಮ್ಮುಖಪ್ಪ, ವಿವಿಧ ಶಾಲಾ-ಕಾಲೇಜುಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಇದನ್ನೂ ಓದಿ: ನಿವೃತ್ತ ಮುಖ್ಯಶಿಕ್ಷಕ ವೆಂಕಟಸ್ವಾಮಿ ನಿಧನ
ತೋಟಪ್ಪ ಉತ್ತಂಗಿ ಧ್ವಜ ಗೀತೆ ಹಾಡಿ, ನವೀನ್ ಮಸ್ಕಲ್ ನಿರೂಪಿಸಿ, ಪಿ.ಟಿ.ಜ್ಞಾನಮೂರ್ತಿ ಸ್ವಾಗತಿಸಿ ವಂದಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
