By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    9 hours ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    9 hours ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    21 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    21 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    23 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    13 hours ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    21 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    22 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    2 days ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    3 days ago
Reading: ಸೆ.25 ರಿಂದ ಶರಣ ಸಂಸ್ಕೃತಿ ಉತ್ಸವ | ಆಹ್ವಾನ ಪತ್ರಿಕೆ ಬಿಡುಗಡೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸೆ.25 ರಿಂದ ಶರಣ ಸಂಸ್ಕೃತಿ ಉತ್ಸವ | ಆಹ್ವಾನ ಪತ್ರಿಕೆ ಬಿಡುಗಡೆ 

News Desk Chitradurga News
Last updated: 19 September 2025 18:07
News Desk Chitradurga News
10 months ago
Share
ಶರಣ ಸಂಸ್ಕೃತಿ ಉತ್ಸವ | ಆಹ್ವಾನ ಪತ್ರಿಕೆ ಬಿಡುಗಡೆ 
SHARE

CHITRADURGA NEWS | 19 SEPTEMBER 2025

ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ನಡೆಯುವ ಮಧ್ಯಕರ್ನಾಟಕದ ಜನೋತ್ಸವವೆಂದೇ ಪ್ರಸಿದ್ಧವಾಗಿರುವ ಶರಣಸಂಸ್ಕೃತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಶ್ರೀಮಠದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಡಾ.ಹನುಮಲಿ ಷಣ್ಮುಖಪ್ಪ, ಜಿ.ಎಸ್. ಅನಿತ್‌ಕುಮಾರ್, ಪಟೇಲ್ ಶಿವಕುಮಾರ್ ಬಿಡುಗಡೆಗೊಳಿಸಿದರು.

ಇದನ್ನೂ ಓದಿ: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರವರೆಗೆ ದುರ್ಗೋತ್ಸವ

ಉತ್ಸವದ ಕಾರ್ಯಕ್ರಮ ಕುರಿತು ಮಾಹಿತಿ ನೀಡಿದ ಶ್ರೀಗಳು, ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 3 ರವರೆಗೆ ವಿವಿಧ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 

ಶರಣಸಂಸ್ಕೃತಿ ಉತ್ಸವ ಪೂರ್ವಭಾವಿಯಾಗಿ ಎಸ್.ಜೆ.ಎಂ. ವಿದ್ಯಾಪೀಠದ ಅಧೀನದ ಶಾಲಾಕಾಲೇಜುಗಳ ವಿದ್ಯಾರ್ಥಿಗಳಿಗೆ ಜಮುರಾ ಕ್ರೀಡಾಕೂಟವು ಸೆಪ್ಟೆಂಬರ್ 20 ರಿಂದ 22 ರವರೆಗೆ ನಡೆಯಲಿದೆ.

ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 3ರವರೆಗೆ ಖ್ಯಾತಯೋಗ ಗುರು ಶ್ರೀ ಚೆನ್ನಬಸವಣ್ಣನವರು ಅವರಿಂದ ಬೆಳಗ್ಗೆ 5 ಗಂಟೆಗೆ ಯೋಗಾಸನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪ್ರತಿದಿನ ಬೆಳಗ್ಗೆ 7.30 ಗಂಟೆಗೆ ವಿವಿಧ ಮಠಾಧೀಶರು ಸಹಜ ಶಿವಯೋಗ ನಡೆಸಿಕೊಡಲಿರುವರು.

ಸೆಪ್ಟೆಂಬರ್ 20 ರಂದು ಬೆಳಗ್ಗೆ 10.30 ಗಂಟೆಗೆ ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಜಮುರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಕ್ರೀಡಾಕೂಟವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ನಗರಸಭೆ ಅಧ್ಯಕ್ಷೆ ಎಂ.ಪಿ. ಅನಿತಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜಪೀರ್, ಎಂ.ಕೆ. ಹಟ್ಟಿ ಗ್ರಾ.ಪಂ. ಅಧ್ಯಕ್ಷ ಆರ್.ಗಣೇಶ್ ಭಾಗವಹಿಸುವರು.

ಇದನ್ನೂ ಓದಿ: ಸಮೀಕ್ಷೆಯಲ್ಲಿ ಮಡಿವಾಳ ಎಂದು ಬರೆಸಿ | ನಂಜಪ್ಪ ಮನವಿ

ಸೆಪ್ಟೆಂಬರ್ 23 ರಂದು ವಚನ ಕಂಠಪಾಠ ಸ್ಪರ್ಧೆ, 12ನೇ ಶತಮಾನದ ಬಸವಾದಿ ಶಿವಶರಣರ ವೇಷಭೂಷಣ ಸ್ಪರ್ಧೆ ಮತ್ತು ಸೆಪ್ಟೆಂಬರ್ 24 ರಂದು ರಂಗೋಲಿ ಸ್ಪರ್ಧೆ, ಸಾವಯವ ಸಿರಿಧಾನ್ಯಗಳಿಂದ ತಯಾರಿಸಿದ ಅಡುಗೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಸೆಪ್ಟೆಂಬರ್ 25 ರಂದು ಬೆಳಗ್ಗೆ 7.30 ಗಂಟೆಗೆ ಸಹಜ ಶಿವಯೋಗ ಮತ್ತು ಬಸವತತ್ತ್ವ ಧ್ವಜಾರೋಹಣ ಕಾರ್ಯಕ್ರಮವಿದ್ದು, ಜೆ.ಎಂ.ಜಯಕುಮಾರ್ ಧ್ವಜಾರೋಹಣ ನೆರವೇರಿಸುವರು. ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು ಶಿವಯೋಗ ಪ್ರಾತ್ಯಕ್ಷಿಕೆ ನಡೆಸಿಕೊಡುವರು. 

ಮಾಜಿ ರಾಜ್ಯಸಭಾ ಸದಸ್ಯ ಹೆಚ್.ಹನುಮಂತಪ್ಪ, ಪಟೇಲ್ ಶಿವಕುಮಾರ್, ಎಸ್.ವಿ. ನಾಗರಾಜಪ್ಪ, ಕೆ.ವೆಂಕಣ್ಣಾಚಾರ್ ಅವರುಗಳು ಅತಿಥಿಗಳಾಗಿ ಭಾಗವಹಿಸುವರು. ಬೆಳಗ್ಗೆ 10 ಗಂಟೆಗೆ ಅಥಣಿ ಶ್ರೀ ಮುರುಘೇಂದ್ರ ಶಿವಯೋಗಿಗಳ ಕುರಿತು ವಿಚಾರ ಸಂಕಿರಣದ ಗೋಷ್ಠಿ-1ರಲ್ಲಿ ನಿಡಸೂಸಿಯ ಶ್ರೀ ಜಗದ್ಗುರು ಪಂಚಮಶಿವಲಿಂಗೇಶ್ವರ ಮಹಾಸ್ವಾಮಿಗಳು, ಇಳಕಲ್ ಶ್ರೀ ಗುರುಮಹಾಂತ ಸ್ವಾಮಿಗಳು ಸಮ್ಮುಖ ವಹಿಸಲಿದ್ದು, ಅಥಣಿಯ ಶ್ರೀ ಶಿವಬಸವ ಗುರುಮುರುಘರಾಜೇಂದ್ರ ಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಅಥಣಿಯ ಶ್ರೀ ಪ್ರಭುಚೆನ್ನಬಸವ ಸ್ವಾಮಿಗಳು, ಹಾರೂಗೇರಿಯ ಡಾ.ವಿ.ಎಸ್.ಮಾಳಿ, ಅಥಣಿಯ ಡಾ. ಎಂ.ಎಸ್. ಉಕ್ಕಲಿ ಅವರುಗಳು ಪಾಲ್ಗೊಳ್ಳಲಿದ್ದಾರೆ.

ಅದೇದಿನ ಮಧ್ಯಾಹ್ನ 2.30ಕ್ಕೆ ನಡೆಯುವ ಗೋಷ್ಠಿ-2ರಲ್ಲಿ ಧಾರವಾಡದ ಶ್ರೀ ನಿ.ಪ್ರ. ಮಲ್ಲಿಕಾರ್ಜುನ ಸ್ವಾಮಿಗಳು, ಚಿಕ್ಕಮಂಗಳೂರಿನ ಡಾ.ಬಸವಮರುಳಸಿದ್ಧ ಸ್ವಾಮಿಗಳು ಸಮ್ಮುಖ ವಹಿಸುವರು. ಬೆಳಗಾವಿಯ ಡಾ.ಬಸವರಾಜ ಜಗಜಿಂಪಿ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿಗಳಾದ ಪ್ರಕಾಶ್ ಗಿರಿಮಲ್ಲನವರ, ಡಾ.ಗುರುದೇವಿ ಹುಲೆಪ್ಪನವರ ಮಠ ಭಾಗವಹಿಸುವರು. 

ಇದನ್ನೂ ಓದಿ: ದಸರಾ ರಜೆ ಕಡಿತ ಮಾಡಿದರೆ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಗೇಟಿಗೆ ಬೀಗ | ಪ್ರಮೋದ್ ಮುತಾಲಿಕ್

ಸಂಜೆ 5 ಗಂಟೆಗೆ ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ ಜರುಗಲಿದ್ದು, ತುಮಕೂರು ಎಸ್.ಎಸ್.ಡಿ.ಸಿ. ಕಾಲೇಜಿನ ಡೀನ್ ಡಾ.ಪ್ರವೀಣ್ ಬಿ. ಕುಡ್ವ, ಭೂಪಾಲ್‌ನ ಡಾ.ಜಿ.ಎಸ್.ಚಂದು ಪಾಲ್ಗೊಳ್ಳುವರು. 

ಸೆಪ್ಟೆಂಬರ್ 26 ರಂದು ಬೆಳಗ್ಗೆ 10 ಗಂಟೆಗೆ ಶ್ರೀ ಮುರಿಗೆ ಶಾಂತವೀರ ಮಹಾಸ್ವಾಮಿಗಳವರ ಕೃತಿಗಳನ್ನು ಕುರಿತು ವಿಚಾರ ಸಂಕಿರಣ ಹಾಗೂ ಕನ್ನಡ ವಿಶ್ವವಿದ್ಯಾಲಯದ ಮಾನ್ಯತಾ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಹೆಬ್ಬಾಳಿನ ಶ್ರೀ ಮಹಾಂತ ರುದ್ರೇಶ್ವರ ಸ್ವಾಮಿಗಳು, ಹೆಗ್ಗುಂದ ವನಕಲ್ ಮಠದ ಡಾ. ಬಸವರಮಾನಂದ ಸ್ವಾಮಿಗಳು ಸಮ್ಮುಖ ವಹಿಸುವರು. 

ಹಂಪಿ ವಿವಿಯ ಕುಲಪಜಿ ಡಾ. ಡಿ.ವಿ. ಪರಮಶಿವಮೂರ್ತಿ ಉದ್ಘಾಟಿಸುವರು. ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಅತಿಥಿಗಳಾಗಿ ಡಾ. ಅಮರೇಶ ಯತಗಲ್, ಡಾ. ಲಕ್ಶ್ಮಣ್ ತೆಲಗಾವಿ, ಡಾ.ಬಿ.ನಂಜುಂಡಸ್ವಾಮಿ, ಡಾ.ಬಿ.ರಾಜಶೇಖರಪ್ಪ ಅವರುಗಳು ಭಾಗವಹಿಸುವರು. 

ಮಧ್ಯಾಹ್ನ 2.30 ಗಂಟೆಗೆ ಗೋಷ್ಠಿ-2 ನಡೆಯಲಿದ್ದು, ಶ್ರೀ ಜಗದ್ಗುರು ಕೃಷ್ಣ ಯಾದವಾನಂದ ಸ್ವಾಮಿಗಳು ಸಮ್ಮುಖ ವಹಿಸುವರು. ಡಾ. ಮೀರಾಸಾಬಿಹಳ್ಳಿ ಶಿವಣ್ಣ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಅತಿಥಿಗಳಾಗಿ ಬೆಂಗಳೂರಿನ ಡಾ. ಸಿ.ಕೆ. ಜಗದೀಶ್, ಡಾ. ಎಫ್.ಟಿ. ಹಳ್ಳಿಕೇರಿ, ಡಾ. ವೀರೇಶ್ ಬಡಿಗೇರ, ಡಾ. ಪಿ.ಯಶೋದ ರಾಜಶೇಖರಪ್ಪ ಅವರುಗಳು ಭಾಗವಹಿಸುವರು.

ಇದನ್ನೂ ಓದಿ: AC ಮಹಿಬೂಬ್ ಜಿಲಾನಿ ಖುರೇಷಿ ಸಮ್ಮುಖದಲ್ಲಿ ಪಹಣಿ ತಿದ್ದುಪಡಿ ಕಾರ್ಯ

ಸೆಪ್ಟೆಂಬರ್ 27 ಬೆಳಗ್ಗೆ 10 ಗಂಟೆಗೆ ಗೋಷ್ಠಿ – 3 ನಡೆಯಲಿದ್ದು, ಶ್ರೀ ಬಸವ ಮಾಚಿದೇವ ಸ್ವಾಮಿಗಳು, ಶ್ರೀ ಜಗದ್ಗುರು ವೇಮನಾನಂದ ಸ್ವಾಮಿಗಳು ಸಮ್ಮುಖ ವಹಿಸುವರು. ಡಾ. ಬೈರಮಂಗಲ ರಾಮೇಗೌಡ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಡಾ. ಸಿ.ಯು. ಮಂಜುನಾಥ್, ಡಾ.ಸಿ.ನಾಗಭೂಷಣ, ಡಾ.ಸಿ. ಶಿವಕುಮಾರಸ್ವಾಮಿ, ಡಾ.ವೈ.ಸಿ.ಭಾನುಮತಿ ಅವರುಗಳು ಪಾಲ್ಗೊಳ್ಳಲಿದ್ದಾರೆ.

ಅದೇದಿನ ಮಧ್ಯಾಹ್ನ 2.30ಕ್ಕೆ ನಡೆಯುವ ವಿಚಾರ ಸಂಕಿರಣ ಸಮಾರೋಪದಲ್ಲಿ ಕನ್ನಡ ವಿವಿ ಡಾ. ಎ. ಮುರಿಗೆಪ್ಪ, ಹೆಸರಾಂತ ಕಾದಂಬರಿಕಾರ ಡಾ. ಬಿ.ಎಲ್. ವೇಣು, ಕೆ.ಆರ್. ರಾಜಶೇಖರ್, ಜಿ.ಎಸ್. ಉಜ್ಜಿನಪ್ಪ, ಎಸ್.ಷಣ್ಮುಖಪ್ಪ ಅವರುಗಳು ಭಾಗವಹಿಸುವರು. 

ಸಂಜೆ 5 ಗಂಟೆಗೆ ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ ನಡೆಯಲಿದ್ದು, ಯುಬಿಡಿಟಿ ಪ್ರಾಚಾರ್ಯ ಡಾ. ಡಿ.ಪಿ. ನಾಗರಾಜಪ್ಪ ಮುಖ್ಯಅತಿಥಿಯಾಗಿ ಪಾಲ್ಗೊಳ್ಳುವರು.

ಸೆಪ್ಟೆಂಬರ್ 28 ಬೆಳಗ್ಗೆ 10.30ಕ್ಕೆ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರೊಂದಿಗೆ ಸಂವಾದ, ಜಮುರಾ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ವಚನ ಝೇಂಕಾರ ಸಮಾರಂಭ ನಡೆಯಲಿದ್ದು, ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸಂವಾದ ನಡೆಸಿಕೊಡಲಿದ್ದಾರೆ. 

ಇದನ್ನೂ ಓದಿ: ಚಲಿಸುತ್ತಿದ್ದ ಕಾರಿಗೆ ಬೆಂಕಿ | ಕಾರು ಚಾಲಕ ಸಜೀವ ದಹನ

ಸಿದ್ದಯ್ಯನಕೋಟೆಯ ಶ್ರೀ ಬಸವಲಿಂಗ ಸ್ವಾಮಿಗಳು, ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮಿಗಳು ಸಮ್ಮುಖ ವಹಿಸಲಿದ್ದು, ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಎಸ್.ಎಂ. ಜಾಮದಾರ್, ಉದ್ಯಮಿ ಅನಿತ್‌ಕುಮಾರ್ ಜಿ.ಎಸ್., ಹೆಚ್.ಎನ್.ತಿಪ್ಪೇಸ್ವಾಮಿ, ಕೆ.ಎಂ. ವೀರೇಶ್, ಕೆ.ಸಿ.ನಾಗರಾಜ್, ಜಿ.ಡಿ. ಕೆಂಚವೀರಪ್ಪ ಮುಖ್ಯಅತಿಥಿಗಳಾಗಿ ಭಾಗವಹಿಸುವರು. 

ಸಂಜೆ 4.00 ಗಂಟೆಗೆ ನಡೆಯುವ ಬಸವಸಂಸ್ಕೃತಿ ಅಭಿಯಾನ ಪಾದಯಾತ್ರೆಯನ್ನು ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಉದ್ಘಾಟಿಸುವರು. ಸಂಜೆ 6.00 ಗಂಟೆಗೆ ನಡೆಯುವ ಬಸವಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ ಗದಗ್‌ನ ತೋಂಟದಾರ್ಯಮಠದ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಭಾಲ್ಕಿ ಹಿರೇಮಠದ ಡಾ. ಮ.ಘ.ಚ. ಬಸವಲಿಂಗ ಪಟ್ಟದ್ದವರು ಸಮ್ಮುಖ ವಹಿಸುವರು. 

ಮುಖ್ಯಅತಿಥಿಗಳಾಗಿ ವಿಜಯಪುರ ಡಾ. ಜಿ.ಎಸ್. ಪಾಟೀಲ್, ಈಶ್ವರಖಂಡ್ರೆ, ಪ್ರೊ.ಎಸ್.ಜಿ.ಸಿದ್ಧರಾಮಯ್ಯ, ಕೃಷ್ಣಪ್ಪ, ಟಿ.ಆರ್.ಚಂದ್ರಶೇಖರ್, ಎಚ್.ಎಂ. ಸೋಮಶೇಖರಪ್ಪ, ರವೀಂದ್ರ ಹೊನವಾಡ, ಎಂ.ಎ. ಅರುಣ, ಕೃಪಾಶಂಕರ್, ಶಾಂತಕುಮಾರ್ ಹರ್ಲಾಪುರ ಭಾಗವಹಿಸುವರು.

ಸೆಪ್ಟೆಂಬರ್ 29 ಬೆಳಗ್ಗೆ 10 ಗಂಟೆಗೆ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ, ಉಚಿತ ನೇತ್ರ ತಪಾಸಣೆ, ಚಿಕಿತ್ಸೆ, ನೇತ್ರದಾನ ನೊಂದಣಿ ಕಾರ್ಯವಿರುತ್ತದೆ. ಬೆಳಗ್ಗೆ 11 ಗಂಟೆಗೆ ನಡೆಯುವ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಶ್ರೀ ವಚನಾನಂದ ಮಹಾಸ್ವಾಮಿಗಳು, ಗೌರಿಗದ್ದೆಯ ವಿನಯ್ ಗುರೂಜಿ, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು, ಸಚಿವರಾದ ಸಂತೋಷ್ ಲಾಡ್, ಮಧು ಎಸ್. ಬಂಗಾರಪ್ಪ, ಡಿಐಜಿಪಿ ರವಿ ಡಿ.ಚೆನ್ನಣ್ಣನವರ, ಮಹೇಶ್ ಮಾಸಾಳ್ ಮುಂತಾದವರು ಭಾಗವಹಿಸುವರು. 

ಇದನ್ನೂ ಓದಿ: ಎತ್ತಿನ ಗಾಡಿಗೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಬಸ್‌ | ಅಪಾಯದಿಂದ ಪಾರಾದ ಪ್ರಯಾಣಿಕರು

ಸಂಜೆ 6 ಗಂಟೆಗೆ ಆರೋಗ್ಯ ಮೇಳ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಬಸವ ಮಾಚಿದೇವ ಸ್ವಾಮಿಗಳು, ಶಾಸಕರಾದ ಎಂ. ಚಂದ್ರಪ್ಪ, ಬಿ.ಜಿ. ಗೋವಿಂದಪ್ಪ, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ರವೀಂದ್ರನಾಥ್ ಕೆ.ಎಸ್., ಡಾ.ಸ್ವಾಮಿನಾಥ್ ಜಿ, ಡಾ.ಪ್ರಶಾಂತ್ ಜಿ. ಪಾಲ್ಗೊಳ್ಳುವರು.

ಸೆಪ್ಟೆಂಬರ್ 30ರಂದು ಬೆಳಗ್ಗೆ 7.30ಕ್ಕೆ ಸಹಜ ಶಿವಯೋಗ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಜೋಡೆತ್ತು, ದೇಶಿತಳಿ ಮತ್ತು ಸಾಕುಪ್ರಾಣಿಗಳ ಪ್ರದರ್ಶನ ಮತ್ತು ಸ್ಪರ್ಧೆ ಇರಲಿದೆ.

ಬೆಳಗ್ಗೆ 10.30ಕ್ಕೆ ನಡೆಯುವ ಕೃಷಿ ಮತ್ತು ಕೈಗಾರಿಕಾ ಮೇಳದಲ್ಲಿ ತುಮಕೂರು ಸಿದ್ಧಗಂಗಾಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಗೋಕಾಕ್‌ನ ಶ್ರೀ ಮುರುಘರಾಜೇಂದ್ರ ಸ್ವಾಮಿಗಳು, ಹೊಸದುರ್ಗದ ಶ್ರೀ ಶಾಂತವೀರ ಮಹಾಸ್ವಾಮಿಗಳು ಸಮ್ಮುಖ ವಹಿಸುವರು. 

ಮುಖ್ಯಅತಿಥಿಗಳಾಗಿ ಕೇಂದ್ರ ಸಚಿವ ವಿ.ಸೋಮಣ್ಣ, ರಾಜ್ಯಸಚಿವರಾದ ಎಂ.ಬಿ.ಪಾಟೀಲ್, ಎನ್. ಚೆಲುವರಾಯಸ್ವಾಮಿ, ಡಿ. ಸುಧಾಕರ್, ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಮಾಜಿ ಶಾಸಕ ಮಹಿಮಾ ಜೆ.ಪಟೇಲ್, ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಅಶೋಕ ದಳವಾಯಿ, ಜಿ.ಪಂ. ಸಿಇಓ ಡಾ. ಎಸ್.ಆಕಾಶ್, ಬಿ.ಎನ್. ಲಿಂಗಾರೆಡ್ಡಿ ಮೊದಲಾದವರು ಭಾಗವಹಿಸಲಿದ್ದಾರೆ. 

ಅದೇದಿನ ಮಧ್ಯಾಹ್ನ 2.30ಕ್ಕೆ ನಡೆಯುವ ಕೃಷಿಮೇಳ ಗೋಷ್ಟಿ-2ರಲ್ಲಿ ಡಾ. ಟಿ.ವಿ. ಗಿರೀಶ್, ಡಾ. ದೇವರಾಜರೆಡ್ಡಿ, ವಿವಿಧ ಜಿಲ್ಲೆಗಳ ರೈತಸಂಘದ ಮುಖಂಡರು ಹಾಗೂ ಪದಾಧಿಕಾರಿಗಳು ಭಾಗವಹಿಸುವರು. ಸಂಜೆ 6.00 ಗಂಟೆಗೆ ಮಹಿಳಾ ಸಮಾವೇಶ. ಈ ಸಮಾರಂಭದಲ್ಲಿ ತಿಂಥಿಣಿಯ ಶ್ರೀ ಸಿದ್ಧರಮಾನಂದಪುರಿ ಸ್ವಾಮಿಗಳು, ಹೊಸದುರ್ಗದ ಶ್ರೀ ಜಗದ್ಗುರು ಪುರಷೋತ್ತಮಾನಂದಪುರಿ ಸ್ವಾಮಿಗಳು, ಹರಪನಹಳ್ಳಿ ಶಾಸಕಿ ಶ್ರೀಮತಿ ಲತಾ ಮಲ್ಲಿಕಾರ್ಜುನ್, ಮನೋವೈದ್ಯೆ ಡಾ. ಸೌಜನ್ಯ ವಶಿಷ್ಠ ಮುಂತಾದವರು ಪಾಲ್ಗೊಳ್ಳುವರು.

ಇದನ್ನೂ ಓದಿ: ಪೋಕ್ಸೋ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ

ಅಕ್ಟೋಬರ್ 1 ರಂದು ಬೆಳಗ್ಗೆ 7.30ಕ್ಕೆ ಸಹಜ ಶಿವಯೋಗ, ಬೆಳಗ್ಗೆ 10 ಗಂಟೆಗೆ ವಚನಕಮ್ಮಟ ಪರೀಕ್ಷೆಯ ರ‍್ಯಾಂಕ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ. ಸಂಜೆ 6 ಗಂಟೆಗೆ ಜಾನಪದ ಸಮಾವೇಶ ಹಾಗೂ ಎಸ್.ಜೆ.ಎಂ.ವಿದ್ಯಾಪೀಠ ಅಧೀನದ ಶಾಲಾಕಾಲೇಜುಗಳ ನಿವೃತ್ತ ನೌಕರರ ಸಮಾಗಮ ಕಾರ್ಯಕ್ರಮದ ಸಮ್ಮುಖವನ್ನು ಶ್ರೀ ಮೋಕ್ಷಪತಿ ಮಹಾಸ್ವಾಮಿಗಳು ವಹಿಸುವರು. ಬಿ.ಆರ್. ಪೊಲೀಸ್ ಪಾಟೀಲ್ ವಿಷಯಾವಲೋಕನ ಮಾಡಲಿದ್ದು, ವಿಧಾನಪರಿಷತ್ ಸದಸ್ಯ ಶ್ರೀನಿವಾಸ್ ಡಿ.ಟಿ., ಮಿಮಿಕ್ರಿ ಗೋಪಿ, ಹಿರಿಯ ಪತ್ರಕರ್ತ ಗೌರೀಶ್ ಅಕ್ಕಿ ಪಾಲ್ಗೊಳ್ಳುವರು.

ಅಕ್ಟೋಬರ್ 02 ರಂದು ಬೆಳಗ್ಗೆ 7.30 ಗಂಟೆಗೆ ಸಹಜ ಶಿವಯೋಗ ನಡೆಯಲಿದ್ದು, ಬೆಳಗ್ಗೆ 11 ಗಂಟೆಗೆ ಶರಣಸಂಸ್ಕೃತಿ ಉತ್ಸವ – ಜಾನಪದ ಕಲಾಮೇಳವು ಆರ್.ಹೆಚ್.ಜಿನ್ನಿಂಗ್ ಫ್ಯಾಕ್ಟರಿಯಿಂದ ಹೊರಟು ಬಿ.ಡಿ. ರಸ್ತೆ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ, ಬಸವಮಂಟಪ ರಸ್ತೆ, ರಂಗಯ್ಯನ ಬಾಗಿಲು, ದೊಡ್ಡಪೇಟೆ ಮೂಲಕ ಮೇಲುದುರ್ಗಕ್ಕೆ ಆಗಮಿಸುವುದು. ಮೆರವಣಿಗೆಯಲ್ಲಿ ಧಾರ್ಮಿಕ, ಐತಿಹಾಸಿಕ, ಸಾಮಾಜಿಕ ಪುಣ್ಯಪುರುಷರ ಸ್ತಬ್ಧ ದೃಶ್ಯಗಳು ಹಾಗೂ ವಿವಿಧ ಜನಪದ ಕಲಾತಂಡಗಳು ಭಾಗವಹಿಸುವುವು. 

 ಸಂಜೆ 4 ಗಂಟೆಗೆ ಮೇಲುದುರ್ಗದ ಶ್ರೀ ಮುರುಘಾಮಠದ ಆವರಣದಲ್ಲಿ ಶ್ರೀಗಳಿಗೆ ಭಕ್ತಿ ಸಮರ್ಪಣೆ ನಡೆಯಲಿದೆ. ಸಂಜೆ 6.30 ಗಂಟೆಗೆ ಮಕ್ಕಳ ಸಂಭ್ರಮ ಕಾರ್ಯಕ್ರಮವಿರುತ್ತದೆ.

ಉತ್ಸವದ ಕೊನೆಯ ದಿನ ಅಕ್ಟೋಬರ್ 3ರಂದು ಬೆಳಗ್ಗೆ 8 ಗಂಟೆಗೆ ಸಹಜ ಶಿವಯೋಗ, ಬೆಳಗ್ಗೆ 9.30 ಗಂಟೆಗೆ ಶ್ರೀ ಮುರಿಗೆ ಶಾಂತವೀರ ಸ್ವಾಮಿಗಳವರ ಮೂರ್ತಿಯ ಶೂನ್ಯ ಪೀಠಾರೋಹಣ, ಬೆಳಗ್ಗೆ 11 ಗಂಟೆಗೆ ಧರ್ಮಗುರು ಬಸವಣ್ಣನವರ ಮತ್ತು ಶೂನ್ಯಪೀಠದ ಪ್ರಥಮ ಅಧ್ಯಕ್ಷ ಅಲ್ಲಮ ಪ್ರಭುದೇವರ ಭಾವಚಿತ್ರ ಹಾಗೂ ಪ್ರಾಚೀನ ಹಸ್ತಪ್ರತಿಗಳ ಮೆರವಣಿಗೆ, ಬೆಳಗ್ಗೆ 11.30ಕ್ಕೆ ಶ್ರೀ ಜಯದೇವ ಜಂಗೀಕುಸ್ತಿ, ಸಂಜೆ 6 ಗಂಟೆಗೆ ಶರಣಸಂಸ್ಕೃತಿ ಉತ್ಸವ ಸಮಾರೋಪ ಮತ್ತು ಸಂಗೀತ ಸಂಭ್ರಮ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಹೊಳಲ್ಕೆರೆ | PDO ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

ಸುದ್ದಿಗೋಷ್ಠಿಯಲ್ಲಿ ಶ್ರೀಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಶ್ರೀ ಸಿದ್ಧಬಸವ ಕಬೀರ ಸ್ವಾಮೀಜಿ, ಶ್ರೀ ಬಸವ ಮಹಾಂತ ಸ್ವಾಮೀಜಿ, ಶ್ರೀ ಶಿವಾನಂದ ಸ್ವಾಮೀಜಿ, ಮಾತೆ ಸತ್ಯಕ್ಕ, ಮಾತೆ ಜಯದೇವಿತಾಯಿ, ಮಾತೆ ಚಿನ್ಮಯಿ ತಾಯಿ, ಮಾತೆ ಚಂದ್ರಕಲಾ ತಾಯಿ, ಡಾ.ಹನುಮಲಿ ಷಣ್ಮುಖಪ್ಪ, ಜಿ.ಎಸ್. ಅನಿತ್‌ಕುಮಾರ್, ಪಟೇಲ್ ಶಿವಕುಮಾರ್, ಕೆಇಬಿ ಷಣ್ಮುಖಪ್ಪ, ಎಸ್.ವಿ.ನಾಗರಾಜಪ್ಪ, ಫಾತ್ಯರಾಜನ್, ಪಿ. ವೀರೇಂದ್ರಕುಮಾರ್, ಕೋಗುಂಡೆ ದ್ಯಾಮಣ್ಣ, ಡಿ.ಎಸ್. ಮಲ್ಲಿಕಾರ್ಜುನ್, ಕೆಂಚವೀರಪ್ಪ, ವಿವಿಧ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsInvitation LetterMuruga MathReleaseSharan Culture Festivalಅಹ್ವಾನ ಪತ್ರಿಕೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಡುಗಡೆಮುರುಘಾ ಮಠಶರಣ ಸಂಸ್ಕೃತಿ ಉತ್ಸವ
Share This Article
Facebook Email Print
Previous Article ಈ 5 ಜನರಿಗೆ ಬೆಂಡೆಕಾಯಿ ವಿಷಕಾರಿಯಾಗಿದೆಯಂತೆ
Next Article ಕುರುಬರು ನಾಯಕರಿಗೂ ಎತ್ತಿಕಟ್ಟುವ ಕೆಲಸ ನಡೆಯುತ್ತಿದೆ | ಈಶ್ವರಾನಂದಪುರಿ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
ಮುಖ್ಯ ಸುದ್ದಿ
ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up