
CHITRADURGA NEWS | 21 SEPTEMBER 2025
ಚಿತ್ರದುರ್ಗ: ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಭಾನುವಾರ ಶ್ರೀಮುರುಘರಾಜೇಂದ್ರ ಬೃಹನ್ಮಠದ ಮುರುಗಿಯ ಶ್ರೀ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳ ಲೀಲಾ ವಿಶ್ರಾಂತಿ ಸನ್ನಿಧಾನದಲ್ಲಿ ಎರಡನೇ ದಿನದ ಸಹಜ ಶಿವಯೋಗ ಪ್ರಾತ್ಯಕ್ಷಿಕೆ ನಡೆಯುತು.
ಇದನ್ನೂ ಓದಿ: ಕ್ರೀಡೆಯಲ್ಲಿ ಶ್ರಮಪಟ್ಟರೆ ಸಾಧನೆ ಹೆಚ್ಚು | ಮಾದಾರ ಚನ್ನಯ್ಯ ಶ್ರೀ

ಶಿರಸಂಗಿಯ ಶ್ರೀ ಬಸವಮಹಾಂತ ಸ್ವಾಮೀಜಿ ಮಾತನಾಡಿ, ಅತಿಯಾದರೆ ಅಮೃತವು ವಿಷವಾಗುತ್ತದೆ ಎಂಬ ಅನುಭವದ ಮಾತಿದೆ. ಯಾವುದೇ ಸಂಗತಿ ಅತಿಯಾದರೆ ವಿಷವಾಗುತ್ತದೆ. ಆದ್ದರಿಂದ ಪ್ರತಿಯೊಂದರಲ್ಲೂ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ.
ಒಳ್ಳೆಯ ಹವ್ಯಾಸಗಳನ್ನು ಬೆಳಸಿಕೊಳ್ಳಬೇಕು. ನಮ್ಮ ಒಳ್ಳೆಯ ಹವ್ಯಾಸಗಳು ನಮ್ಮನ್ನು ತಿದ್ದಲಿಕ್ಕೆ ಸಹಕಾರಿಯಾಗುತ್ತವೆ. ಹನ್ನೆರಡನೇ ಶತಮಾನದ ಈ ನಾಡು ಕಂಡಂತಹ ಅಪ್ರತಿಮಾ ಮೇಧಾವಿ ಅನುಭವಮಂಟಪದ ಅಧ್ಯಕ್ಷರಾಗಿದ್ದ ಅಲ್ಲಮಪ್ರಭುಗಳು ಇಷ್ಟಲಿಂಗ ಶಿವಯೋಗ ಪೂಜೆಯನ್ನು ಈ ಜಗತ್ತಿಗೆ ಸಾರಿದರು.
ಮಾನವನ ಬದುಕಿನಲ್ಲಿ ಯಾವುದು ಶಾಶ್ವತ, ಯಾವುದು ಅಶಾಶ್ವತ ಎಂಬುದನ್ನು ವಚನಗಳ ಮೂಲಕ ಇಷ್ಟಲಿಂಗ ಪೂಜೆಯ ಮಹತ್ವವನ್ನು ತಿಳಿಸಿದರು. ಮನುಷ್ಯ ಎಷ್ಟೇ ಸಂಪಾದಿಸಿದ್ದರೂ ಅದನ್ನು ಅನುಭವಿಸಲಿಕ್ಕೆ ಒಳ್ಳೆಯತನವಿರಬೇಕು.
ಜಗತ್ತನ್ನು ಅನುಭವಿಸಲಿಕ್ಕೆ ಒಳ್ಳೆಯ ವಿಚಾರಗಳು, ಒಳ್ಳೆಯ ಚಿಂತನೆಗಳು, ಒಳ್ಳೆಯ ಮನಸ್ಸಿರಬೇಕು ಎಂದು ಶಿವಶರಣರು ಹೇಳಿದ್ದಾರೆ. ನಮ್ಮ ಬದುಕಿನಲ್ಲಿ ಇಷ್ಟಲಿಂಗ ಪೂಜೆ, ಲಿಂಗದೀಕ್ಷೆಯು ಬಹಳ ಮಹತ್ವವಾದವು.
ಇದನ್ನೂ ಓದಿ: ನರೇಂದ್ರ ಮೋದಿ ಜನ್ಮ ದಿನಾಚರಣೆ | ಬಿಜೆಪಿಯಿಂದ ಸೇವಾ ಪಾಕ್ಷಿಕ
ಇಷ್ಟಲಿಂಗ ಪೂಜೆಯಿಂದ ಮನಸ್ಸಿಗೆ ಅಹ್ಲಾದ, ಏಕಾಗ್ರತೆ, ಶಾಂತಿ, ಪ್ರಶಾಂತತೆ ದೊರೆಯುತ್ತದೆ. ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಇಷ್ಟಲಿಂಗ ಪೂಜೆಯ ಮಹತ್ವವನ್ನು ತಿಳಿಸಿಕೊಡಬೇಕು. ಮಕ್ಕಳಿಗೆ ಇಷ್ಟಲಿಂಗ ಪೂಜೆಯಿಂದ ಏಕಾಗ್ರತೆ, ಗ್ರಹಿಕೆ ಶಕ್ತಿ, ನೆನಪಿನ ಶಕ್ತಿ ವೃದ್ಧಿಯಾಗುತ್ತದೆ ಎಂದು ನುಡಿದರು.
ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ವಹಿಸಿದ್ದರು.
ಈ ಸಂದರ್ಭದಲ್ಲಿ ಹರಗುರು ಚರಮೂರ್ತಿಗಳು, ರುದ್ರಮೂರ್ತಿ, ಸದ್ಭಕ್ತರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
